ಕರ್ನಾಟಕದಲ್ಲಿ ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ.
ಬೆಂಗಳೂರು, (ಸೆ.30): ಕೋವಿಡ್- 19 ಸೋಂಕು ಹರಡುವಿಕೆ ರಾಜ್ಯದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು (ಬುಧವಾರ) ಸುತ್ತೋಲೆ ಹೊರಡಿಸಿದೆ. ಈ ಹಿಂದೆ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಮಾರ್ಗಸೂಚಿ ನೀಡಿತ್ತು.
ವಿದ್ಯಾರ್ಥಿಗಳೇ ಗಮನಿಸಿ: ತರಗತಿ ಆರಂಭದ ಬಗ್ಗೆ ಹೊಸ ಮಾರ್ಗಸೂಚಿ ಪ್ರಕಟ...!
ಆಗಸ್ಟ್ 29ರ ಮಾರ್ಗಸೂಚಿಯಂತೆ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಿತ್ತು.
ಆದರೆ ರಾಜ್ಯದಲ್ಲಿ ಪ್ರಸ್ತುತ ಹಂತದಲ್ಲಿಯೂ ಪ್ರಮಾಣ ಕಡಿಮೆಯಾಗದ ಕಾರಣ ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ವ್ಯಕ್ತವಾದ ಹಿನ್ನಲೆಯಲ್ಲಿ ಅಕ್ಟೋಬರ್ 15ರವರೆಗೆ ರಾಜ್ಯದ ಶಾಲಾ-ಕಾಲೇಜು ಪ ಬ್ರೇಕ್ ಹಾಕಲಾಗಿದೆ.