ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಗುಡ್‌ ನ್ಯೂಸ್!

By Suvarna NewsFirst Published Jan 14, 2021, 1:05 PM IST
Highlights

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಸಿಬ್ಬಂದಿಗೆ ಗುಡ್‌ ನ್ಯೂಸ್| ಕೊರೋನಾ ಟೆಸ್ಟ್ ವರದಿ ಖಡ್ಡಾಯವಲ್ಲ| ಸೋಂಕಿನ ಲಕ್ಷಣವಿದ್ದರೆ ವರದಿ ಖಡ್ಡಾಯ

ಬೆಂಗಳೂರು(ಜ.14): ಕೊರೋನಾ ಅಬ್ಬರ ಕೊಂಚ ಇಳಿಕೆಯಾದ ಬೆನ್ನಲ್ಲೇ ಕೆಲ ಷರತ್ತುಗಳೊಂದಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಆರಂಭವಾಗಿದ್ದವು. ಇದರಂತೆ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವುದರೊಂದಿಗೆ ಕಾಲೇಜಿಗೆ ತೆರಳುವ ಮುನ್ನ ವಿದ್ಯಾರ್ಥಿ ಹಾಗೂ ಉಪನ್ಯಾಸಕರು ಕೊರೋನಾ ಟೆಸ್ಟ್ ನಡೆಸಿ ನೆಗೆಟಟಿವ್ ವರದಿಯೊಂದಿಗೆ ತೆರಳಬೇಕಾಗಿತ್ತು. ಆದರೀಗ ಈ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಇನ್ನು ಮುಂದೆ ಪಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಹಾಜರಾಗುವ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕೋವಿಡ್ ಟೆಸ್ಟ್ ಮಾಡುವ ಅಗತ್ಯವಿಲ್ಲ ಎಂದಿದೆ.

ಹೀಗಿದ್ದರೂ ಕೊರೋನಾ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಖಡ್ಡಾಯವಾಗಿ ಕೊರೋನಾ ಟೆಸ್ಟ್ ನಡೆಸಬೇಕು. ವಿದ್ಯಾರ್ಥಿಗಳ ಹಾಜರಾತಿ ಶೇ. 50ಕ್ಕಿಂತ ಹೆಚ್ಚಿದ್ದರೆ, ಹೆಚ್ಚುವರಿ ಕೊಠಡಿ ವ್ಯವಸ್ಥೆ ಕಲ್ಪಿಸಬೇಕು ಎಂದಿದ್ದಾರೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದೂ ಉಲ್ಲೇಖಿಸಲಾಗಿದೆ. 

click me!