ಬೀದಿ ಫೋಕರಿಯೊಬ್ಬ ಮಕ್ಕಳ ಶಿಕ್ಷಣ ನಿರ್ಧರಿಸುವುದು ರಾಜ್ಯದ ದೌರ್ಭಾಗ್ಯವೆಂದ ಕಾಂಗ್ರೆಸ್

By Suvarna News  |  First Published May 24, 2022, 2:00 PM IST

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.


ಬೆಂಗಳೂರು (ಮೇ.24): ಶುದ್ಧ ಬೀದಿ ಫೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು, ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಕುವೆಂಪು ಅಂತವರಿಗೆ, ನಾಡಗೀತೆಗೆ, ನಾಡು ನುಡಿಗೆ ಅವಮಾನಿಸುವ ಈತ ಮಕ್ಕಳ ಕಲಿಕೆಯನ್ನು ನಿರ್ಧರಿಸುವುದಕ್ಕಿಂತ ಬೇರೆ ಅವಮಾನವಿದೆಯೇ? ಎಂದು ಪ್ರಶ್ನಿಸಿದೆ.

 

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ.

ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. pic.twitter.com/0PvGwcL9RM

— Karnataka Congress (@INCKarnataka)

Tap to resize

Latest Videos

ಕನಿಷ್ಠ ಪ್ರಜ್ಞಾವಂತಿಕೆ, ಪ್ರಬುದ್ಧತೆ ಇಲ್ಲದಿರುವ ಈತ ಇನ್ನೆಂತಹಾ ಪಠ್ಯ ಸೇರಿಸಬಹುದು. ಸರ್ಕಾರ ಕೂಡಲೇ ಈತನನ್ನು ಕಿತ್ತು ಹಾಕಬೇಕು ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಒತ್ತಾಯಿಸಿದೆ. ಸುಳ್ಳು ತಜ್ಞ, ಬಿಜೆಪಿಯ ಬಾಡಿಗೆ ಭಾಷಣಕಾರನೊಬ್ಬನ ಬರಹವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಿದ ಸರ್ಕಾರಕ್ಕೆ ಕನಿಷ್ಠ ಮಾರ್ಯಾದೆಯೂ ಇಲ್ಲದಾಗಿದೆ. ಬಿಜೆಪಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಅವರಿಂದ ದೇಶದ್ರೋಹಿ ಬಿರುದು ಪಡೆದವನ ಬರಹವನ್ನು ಪಠ್ಯದಲ್ಲಿ ಅಳವಡಿಸುವುದು ದೇಶದ್ರೋಹವಲ್ಲವೇ?ಎಂದು ಪ್ರಶ್ನಿಸಿದೆ.

Textbook controversy ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಗೂ ರೋಹಿತ್ ಚಕ್ರತೀರ್ಥ ಅಧ್ಯಕ್ಷ

ಶಿಕ್ಷಣ ಸಚಿವರು, ಪಠ್ಯ ಪುಸ್ತಕ ಸಮಿತಿಯ ಫೋಕರಿ ಅಧ್ಯಕ್ಷನನ್ನು ಸಮರ್ಥಿಸುತ್ತಾ ಸಿಇಟಿ ಪ್ರೊಫೆಸರ್ ಆಗಿದ್ದರು ಎಂದಿದ್ದಾರೆ. ಸಿಇಟಿ ಯೂನಿರ್ವಸಿಟಿ ಇದೆಯೇ? ಎಲ್ಲಿದೆ? ಅಥವಾ ವಾಟ್ಸಾಪ್ ಯೂನಿವರ್ಸಿಟಿ ರೀತಿ ಅದೂ ನಿಮ್ಮ ಪ್ರೊಪಗಂಡಾ ಯೂನಿವರ್ಸಿಟಿಯೇ? ಎಂಬುದನ್ನು ಸ್ಪಷ್ಪಪಡಿಸಿದೆ. ಇಲ್ಲವಾದಲ್ಲಿ ಶಿಕ್ಷಣ ಇಲಾಖೆ ಶತಮೂರ್ಖರ ಕೈಯಲ್ಲಿದೆ ಎಂದು ಒಪ್ಪಿಕೊಳ್ಳಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

 

ಶಿಕ್ಷಣ ಸಚಿವರೇ, ಪಠ್ಯ ಪುಸ್ತಕ ಸಮಿತಿಯ ಪೋಕರಿ ಅಧ್ಯಕ್ಷನನ್ನು ಸಮರ್ಥಿಸುತ್ತಾ ಸಿಇಟಿ ಪ್ರೊಫೆಸರ್ ಆಗಿದ್ದರು ಎಂದಿದ್ದೀರಿ.

