ನೀಟ್‌ಗೆ ಮತ್ತೊಮ್ಮೆ ಪರೀಕ್ಷೆ ನಡೆಸಿ: ಸಚಿವ ಮಧು ಬಂಗಾರಪ್ಪ

By Kannadaprabha News  |  First Published Jun 11, 2024, 8:07 AM IST

ಮನಸ್ಸಿಗೆ ಬಂದಂತೆ ನೀಟ್ ಪರೀಕ್ಷೆ ನಡೆಸಿದ್ದರಿಂದ ಗೊಂದಲ ಉಂಟಾಗಿದೆ. ಇದರಿಂದ ಪ್ರತಿ ಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದ ಸಚಿವ ಮಧು ಬಂಗಾರಪ್ಪ 
 


ಶಿವಮೊಗ್ಗ(ಜೂ.11):  ಈ ಸಲದ ನೀಟ್ ಪರೀಕ್ಷೆಯಲ್ಲಿ ಅವಾಂತರ ನಡೆದಿದ್ದು, ಕೇಂದ್ರ ಸರ್ಕಾರ ಇದನ್ನು ಸರಿಪಡಿಸ ಬೇಕಿದೆ. ತಕ್ಷಣವೇ ಕೇಂದ್ರ ಸರ್ಕಾರ ಮರು ಪರೀಕ್ಷೆ ನಡೆಸಲಿ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಮನಸ್ಸಿಗೆ ಬಂದಂತೆ ನೀಟ್ ಪರೀಕ್ಷೆ ನಡೆಸಿದ್ದರಿಂದ ಗೊಂದಲ ಉಂಟಾಗಿದೆ. ಇದರಿಂದ ಪ್ರತಿ ಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. 

Tap to resize

Latest Videos

undefined

ನಾನು ಸಂಸತ್ತಲ್ಲಿ ‘ನೀಟ್‌ ವಿದ್ಯಾರ್ಥಿಗಳ’ ದನಿ ಆಗುವೆ: ರಾಹುಲ್ ಗಾಂಧಿ

ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ದಿಕ್ಕು ತಪ್ಪಿಸಿದ್ದಾರೆ. ನೀಟ್ ಪರೀಕ್ಷೆಯ ಈ ಅಕ್ರಮ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿದರು.

click me!