ಸಿಇಟಿ ಪರೀಕ್ಷೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಡಿಸಿಎಂ ಅಶ್ವತ್ಥ ನಾರಾಯಣ

By Kannadaprabha NewsFirst Published Jun 5, 2021, 10:24 AM IST
Highlights

* ಅಧಿಕಾರಿಗಳ ಜತೆ ಚರ್ಚಿಸಿ ಸಿಇಟಿ ಪರೀಕ್ಷೆ ತೀರ್ಮಾನ
* ಕೋವಿಡ್‌ ಆತಂಕದ ಕಾರಣದಿಂದಾಗಿ ದ್ವಿತೀಯ ಪಿಯುಸಿ ಮಕ್ಕಳಿಗೆ ಪರೀಕ್ಷೆ ನಡೆಸುವುದು ಬೇಡ 
* ಸಿಇಟಿ ಪರೀಕ್ಷೆ ವಿಚಾರದಲ್ಲಿ ಸರ್ಕಾರದ ನಿಲುವು ಪ್ರಕಟಿಸಲಾಗುವುದು

ಬೆಂಗಳೂರು(ಜೂ.05): ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ನಿರ್ಧಾರವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕೈಗೊಂಡಿದ್ದು, ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸಿಇಟಿ ಪರೀಕ್ಷೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. 

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಆತಂಕದ ಕಾರಣದಿಂದಾಗಿ ದ್ವಿತೀಯ ಪಿಯುಸಿ ಮಕ್ಕಳಿಗೆ ಪರೀಕ್ಷೆ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.

ದ್ವಿತೀಯ PUC ಪರೀಕ್ಷೆ ರದ್ದು, ಜುಲೈ ಅಥವಾ ಆಗಸ್ಟ್‌ನಲ್ಲಿ SSLC ಎಕ್ಸಾಮ್: ಯಾರೂ ಫೇಲ್ ಆಗೋಲ್ಲ

ಈವರೆಗೆ ಪರೀಕ್ಷೆ ವಿಚಾರವಾಗಿ ಗೊಂದಲ ಇದ್ದ ಕಾರಣ ಸಿಇಟಿ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಂಡಿರಲಿಲ್ಲ. ಇದೀಗ ಪರೀಕ್ಷೆ ನಡೆದಿರುವ ಬಗ್ಗೆ ನಿರ್ಧಾರಕ್ಕೆ ಬಂದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು. ಸರ್ಕಾರದ ಮಟ್ಟದಲ್ಲಿಯೂ ಚರ್ಚಿಸಿದ ನಂತರ ಈ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದರು.
 

click me!