ಸಿಇಟಿ ಯುನಿವರ್ಸಿಟಿ ಇದೆಯೇ? ಎಲ್ಲಿದೆ? ಅಥವಾ ವಾಟ್ಸಾಪ್ ಯೂನಿವರ್ಸಿಟಿಯ ರೀತಿ ಅದೂ ನಿಮ್ಮ ಪ್ರೊಪೆಗಂಡಾ ಯುನಿವರ್ಸಿಟಿಯೇ?
ಸ್ಪಷ್ಟಪಡಿಸಿ!

ಇಲ್ಲದಲ್ಲಿ ಶಿಕ್ಷಣ ಇಲಾಖೆ ಶತಮೂರ್ಖರ ಕೈಯ್ಯಲ್ಲಿದೆ ಎಂದು ಒಪ್ಪಿಕೊಳ್ಳಿ

— Karnataka Congress (@INCKarnataka)

 

ಜೊತೆಗೆ ಕುವೆಂಪು ಈ ನಾಡಿಗೆ, ದೇಶಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಸ್ಪೂರ್ತಿಯ ಸೆಲೆಯಾದವರು. ಲೇಖಕರ ಪರಿಚಯದಲ್ಲಿ ಸಂಘ ಸಿದ್ದಾಂತ ಪ್ರತಿಪಾದಕರನ್ನು ವಿಜೃಂಭಿಸಿ, ರಾಷ್ಟ್ರಕವಿಯನ್ನು ಕೇವಲವಾಗಿ ಬಿಂಬಿಸಿದ ಬಿಜೆಪಿ ತನ್ನ ಆಂತರ್ಯದಲ್ಲಿನ ಕುವೆಂಪು ದ್ವೇಷವನ್ನು ಅನಾವರಣಗೊಳಿಸಿದೆ. RSSನ ಮುಖವಾಣಿ ಪತ್ರಿಕೆಗಳಂತವನ್ನು ಪಠ್ಯಪುಸ್ತಕವೆಂದು ಒಪ್ಪಲಾಗದು ಎಂದು ಟ್ವೀಟ್ ಮಾಡಿದೆ.

 

ಕುವೆಂಪು ಈ ನಾಡಿಗೆ, ದೇಶಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಸ್ಪೂರ್ತಿಯ ಸೆಲೆಯಾದವರು.

ಲೇಖಕರ ಪರಿಚಯದಲ್ಲಿ
ಸಂಘ ಸಿದ್ದಾಂತ ಪ್ರತಿಪಾದಕರನ್ನು ವಿಜೃಂಭಿಸಿ, ರಾಷ್ಟ್ರಕವಿಯನ್ನು ಕೇವಲವಾಗಿ ಬಿಂಬಿಸಿದ ಬಿಜೆಪಿ ತನ್ನ ಆಂತರ್ಯದಲ್ಲಿನ ಕುವೆಂಪು ದ್ವೇಷವನ್ನು ಅನಾವರಣಗೊಳಿಸಿದೆ.

RSSನ ಮುಖವಾಣಿ ಪತ್ರಿಕೆಗಳಂತವನ್ನು ಪಠ್ಯಪುಸ್ತಕವೆಂದು ಒಪ್ಪಲಾಗದು. pic.twitter.com/jGBnmzsvtZ

— Karnataka Congress (@INCKarnataka)

ಇನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ (Text Book Revision Committee ) ಅಧ್ಯಕ್ಷ ರೋಹಿತ್​​ ಚಕ್ರತೀರ್ಥ (Rohith chakrathirtha) ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ  ಕಿಡಿ ಕಾರಿದ್ದು, ಚಕ್ರತೀರ್ಥ ನೇಮಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲ ಎಂದು ಟ್ವೀಟ್  ಮಾಡಿದ್ದಾರೆ.

Karnataka Textbook controversy ಕುವೆಂಪುಗೆ ಅವಮಾನ ಆರೋಪಕ್ಕೆ ಸಚಿವ ನಾಗೇಶ್ ಗರಂ

2017ರಲ್ಲಿ ಚಕ್ರತೀರ್ಥ ಮಾಡಿದ್ದರು ಎನ್ನಲಾದ ಟ್ವೀಟ್ ಉಲ್ಲೇಖಿಸಿ ಪೋಟೋವೊಂದನ್ನು ಹಾಕಿ " ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು.   ಎಂದು ಟ್ವಿಟ್ಟರ್ ನಲ್ಲಿ ಆಗ್ರಹಿಸಿದ್ದಾರೆ.

click me!