
ಬೆಂಗಳೂರು, (ಸೆ.05): ಪ್ರತಿ ವರ್ಷವೂ ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೋನಾದಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಿವೆ. ಹೀಗಾಗಿ ಈ ಬಾರಿ ಶಿಕ್ಷಕರ ದಿನಾಚರಣೆಯ ಸಂಭ್ರಮ ಕಡಿಮೆಯಾಗಿದೆ.
ಆದರೂ, ದೇಶದೆಲ್ಲೆಡೆ ಇಂದು (ಸೆ.05) ಶಿಕ್ಷಕರ ದಿನಾಚರಣೆಯ ಸಂಭ್ರಮ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ-ತಮ್ಮ ಗುರುಗಳಿಗೆ ಶುಭಾಶಯಗಳನ್ನ ತಿಳಿಸಿದ್ದಾರೆ.
ನೆಚ್ಚಿನ ಗುರುವಿಗೆ ಅಚ್ಚುಮೆಚ್ಚಾಗೋವಂಥ ಉಡುಗೊರೆ ನೀಡಿ
ಜನನಿ ತಾನೆ ಮೊದಲ ಗುರು
ಹೌದು...ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಮ್ಮ ತಾಯಿಗೆ ಕಾಲು ಮುಗಿದು ಶಿಕ್ಷಕರ ದಿನಾಚರಣೆಯ ಶುಭಾಯ ಕೋರಿದ್ದಾರೆ.
ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸುರೇಶ್ ಕುಮಾರ್, ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು, ಜನನಿಯಿಂದ ಪಾಠ ಕಲಿತ ಜನರು ಧನ್ಯರು ಎಂದು ಬರೆದುಕೊಂಡಿದ್ದಾರೆ.