ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳಿಗೆ ಕೂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ತಿಳಿಸಲಾಗಿದೆ.
ಬೆಂಗಳೂರು(ಅ.05): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್‌ಪಿಜಿ-2024ಕ್ಕೆ ಪ್ರಾಧಿಕಾರದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅ. 7ರ ಮಧ್ಯಾಹ್ನ 2.00 ರವರೆಗೆ ಕಾಲಾವಕಾಶವನ್ನು ವಿಸ್ತರಣೆಗೊಳಿಸಿದೆ.
ಇದುವರೆಗೆ ನೋಂದಣಿ ಮಾಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಇಂದು(ಶನಿವಾರ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುಲ್ಕ ಪಾವತಿಸದಿರುವ ಅಭ್ಯರ್ಥಿಗಳಿಗೆ ಕೂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನೋಂದಣಿ ಮಾಡಲು ಅಥವಾ ಶುಲ್ಕ ಪಾವತಿಸಲು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದೂ ತಿಳಿಸಲಾಗಿದೆ.
ಮೆಡಿಕಲ್, ಇಂಜಿನಿಯರಿಂಗ್ ಸೀಟುಗಳು ಏಕಕಾಲದಲ್ಲಿ ಹಂಚಿಕೆ; ಪ್ರತಿನಿತ್ಯ 2 ಬಾರಿ KEA ವೆಬ್‌ಸೈಟ್‌ಗೆ ಭೇಟಿ ಕೊಡಿ
ಎನ್‌ಎಮ್‌ಸಿ ಅವರ ಸೂಚನೆ ದಿನಾಂಕ 24-07-2023 ರ ಅನ್ವಯ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ಸುತ್ತಿನ ಸೀಟು ಹಂಚಿಕೆಯನ್ನು ಆನ್‌ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದಲೇ ನಡೆಸಲಾಗುವುದರಿಂದ, ನೀಟ್ ಪಿಜಿ 2024 ರಲ್ಲಿ ಅರ್ಹತೆ ಪಡೆದ ಎಲ್ಲಾ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಲ್ಲಿನ ಪಿಜಿ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆಯುವುದಕ್ಕೆ ಅರ್ಹರಾಗಲು ಕೆಇಎ ನಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿ, ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ.
ಮಾಹಿತಿ ತಿದ್ದುಪಡಿಗೆ ಅವಕಾಶ
ಪಿಜಿನೀಟ್-2024 ಸ್ನಾತಕೋತ್ತರ ವೈದ್ಯಕೀಯ ಪ್ರವೇಶಕ್ಕೆ ನೋಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಅ. 5ರ ಸಂಜೆ 5ರಿಂದ ಅ. 7ರ ಸಂಜೆ 6 ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಪಿಜಿನೀಟ್-2024 ಅರ್ಜಿಯಲ್ಲಿ ಡಿಕ್ಲರೇಷನ್ ಮಾಡಿರುವ, ಆದರೆ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕ ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.