ಹಿಜಾಬ್ ಪ್ರಸ್ತಾವನೆ ಎಲ್ಲಿದೆ? ನಾವು ಹಿಜಾಬ್ ಬಗ್ಗೆ ಯೋಚನೆಯೇ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡದು ಮಾಡುತ್ತಿವೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬೆಂಗಳೂರು (ಡಿ.26): ಹಿಜಾಬ್ ಪ್ರಸ್ತಾವನೆ ಎಲ್ಲಿದೆ? ನಾವು ಹಿಜಾಬ್ ಬಗ್ಗೆ ಯೋಚನೆಯೇ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡದು ಮಾಡುತ್ತಿವೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ನಿಷೇಧ ವಾಪಸ್ ಬಗ್ಗೆ ಚರ್ಚೆಗೆ ಬರ್ತಾ ಇದೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಅಷ್ಟೇ . ಅಂತ ಯಾವ ವಿಚಾರವೂ ಇಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ಹಿಜಾಬ್‌ಗೆ ಪ್ರತಿಯಾಗಿ ಕೇಸರಿ ಶಾಲು: ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ
undefined
ಉತ್ತಮ ಬೋಧನೆ ಮಾಡುವ ಪಾಲಿಕೆಶಿಕ್ಷಕರಿಗೆ ಪ್ರಾತಿನಿಧ್ಯ: ಡಿಕೆಶಿ ಭರವಸೆ
ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡುತ್ತಿದ್ದೇವೆ. ಇನ್ನು ಬಿಬಿಎಂಪಿ ಶಾಲೆ ಹಾಗೂ ಕಾಲೇಜುಗಳಲ್ಲಿನ ಅತಿಥಿ ಬೋಧಕರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯತೆ ನೀಡಿ ಮುಂದುವರೆಸಲು ತಿಳಿಸಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಶಿಕ್ಷಕರ ನೇಮಕಾತಿ ಸೆಕ್ಯುರಿಟಿ ಏಜೆನ್ಸಿಗೆ ನೀಡಿರುವ ಹಾಗೂ ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡುತ್ತಿರುವ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರು ಸೋಮವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು.
ಬಿಜೆಪಿಯವರು ಹಿಜಾಬ್ ವಿಚಾರದಲ್ಲಿ ಸಲ್ಲದ ಟೀಕೆ ಬಿಡಿ: ಸಚಿವ ಮಧು ಬಂಗಾರಪ್ಪ
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ. ಬೆಂಗಳೂರಿನ ಅತಿಥಿ ಬೋಧಕರು ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
ಇನ್ನು ಸೆಕ್ಯುರಿಟಿ ಏಜೆನ್ಸಿಯಿಂದ ಶಿಕ್ಷಕರ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೆಕ್ಯುರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ಬಗ್ಗೆ ಪರಿಶೀಲಿಸಲಾಗುವುದು ಎಂದಷ್ಟೇ ಹೇಳಿದರು.