Food Poisoning: ಕಲುಷಿತ ಆಹಾರ ಸೇವಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಶಾಸಕ ಹರತಾಳು ಹಾಲಪ್ಪ ಭೇಟಿ

By Ravi Janekal  |  First Published Mar 19, 2023, 3:40 PM IST

ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರ ತಾಲೂಕಿನ ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ನಡೆದಿದೆ.


ಶಿವಮೊಗ್ಗ (ಮಾ19) : ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರ ತಾಲೂಕಿನ ಖಾಸಗಿ ಶಾಲೆಯೊಂದರ ಹಾಸ್ಟೆಲ್ ನಲ್ಲಿ ನಡೆದಿದೆ.

ಸಾಗರ ತಾಲೂಕಿನ ಜೋಗ ಪಟ್ಟಣದಲ್ಲಿರುವ ಕ್ರಿಸ್ತ ಪ್ರಕಾಶ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಸಿ ಅಸ್ವಸ್ಥಗೊಂಡವರು. ವಿಷಯ ತಿಳಿದ ಬಳಿಕ ಆಸ್ಪತ್ರೆಗೆ ತಡರಾತ್ರಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಚೇತರಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳು

Latest Videos

undefined

ಕ್ರಿಸ್ತ ಪ್ರಕಾಶ ವಸತಿ ಶಾಲೆಯಲ್ಲಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಆಹಾರ ಸೇವಿಸಿದ ಬಳಿಕ ಫುಡ್‌ಪಾಯ್ಸನ್ ಆಗಿ ತೀವ್ರ ಅಸ್ವಸ್ಥರಾಗಿದ್ದಾರೆ. ಹೊಟ್ಟೆ ನೋವು, ಭೇದಿಯಿಂದ ನರಳಿರುವ ವಿದ್ಯಾರ್ಥಿಗಳು. ಬಳಿಕ ಸಾಗರ ಉಪವಿಭಾಗೀಯ ಅಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. 

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಹಾಲಪ್ಪ:

ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ  ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಅವರು ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದೂ ಹೆಚ್ಚಿನ ನಿಗಾವಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಬಳಿಕ ಮಕ್ಕಳ ಆರೋಗ್ಯ ವಿಚಾರಿಸಿ, ಪೋಷಕರಿಗೆ ಧೈರ್ಯ ತುಂಬಿದ ಶಾಸಕರು. 

ಸದ್ಯ ಮಕ್ಕಳ ಜೀವಕ್ಕೆ ಯಾವುದೇ ಅಪಾಯವಿಲ್ಲ. ಚಿಕಿತ್ಸೆ ನೀಡಿರುವ ವೈದ್ಯರು. ಯಾವುದೇ ಅಪಾಯವಿಲ್ಲದೆ ಚೇತರಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳು.

Mangaluru: ಫುಡ್ ಪಾಯ್ಸನ್‌ಗೆ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

click me!