ಸಹಾಯಕ ಪ್ರಾಧ್ಯಾಪಕರ ಹುದ್ದೆ ಹೆಚ್ಚಳಕ್ಕೆ ಆಗ್ರಹಿಸಿ ಮೈಸೂರು ನಗರ ಪಾಲಿಕೆ ಎದುರು ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಪದಾಧಿಕಾರಿಗಳು ಪತ್ರ ಚಳವಳಿ ನಡೆಸಿದರು.
ಮೈಸೂರು (ಸೆ.8): ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹುದ್ದೆಗಳನ್ನು ಹೆಚ್ಚಳಗೊಳಿಸುವಂತೆ ಆಗ್ರಹಿಸಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಪದಾಧಿಕಾರಿಗಳು ಪತ್ರ ಚಳವಳಿ ನಡೆಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಲು ರಾಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ, ಕನ್ನಡ, ಇಂಗ್ಲಿಷ್, ಇತಿಹಾಸ ಮೊದಲಾದ ಒಟ್ಟು 29 ವಿಷಯಗಳಿಗೆ ಸೇರಿದಂತೆ 1,242 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಹಾಕಿ ಸ್ಪರ್ಧಾತ್ಮಕ ಪರೀಕ್ಷೆ ಬರೆದು ತಾತ್ಕಾಲಿಕ ಅಂಕಪಟ್ಟಿಬಿಡುಗಡೆಗೊಳಿಸಿದೆ ಎಂದು ಸಮಿತಿ ಪದಾಧಿಕಾರಿಗಳು ಆರೋಪಿಸಿದರು. ಕರ್ನಾಟಕದಲ್ಲಿ ಈಗಾಗಲೇ 410 ಸರ್ಕಾರಿ ಪದವಿ ಕಾಲೇಜುಗಳಿದ್ದು, ಈ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರ ಜೊತೆಗೆ ನೂತನ ಶಿಕ್ಷಣ ನೀತಿ ಪ್ರಾರಂಭವಾಗಿದೆ. ಅಲ್ಲದೆ ಪ್ರಸ್ತುತ ಪದವಿ ಕಾಲೇಜುಗಳಲ್ಲಿ ಹಲವಾರು ವಿಷಯಗಳಲ್ಲಿ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಲು ಹೆಚ್ಚಿನ ಕಾರ್ಯಭಾರವು ಲಭ್ಯವಿದ್ದು, ಈ ಕಾರ್ಯಭಾರವನ್ನು ತಗ್ಗಿಸಲು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕನಿಷ್ಠ 700 ರಿಂದ 800 ಹುದ್ದೆಗಳನ್ನು ಮೀಸಲಾತಿ ವಯೋಮಿತಿ ಮೀರುತ್ತಿರುವವರನ್ನು ಮಹಿಳಾ ಮೀಸಲಾತಿ ಪ್ರವರ್ಗಗಳನ್ನು ಶ್ರೇಷ್ಠ ಅಂಕಪಡೆದ ಅಭ್ಯರ್ಥಿಗಳನ್ನು ಪರಿಗಣಿಸಿ ನಿಯಮಾನುಸಾರ ಹುದ್ದೆಗಳನ್ನು ಕನಿಷ್ಠ ಒಂದೊಂದು ವಿಷಯದಲ್ಲೂ ಕನಿಷ್ಠ 35 ರಿಂದ 40 ಹುದ್ದೆ ಹೆಚ್ಚಿಸಬೇಕು ಎಂದು ಅವರು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 9 ಸಾವರದಿಂದ 10 ಸಾವಿರ ಪೂರ್ಣಕಾಲಿಕ ಹುದ್ದೆಗಳಿದ್ದು, ಕೇವಲ 1,242 ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದೆ. ನಿರ್ವಹಣಾ ಶಾಸ್ತ್ರ, ವಾಣಿಜ್ಯಶಾಸ್ತ್ರ, ಕನ್ನಡ, ಇಂಗ್ಲಿಷ್, ರಾಸಾಯನಶಾಸ್ತ್ರ ವಿಷಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಈ ವಿಷಯಗಳಲ್ಲೂ ಅಧ್ಯಯನ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ.
ಕಳೆದ 12 ವರ್ಷಗಳಲ್ಲಿ ಎರಡು ಬಾರಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ನಡೆದಿದೆ. 2015ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ 1,298 ಹುದ್ದೆಗೆ ಮತ್ತೆ ಹೆಚ್ಚುವರಿಯಾಗಿ 862 ಹುದ್ದೆಗಳನ್ನು ಸೇರಿಸಲಾಗಿತ್ತು. ಮುಂದಿನ ನೇಮಕಾತಿ ವೇಳೆಗೆ ವಯೋಮಿತಿ ಮೀರಲಿದೆ ಎನ್ನುವುದು ಹುದ್ದೆ ಆಕಾಂಕ್ಷಿಗಳ ಆತಂಕ ಎಂದು ಅವರು ದೂರಿದರು.
ಪ್ರತಿಭಟನೆಯಲ್ಲಿ ಸಮಿತಿ ಗೌರವಾಧ್ಯಕ್ಷ ಎಂ. ಚಂದ್ರಶೇಖರ್, ಅಧ್ಯಕ್ಷ ಜಾಕೀರ್ ಹುಸೇನ್, ದ್ಯಾವಪ್ಪನಾಯಕ, ಪಿ. ರಾಜು, ಎನ್. ಶಿವಪ್ಪ ಮೊದಲಾದವರು ಇದ್ದರು.
ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿಯ ಸರಿಪಡಿಸಿ
ದಾವಣಗೆರೆ: ಶಿಕ್ಷಣ ಕ್ಷೇತ್ರ ಮತ್ತು ವಿದ್ಯಾರ್ಥಿಗಳ ತೀವ್ರ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಜಯದೇವ ವೃತ್ತದಿಂದ ಎಸ್‌ಎಫ್‌ಐ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಕಚೇರಿ ಅಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಲಕ್ಷ್ಮಣ ರಾಮಾವತ್, ಶೈಕ್ಷಣಿಕ, ವಿದ್ಯಾರ್ಥಿಗಳ ಸಮಸ್ಯೆಗಳು ತೀವ್ರವಾಗಿ ಕಾಡಲು ರಾಜ್ಯ ಬಿಜೆಪಿ ಸರ್ಕಾರದ ಶಿಕ್ಷಣ ವಿರೋಧಿ ನೀತಿಗಳು ಕಾರಣ. ಈ ಎಲ್ಲಾ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ರಾಜ್ಯವ್ಯಾಪಿ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ್ದು, ಸರ್ಕಾರ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟುತೀವ್ರತೆ ಪಡೆಯಲಿದೆ ಎಂದರು.
ಸರ್ಕಾರಿ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ವಿದ್ಯಾರ್ಥಿಗಳ ಸಂಖ್ಯೆ ಮತ್ತು ಮಾದರಿ ಶಾಲೆ ನೆಪದಲ್ಲಿ ರಾಜ್ಯದ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದ್ದು ಸರಿಯಲ್ಲ. ಈ ಶೈಕ್ಷಣಿಕ ವರ್ಷದಿಂದ 10 ಲಕ್ಷಕ್ಕೂ ಅಧಿಕ ಮಕ್ಕಳು ಡ್ರಾಪ್‌ಔಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಪಡಿಸಿ, ಶಿಕ್ಷಣ ವ್ಯವಸ್ಥೆ ಬಲಪಡಿಸುವ ಕೆಲಸ ಸರ್ಕಾರ ಮಾಡಲಿ ಎಂದು ಆಗ್ರಹಿಸಿದರು.
ಇನ್ಫೋಸಿಸ್ ಜೊತೆ ಉನ್ನತ ಶಿಕ್ಷಣ ಇಲಾಖೆ ಒಡಂಬಡಿಕೆ, 12300 ಉಚಿತ ಕೋರ್ಸ್
ಪ್ರವೇಶಕ್ಕೆ ಕೌನ್ಸಿಲಿಂಗ್ ಕೈಬಿಡಿ:
ಒಂದು ವೇಳೆ ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ ರಾಜ್ಯದ ಶೇ.31ರಷ್ಟುಗ್ರಾಮಗಳಲ್ಲಿ ಸರ್ಕಾರಿ ಶಾಲೆಯೇ ಇಲ್ಲದಂತಾಗುತ್ತದೆ. ಇದರಿಂದ ಬಡವರು, ತಳ ಸಮುದಾಯಗಳ ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಅಪಾಯವಿದೆ. ಹಾಸ್ಟೆಲ್ ಪ್ರವೇಶಕ್ಕೆ ಕೌನ್ಸಿಲಿಂಗ್ ಕೈಬಿಟ್ಟು, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನೀಡಬೇಕು. ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆ ತೀವ್ರವಾಗಿದೆ. ಹಾಸ್ಟೆಲ್ ಸೀಟಿಗೂ ಬೇಡಿಕೆ ಹೆಚ್ಚುತ್ತಿದೆ. ಸರ್ಕಾರವು ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಹಾಸ್ಟೆಲ್ ಸಂಖ್ಯೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಮಕ್ಕಳ ಆತಂಕಕ್ಕೆ ಪರೀಕ್ಷೆ, ಫಲಿತಾಂಶ ಕಾರಣ: ಎನ್‌ಸಿಇಆರ್‌ಟಿ ಅಧ್ಯಯನ
ಸಮರ್ಪಕವಾಗಿ ನೀಡಿ:
ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಮಾಸಿಕ 1650 ರು. ನೀಡುತ್ತಿದ್ದು, ಅದನ್ನು ಕೇರಳ ಮಾದರಿಯಲ್ಲಿ 3500 ರು.ಗೆ ಹೆಚ್ಚಿಸಬೇಕು. ಶೈಕ್ಷಮಿಕ ಪ್ರೋತ್ಸಾಹ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಬಾಕಿ ಇರುವ ಬೈಸಿಕಲ್, ಸಮವಸ್ತ್ರ, ವಿದ್ಯಾರ್ಥಿ ವೇತನ, ವಿದ್ಯಾಸಿರಿ, ಪಠ್ಯ ಪುಸ್ತಕ, ಫೆಲೋಶಿಪ್ ಮತ್ತಿತರೆ ಶೈಕ್ಷಣಿಕ ಪ್ರೋತ್ಸಾಹ ಯೋಜನೆಗಳನ್ನು ಸರ್ಕಾರ 2 ವರ್ಷದಿಂದ ಉಳಿಸಿದ್ದು, ನಿಗದಿತ ಶೈಕ್ಷಣಿಕ ವೇಳೆಯಲ್ಲೇ ಅವುಗಳನ್ನು ಸಮರ್ಪಕವಾಗಿ ನೀಡಬೇಕು ಎಂದು ತಾಕೀತು ಮಾಡಿದರು.