* ವಿಶ್ವವಿದ್ಯಾಲಯಗಳಲ್ಲಿ ಸಿಂಡಿಕೇಟ್ ನಿರ್ಣಯಗಳಂತೆ ನಡೆದುಕೊಳ್ಳಬೇಕು
* ಸಿಂಡಿಕೇಟ್ ಸಹ ನ್ಯಾಯಾಲಯದ ಆದೇಶ ಪರಿಪಾಲನೆಗೆ ಒತ್ತು ನೀಡಬೇಕು
* ವಿದ್ಯಾರ್ಥಿಗಳು ಈ ವಿವಾದದಲ್ಲಿ ಸಿಲುಕದೇ ವಿದ್ಯಾರ್ಜನೆಯ ಮೇಲೆ ಗಮನಹರಿಸಬೇಕು
ಬೆಂಗಳೂರು(ಮೇ.29): ಹಿಜಾಬ್ ವಿವಾದ ಸಂಬಂಧ ನ್ಯಾಯಾಲಯವು ತೀರ್ಪು ನೀಡಿದ್ದು, ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಲ್ಲಿ ಮತ್ತೆ ಹಿಜಾಬ್ ವಿವಾದ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿವಾದವನ್ನು ಸಿಂಡಿಕೇಟ್ ಸಭೆಯಲ್ಲಿ ಚರ್ಚೆಸಿ ಬಗೆಹರಿಸಲಾಗಿದೆ. ಹಿಜಾಬ್ ವಿವಾದ ಸಂಬಂಧ ನ್ಯಾಯಾಲಯವು ಆದೇಶ ನೀಡಿದೆ. ಅದನ್ನು ಎಲ್ಲರೂ ಪಾಲಿಸಬೇಕು. ಪಿಯುಸಿಗಳಲ್ಲಿ ಸಿಡಿಸಿ (ಕಾಲೇಜು ಅಭಿವೃದ್ಧಿ ಸಮಿತಿ) ಮತ್ತು ಸಿಡಿಸಿ ಇಲ್ಲದಿರುವ ಕಡೆ ಕಾಲೇಜು ಆಡಳಿತ ಮಂಡಳಿ ಅಥವಾ ಕಾಲೇಜಿನ ಪ್ರಾಂಶುಪಾಲರ ಆದೇಶದಂತೆ ನಡೆಯಬೇಕು ಎಂದು ತಿಳಿಸಿದರು.
Hijab Row: 'ಹಿಜಾಬ್‌ಧಾರಿಗಳಿಗೆ ತರಗತಿ ಪ್ರವೇಶ ಇಲ್ಲ'
ವಿಶ್ವವಿದ್ಯಾಲಯಗಳಲ್ಲಿ ಸಿಂಡಿಕೇಟ್ ನಿರ್ಣಯಗಳಂತೆ ನಡೆದುಕೊಳ್ಳಬೇಕು. ಸಿಂಡಿಕೇಟ್ ಸಹ ನ್ಯಾಯಾಲಯದ ಆದೇಶ ಪರಿಪಾಲನೆಗೆ ಒತ್ತು ನೀಡಬೇಕಾಗುತ್ತದೆ. ವಿದ್ಯಾರ್ಥಿಗಳು ಈ ವಿವಾದದಲ್ಲಿ ಸಿಲುಕದೇ ವಿದ್ಯಾರ್ಜನೆಯ ಮೇಲೆ ಗಮನಹರಿಸಬೇಕು ಎಂದರು.
ಪೀರ್‌ಪಾಷಾ ದರ್ಗಾ ಮತ್ತು ಅನುಭವ ಮಂಟಪದ ಬಗಗೆ ಬರುತ್ತಿರುವ ಹೇಳಿಕೆಗೆ ಉತ್ತರಿಸಿ, ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಇಂತಹ ವಿಷಯಗಳು ಹೇಳಿಕೆಗಳ ಮೇಲೆ ಅಲ್ಲ, ದಾಖಲೆಗಳ ಆಧಾರದ ಮೇಲೆ ಪರಿಶೀಲನೆಯಾಗುತ್ತದೆ ಎಂದು ಹೇಳಿದರು.