ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಡಾಕ್ಟರೇಟ್ ಪ್ರಧಾನ

By Suvarna News  |  First Published Apr 12, 2022, 8:30 PM IST

ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದ್ದಾರೆ.


ವರದಿ : ನರಸಿಂಹ ಮೂರ್ತಿ ಕುಲಕರ್ಣಿ, ಏಷ್ಯಾನೆಟ್ ಸುವರ್ಣನ್ಯೂಸ್

ಬಳ್ಳಾರಿ (ಏ12): ಉದ್ಯಮಿ ಮತ್ತು ಸಮಾಜ ಸೇವಕರಾದ ನರೇಂದ್ರ ಬಲ್ಡೋಟ ಮತ್ತು ನ್ಯಾಯವಾದಿ ವೀರಶೈವ ಮಹಾಸಭೆಯ ಅಧ್ಯಕ್ಷ ಎನ್. ತಿಪ್ಪಣ್ಣ  ಕನ್ನಡದ ಅರ್ಚಕ ಮತ್ತು ಸಾಹಿತಿ  ಹಿರೆಮಗಳೂರು ಕಣ್ಣನ್, ಅವರಿಗೆ ಬಳ್ಳಾರಿಯ (ballari) ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ (Vijayanagara Sri Krishnadevaraya University) 9ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದ್ರು. ಅನಾರೋಗ್ಯದ ನಿಮಿತ್ತ ಹೀರೆಮಗಳೂರು ಕಣ್ಣನ್ ಮಾತ್ರ ಗೈರಾಗಿದ್ದು, ಉಳಿದಂತೆ ಇಬ್ಬರು ಗಣ್ಯರಿಗೆ ಪದವಿಯನ್ನು ನಿಡಲಾಯಿತು. ವಿವಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆದ 9ನೇ ಘಟಿಕೋತ್ಸವ ಸಮಾರಂಭದಲ್ಲಿ  ಮೂವರಿಗೆ ಗೌರವ ಡಾಕ್ಟರೆಟ್ ಪ್ರಧಾನ ಮಾಡಲಾಯಿತು.

Latest Videos

undefined

ವಸುಧೈವ ಕುಟುಂಬಕಂ: ಭಾರತೀಯ ಶಿಕ್ಷಣ ವ್ಯವಸ್ಥೆಯು ಪ್ರಾಚೀನ ಕಾಲದಿಂದಲೂ "ವಸುಧೈವ ಕುಟುಂಬಕಂ" ತತ್ವಶಾಸ್ತ್ರ್ರದ ಮೇಲೆ ಕೇಂದ್ರೀಕರಿಸಿದೆ ಆದ್ದರಿಂದ ಆಧುನಿಕ ಜ್ಞಾನ, ಮೌಲ್ಯಗಳನ್ನು ಸೇರಿಸುವ ಮೂಲಕ  ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ವೇದಿಕೆಯಲ್ಲಿ  ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹೇಳಿದರು.

ಗಂಡಸ್ತನ ಇದ್ರೆ ಶಾರುಖ್ ಮಗಳಿಗೆ ಹಿಜಾಬ್ ತೋಡಿಸಿ: RSS ಹಣಮಂತ ಮಳಲಿ

ಗುಣಮಟ್ಟದ ಶಿಕ್ಷಣ ಮತ್ತು ಬಲವಾದ ನೈತಿಕ ಮೌಲ್ಯಗಳಿಂದ ಮಾತ್ರ ರಾಷ್ಟ್ರ ನಿರ್ಮಾಣ ಸಾಧ್ಯ  ವಿಶ್ವವಿದ್ಯಾಲಯದಿಂದ ಪಡೆದ ಗುಣಮಟ್ಟದ ಶಿಕ್ಷಣ ಮತ್ತು ಬಲವಾದ ನೈತಿಕ ಅಡಿಪಾಯವು ನಿಮ್ಮ ವೃತ್ತಿಜೀವನವನ್ನು ಯಶಸ್ವಿಯಾಗಿಸುತ್ತದೆ ಮತ್ತು ಜೀವನದ ಹಾದಿಯಲ್ಲಿ ಮುನ್ನಡೆಯಲು ನಿಮಗೆ ಸಹಾಯ ಮಾಡುತ್ತದೆಂದು ವಿದ್ಯಾರ್ಥಿಗಳಿಗೆ  ಹೇಳಿದರು.

ಭಾರತ ಅಭಿವೃದ್ಧಿ ಪಥದತ್ತ ಸಾಗಿದೆ:  ನಮ್ಮ ದೇಶವು ಅಭಿವೃದ್ಧಿಯ ಪಥದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ  ಅವರು ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಸಂಪರ್ಕಿಸುವ ಮೂಲಕ ನವ ಭಾರತವನ್ನು ಮಾಡಲು ಬದ್ಧರಾಗಿದ್ದಾರೆ ಎಂದರು. ಉತ್ತಮ ಶಿಕ್ಷಣವು ಮನಸ್ಸು, ದೇಹ ಮತ್ತು ಆತ್ಮದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ನಂಬಿದ್ದರು ಎಂದು ಮಹಾತ್ಮರನ್ನು ನೆನೆದರು.  

Bidar ಐತಿಹಾಸಿಕ ದೇಗುಲದಲ್ಲಿನ ಮೂರ್ತಿಗಳಿಗೆ ಕಿಡಿಗೇಡಿಗಳಿಂದ ಹಾನಿ

ಚಿನ್ನದ ಭೇಟೆಯಾಡಿದ ವಿದ್ಯಾರ್ಥಿಗಳು: ಈ ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 51 ಚಿನ್ನದ ಪದಕಗಳನ್ನು 42 ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು. ವಿವಿಧ ವಿಭಾಗಗಳ ಒಟ್ಟು 26 ಸಂಶೋಧನಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು. ಎಲ್ಲ ವಿಭಾಗಗಳ ಸ್ನಾತಕ ಪದವಿಯ 61 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 57 ವಿದ್ಯಾರ್ಥಿಗಳು ಸೇರಿ ಒಟ್ಟು 118 ವಿದ್ಯಾರ್ಥಿಗಳಿಗೆ ರ್ಯಾಂಕ್ ಪ್ರಮಾಣ ಪತ್ರಗಳನ್ನು ಈ ಸಂದರ್ಭದಲ್ಲಿ  ವಿತರಣೆ ಮಾಡಲಾಯಿತು.

click me!