ವೈದ್ಯಕೀಯ, ಡೆಂಟಲ್‌ ಪಿಜಿ ಶುಲ್ಕ ಏರಿಕೆ..?

Kannadaprabha News   | Asianet News
Published : Oct 20, 2020, 07:54 AM IST
ವೈದ್ಯಕೀಯ, ಡೆಂಟಲ್‌ ಪಿಜಿ ಶುಲ್ಕ ಏರಿಕೆ..?

ಸಾರಾಂಶ

ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಪ್ರವೇಶಕ್ಕೆ ಶೇ.35ರಷ್ಟುಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ವೈದ್ಯಕೀಯ ಕಾಲೇಜುಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ

ಬೆಂಗಳೂರು (ಅ.20): ಸ್ನಾತಕೋತ್ತರ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಪ್ರವೇಶಕ್ಕೆ ಶೇ.35ರಷ್ಟುಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ವೈದ್ಯಕೀಯ ಕಾಲೇಜುಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ, 2020-21ನೇ ಸಾಲಿಗೆ ಈ ಕೋರ್ಸ್‌ಗಳ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಸಂಬಂಧ ಸೋಮವಾರ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್‌ ಅವರೊಂದಿಗೆ ನಡೆಸಿದ ಸಭೆಯಲ್ಲಿ ಬೇಡಿಕೆಗಳ ಪ್ರಸ್ತಾವನೆ ಸಲ್ಲಿಸಿವೆ.

ಈ ಕುರಿತು ಮಾತನಾಡಿದ ಖಾಸಗಿ ಕಾಲೇಜುಗಳ ಸಂಘದ ಕಾರ್ಯದರ್ಶಿ ಎಂ.ಆರ್‌. ಜಯರಾಂ, ಸರ್ಕಾರಿ ಕೋಟಾ ಸೀಟುಗಳಿಗೆ ಶೇ.30ರಷ್ಟುಮತ್ತು ಕಾಮೆಡ್‌ ಕೆ ಸೀಟುಗಳಿಗೆ ಶೇ.40ರಷ್ಟುಶುಲ್ಕ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಎಂಜಿನಿಯರಿಂಗ್‌ ಕಾಲೇಜು ಪ್ರವೇಶ 1 ತಿಂಗಳು ವಿಳಂಬ: ನವೆಂಬರಲ್ಲಿ ಡಿಗ್ರಿ ಕಾಲೇಜು ಆರಂಭ! ..

ಶುಲ್ಕ ನಿಗದಿಗೊಳಿಸುವ ಸಂಬಂಧ ಇದೇ ಮೊದಲ ಸಭೆಯಾಗಿರುವುದರಿಂದ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತೀರ್ಮಾನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್‌ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

PREV
click me!

Recommended Stories

ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