ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಂಡ್ಯದ ಮೊಹಮ್ಮದ್ ಹುಸೇನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರು/ಮಂಡ್ಯ(ಮಾ.16): ಶಿಕ್ಷಣ (Education) ಮತ್ತು ಧರ್ಮ (Religion) ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು ಕುರಿತು ಮಂಡ್ಯದ ವಿದ್ಯಾರ್ಥಿ ಮುಸ್ಕಾನ್ ಖಾನ್ (Muskan Khan) ಅವರ ತಂದೆ ಮೊಹಮ್ಮದ್ ಹುಸೇನ್ ಖಾನ್ (Mohammed Husain Khan) ಅವರು ಹೇಳಿದ್ದಾರೆ.
ಕೆಲ ವಾರಗಳ ಹಿಂದೆ ಹಿಜಾಬ್ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಕೇಸರಿ ವಸ್ತ್ರ ಧರಿಸಿದ್ದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದು, ಈ ವೇಳೆ ಒಂಟಿಯಾಗಿ ತೆರಳುತ್ತಿದ್ದ ಮುಸ್ಕಾನ್ ಖಾನ್ ಅವರು, ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದರು. ಈ ಘಟನೆ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು.
ನ್ಯಾಯಾಲಯದ ತೀರ್ಪಿಗೂ ಮುನ್ನ ಮಾತನಾಡಿದ್ದ ಮುಸ್ಕಾನ್ ಅವರು, ಸಂವಿಧಾನ ಮತ್ತು ನ್ಯಾಯಾಲಯದ ಮೇಲೆ ನಂಬಿಕೆಯಿದ್ದು, ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆಂದು ಹೇಳಿದ್ದರು. ಆದರೆ, ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.
ಕೆಲವೇ ದಿನಗಳಲ್ಲಿ ತಮ್ಮ ತಪ್ಪು ಅರ್ಥೈಯಿಸಿಕೊಂಡು ಶಾಲೆಗೆ ಬರ್ತಾರೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಆದರೆ, ಮುಸ್ಕಾನ್ ಅವರ ತಂದೆ ಪ್ರತಿಕ್ರಿಯೆ ನೀಡಿದ್ದು, ‘ಹೈಕೋರ್ಟ್ ತೀರ್ಪಿನ ಕುರಿತಂತೆ ನಮ್ಮ ಹಿರಿಯರು ಕುಳಿತುಕೊಂಡು ತೀರ್ಮಾನ ಕೈಗೊಳ್ಳಲಿದ್ದಾರೆ. ಹಿಜಾಬ್ ತೀರ್ಮಾನವಾದ ನಂತರ ನಾವು ನಮ್ಮ ಮಗಳನ್ನು ಕಾಲೇಜಿಗೆ ಕಳುಹಿಸಿಲ್ಲ. ಮಾರ್ಚ್ 24ರಿಂದ ಪರೀಕ್ಷೆ ಇದ್ದು ಕಾಲೇಜು ಆಡಳಿತ ಮಂಡಳಿ ಜೊತೆಗೆ ಮಾತನಾಡಿ ಪರೀಕ್ಷೆಗೆ ಕಳುಹಿಸುವ ನಿರ್ಧಾರ ಮಾಡುತ್ತೇವೆ’ ಎಂದು ಹೇಳಿದ್ದಾರೆ.
‘ನಮ್ಮ ಹಿರಿಯರು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ತಿಳಿಸಿದ್ದಾರೆ. ನಮಗೆ ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ. ಎರಡನ್ನೂ ಒಟ್ಟಿಗೆ ತೆಗೆದುಕೊಂಡು ನಡೆಯಬೇಕು. ಗೊಂದಲ ಬೇಡ, ಒಳ್ಳೆಯ ತೀರ್ಮಾನ ಆಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.
'Karnataka Hijab Verdict ಉತ್ತಮ ವಾತಾವರಣ ನಿರ್ಮಾಣವಾಗಲಿ ಎಂದು ಆಶಿಸುವೆ'
ಕೆಲವೇ ದಿನಗಳಲ್ಲಿ ತಮ್ಮ ತಪ್ಪು ಅರ್ಥೈಯಿಸಿಕೊಂಡು ಶಾಲೆಗೆ ಬರ್ತಾರೆ: ಹೈಕೋರ್ಟ್ ತೀರ್ಪಿನಿಂದಾಗಿ ವಿದ್ಯಾರ್ಥಿನಿಯರಿಗೆ ಅಸಮಾಧಾನ ಉಂಟಾಗಿರುತ್ತದೆ. ತಮ್ಮ ತಪ್ಪು ಅರ್ಥೈಸಿಕೊಂಡು ಶಾಲೆಗೆ ಬರ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (Education Minister BC Nagesh) ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಕೋರ್ಟ್ ಗೆ ಹೋದವರಿಗೆ ನಿನ್ನೆ ತೀರ್ಪು ಬಂದಿದೆ. ಅವರ ಪರವಾಗಿ ತೀರ್ಪು ಬಂದಿಲ್ಲ. ಹೀಗಾಗಿ ಅಸಮಾಧಾನ ಆಗಿರುತ್ತೆ. ಮುಂದೆ ಕೆಲವೇ ದಿನಗಳಲ್ಲಿ ತಮ್ಮ ತಪ್ಪು ಅರ್ಥೈಯಿಸಿಕೊಂಡು ಶಾಲೆಗೆ ಬರ್ತಾರೆ. ಮೊದಲಿನಂತೆ ಸ್ಕೂಲ್ ಯೂನಿಫಾರಂ ಹಾಕಿಕೊಂಡು ಶಾಲೆಗೆ ಆಗಮಿಸುತ್ತಾರೆ ಎಂದು ಹೇಳಿದರು.
ವಿದ್ಯಾರ್ಥಿಗಳ ಹಿಂದೆ ಕಾಣದ ಕೈಗಳ ಕೈವಾಡ ಇರುವ ವಿಚಾರದ ಕುರಿತು ಹೈಕೋರ್ಟ್ ಉಲ್ಲೇಖಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಗೃಹ ಇಲಾಖೆ ವ್ಯಾಪ್ತಿಗ ಬರುತ್ತೆ. ಅವರು ತನಿಖೆ ಮಾಡಿದಾಗ ಎಲ್ಲವೂ ಗೊತ್ತಾಗುತ್ತೆ ಎಂದು ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.
NIT KARNATAKA RECRUITMENT 2022: ಸಮ್ಮರ್ ಇಂಟರ್ನ್‌ಶಿಪ್ ಗೆ NIT ನೇಮಕಾತಿ
ಸಮವಸ್ತ್ರ ಕುರಿತ ಗೊಂದಲಗಳಿಗೆ ಹಿಜಾಬ್ ತೀರ್ಪಿನಿಂದ ತಿದ್ದುಪಡಿ: ಶಾಲೆ - ಕಾಲೇಜುಗಳಲ್ಲಿ ಹಿಜಾಬ್ (Hijab) ನಿಷೇಧ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ (High court) ತೀರ್ಪು ಎತ್ತಿ ಹಿಡಿದಿದೆ. ಹಿಜಾಬ್ ಅನ್ನುವುದು ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ (B.C Nagesh) ಹೇಳಿದ್ದಾರೆ.
ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈಕೋರ್ಟ್ (Karnataka High court) ನೀಡಿರುವ ಐತಿಹಾಸಿಕ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ನೆಲ ಹಾಗೂ ನೆಲದ ಕಾನೂನು ಅಂತಿಮ ಎಂದು ಹೇಳಿದ್ದಾರೆ.