ಸಂವಿಧಾನ ಆಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಫೋಟೋ ಇಲ್ಲದೇ ಕಾರ್ಯಕ್ರಮ ಆಯೋಜನೆ
ಬೆಂಗಳೂರು(ನ.30): ಬೆಂಗಳೂರು ವಿಶ್ವವಿದ್ಯಾಲಯಲ್ಲಿ ನಡೆದ ಸಂವಿಧಾನ ದಿನ ದಿನಾಚರಣೆ ಕಾರ್ಯಕ್ರಮದಲ್ಲಿ ದೊಡ್ಡ ಹೈಡ್ರಾಮ ನಡೆದಿದೆ. ಸಂವಿಧಾನ ಆಚರಣೆ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಫೋಟೋ ಇಲ್ಲದೇ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಹೀಗಾಗಿ ಅಂಬೇಡ್ಕರ್ ಫೋಟೋ ಇಲ್ಲದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಯುನಿವರ್ಸಿಟಿ ಲಾ ಕಾಲೇಜ್ ಅಂಡ್ ಡಿಪಾರ್ಟ್‌ಮೆಂಟ್ ಆಫ್ ಸ್ಟಡೀಸ್ ಇನ್ ಲಾ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಫೋಟೋ ಇಲ್ಲದೆ ಕಾರ್ಯಕ್ರಮ ಆಯೋಜಿಸಿತ್ತು. ಅಂಬೇಡ್ಕರ್ ಫೋಟೋ ಇಲ್ಲದಕ್ಕೆ ಪಿಎಚ್ಡಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಬಳಿಕ ವಿವಿ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿತ್ತು.
ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ಸಲ್ಲಿ ಎಲ್ಲ ರಸ್ತೆ ಬಂದ್ ಇಲ್ಲ...!
ಗಲಾಟೆ ಬಳಿಕ ಎಚ್ಚೆತ್ತ ವಿವಿ ಆಡಳಿತ ಮಂಡಳಿ ಅಂಬೇಡ್ಕರ್ ಫೋಟೋವಿಟ್ಟು ಗೌರವ ಸಲ್ಲಿಸಿದೆ. ಇದಾದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಲಾ ಕಾಲೇಜಿನ ಪ್ರಿನ್ಸಿಪಲ್ ಅವರು ವಿದ್ಯಾರ್ಥಿಗಳಿಗೆ ಕ್ಷಮೆಯಾಚಿಸಿದ್ದಾರೆ ಅಂತ ತಿಳಿದು ಬಂದಿದೆ. ಈ ಕುರಿತು ಸಂವಿಧಾನ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಫೋಟೋವಿಡುವಂತೆ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.