ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವ ನಾಗೇಶ್

By Suvarna NewsFirst Published Aug 20, 2021, 7:06 PM IST
Highlights

* ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವ ನಾಗೇಶ್
* ಶಾಲೆಗೆ ಬರಲು ಕೊರೊನಾ ನೆಗೆಟಿವ್ ವರದಿ ಕಡ್ಡಾಯವಲ್ಲ
* ಮೈಸೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ಮೈಸೂರು, (ಆ.20): ವಿದ್ಯಾರ್ಥಿಗಳು ಶಾಲೆಗೆ ಬರಲು ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. 

ಮೈಸೂರಿನಲ್ಲಿ ಇಂದು (ಆ.20)  ಒಂದು ವೇಳೆ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟರೆ ಒಂದು ವಾರ ಆ ತರಗತಿಯನ್ನು ಅಮಾನತು ಮಾಡಲಾಗುತ್ತದೆ. ವಾರದ ಬಳಿಕ ಸ್ಯಾನಿಟೈಸ್ ಮಾಡಿ ಮತ್ತೆ ತರಗತಿ ಆರಂಭ ಮಾಡಲಾಗುತ್ತದೆ ಎಂದು ಹೇಳಿದರು.

1ರಿಂದ 8ನೇ ತರಗತಿ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭಿಸುತ್ತಿದ್ದೇವೆ. ಕೊರೋನಾ ಮಕ್ಕಳ ಮೇಲೆ ಅಂಥ ಪರಿಣಾಮ ಬೀರಲ್ಲ. ಪ್ರಾಣಹಾನಿಯಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

1ರಿಂದ 8ನೇ ತರಗತಿಯನ್ನೂ ಶೀಘ್ರದಲ್ಲೇ ಆರಂಭಿಸುತ್ತೇವೆ.  ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ. ಅಲ್ಲಿಯ ಮಕ್ಕಳಿಗೆ ಪರ್ಯಾಯ ಶಿಕ್ಷಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂತಹ ವಿಧಾನ ರೂಪಿಸಲಾಗುವುದು ಎಂದು ಹೇಳಿದರು.

click me!