* ಇಂದು (ಬುಧವಾರ) ಚಿತ್ರದುರ್ಗದಲ್ಲಿ ಶಿಕ್ಷಣ ಸಚಿವ BC ನಾಗೇಶ್ ಸುದ್ದಿಗೋಷ್ಠಿ
* ಶಾಲೆ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಪ್ರತಿಕ್ರಿಯೆ
* 1ರಿಂದ 8ನೇ ತರಗತಿಗಳ ಪ್ರಾರಂಭಿಸುವ ಬಗ್ಗೆ ಸ್ಪಷ್ಟನೆ ಕೊಟ್ಟ ನಾಗೇಶ್
ಚಿತ್ರದುರ್ಗ (ಆ.18): ರಾಜ್ಯದಲ್ಲಿ 9ರಿಂದ 12ನೇ ತರಗತಿ ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಇದೇ. ಆ.23ರಿಂದ ಕ್ಲಾಸ್‌ಗಳು ಪ್ರಾರಂಭವಾಗಲಿವೆ. ಅದಕ್ಕೆ ಮಾರ್ಗಸೂಚಿ ಸಹ ಪ್ರಕಟಿಸಲಾಗಿದೆ.
ಇನ್ನು 1ರಿಂದ 8ನೇ ತರಗತಿಗಳ ಪ್ರಾರಂಭಿಸುವ ಬಗ್ಗೆ ಇಂದು (ಬುಧವಾರ) ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ನಾಗೇಶ್, ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9, 10 ಹಾಗೂ ಪಿಯು ತರಗತಿ ಆರಂಭಿಸಲಾಗುತ್ತಿದೆ. ಇದರ ಯಶಸ್ಸು ನೋಡಿಕೊಂಡು 1 ರಿಂದ 8 ನೇ ತರಗತಿ ಶುರು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಶಾಲೆ ಫುನಾರಂಭ, ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಪೋಷಕರು ಹಾಗು ಮಕ್ಕಳ ಧೈರ್ಯದ ಮೇಲೆ ಶಾಲೆ ತೆರೆಯಲಾಗುತ್ತಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಮಕ್ಕಳ ಮನವೊಲಿಸಲು ಶಿಕ್ಷಕರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಬಲವಂತ ಮಾಡುವುದಿಲ್ಲ. ಪೋಷಕರು ಒಪ್ಪದಿದ್ದರೆ ಆನ್ ಲೈನ್ ತರಗತಿ ಮುಂದುವರಿಸಲಾಗುವುದು. ಈ ಬಗ್ಗೆ ಆತಂಕ ಬೇಡ' ಎಂದು ಹೇಳಿದರು.
ತರಗತಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಒಂದು ವೇಳೆ ಸೋಂಕು ತಗುಲಿದರೆ ಒಂದು ವಾರ ಶಾಲೆ ಬಂದ್ ಮಾಡಲಾಗುವುದು. ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ತೆರೆಯಲಾಗುವುದು. ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಲು ಒಂದೂವರೆ ವರ್ಷದಿಂದ ಪ್ರಯತ್ನಿಸಲಾಗುತ್ತಿದೆ. ಅನ್ ಲೈನ್ ಮೂಲಕ ತರಗತಿ ನಡೆಸಲಾಗುತ್ತಿದ್ದು, ಶೇ.30 ರಿಂದ 40 ರಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಎಂದರು.