ಶಿಕ್ಷಣ ಉದ್ಯೋಗಕ್ಕೆ ಮಾತ್ರ ಸೀಮಿತವಾಗದಿರಲಿ: ಸಚಿವ ನಾಗೇಶ್‌

By Govindaraj SFirst Published Aug 28, 2022, 12:25 PM IST
Highlights

ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಉದ್ಯೋಗಕ್ಕೆ ಸೀಮಿತವಾಗದೇ ಜ್ಞಾನ ಸಂಪಾದನೆಗೆ ಉಪಯೋಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನುಗ್ಗಿ ಭವಿಷ್ಯದ ಜೀವನವನ್ನು ಕಟ್ಟಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಬೇಕೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು.

ತಿಪಟೂರು (ಆ.28): ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಉದ್ಯೋಗಕ್ಕೆ ಸೀಮಿತವಾಗದೇ ಜ್ಞಾನ ಸಂಪಾದನೆಗೆ ಉಪಯೋಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನುಗ್ಗಿ ಭವಿಷ್ಯದ ಜೀವನವನ್ನು ಕಟ್ಟಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಬೇಕೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದರು. ಹಾಸನದ ಪ್ರತಿಷ್ಠಿತ ಟೈಮ್ಸ್‌ ಸಮೂಹ ಶಿಕ್ಷಣ ಸಂಸ್ಥೆಯು ನಗರದ ಕೆ.ಆರ್‌. ಬಡಾವಣೆಯಲ್ಲಿ ನೂತನವಾಗಿ ಪ್ರಾರಂಬಿಸಿರುವ ಟೈಮ್ಸ್‌ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದಿದ್ದು ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುತ್ತಿದೆ. ವಿದ್ಯಾರ್ಥಿಗಳು ತಾವು ಇಚ್ಚೆಪಟ್ಟವಿಷಯವನ್ನು ಆರಿಸಿಕೊಂಡರೆ ಸಾಧನೆ ಸುಲಭವಾಗಲಿದೆ. ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳತ್ತ ವಿದ್ಯಾರ್ಥಿಗಳು ಗಮನಹರಿಸಬೇಕು. ತರಗತಿಯೊಳಗಿನ ಶಿಕ್ಷಣಕ್ಕಿಂತ ಗ್ರಂಥಾಲಯ, ಪಠ್ಯೇತರ ಚಟುವಟಿಕೆಗಳು, ಪರಿಸರ, ಧರ್ಮ, ನಮ್ಮ ಇತಿಹಾಸವನ್ನು ತಿಳಿದುಕೊಳ್ಳುವಂತಹ ಕೆಲಸದಲ್ಲಿ ವಿದ್ಯಾರ್ಥಿಗಳು ನಿರತರಾಗಬೇಕು ಎಂದರು.

40ರಷ್ಟು ಕಮಿಷನ್‌ ಆರೋಪ ನ್ಯಾಯಾಂಗ ತನಿಖೆಯಾಗಲಿ: ಡಿಕೆಶಿ

ಅಜ್ಞಾನದ ಕತ್ತಲೆಯಿಂದ ಹೊರಬನ್ನಿ: ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಅಪಾರವಾಗಿದೆ. ಈ ನಿಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಮನೆಮಾತಾಗಿರುವ ಟೈಮ್ಸ್‌ ಸಂಸ್ಥೆ ಬೇರೆ ಬೇರೆ ಕಡೆಗಳಲ್ಲಿ ಏಳೆಂಟು ಕಾಲೇಜುಗಳನ್ನು ಅತ್ಯುತ್ತಮವಾಗಿ ನಡೆಸುವ ಮೂಲಕ ಮಕ್ಕಳ ಉಜ್ವಲ ಭವಿಷ್ಯಕ್ಕೆ ಶ್ರಮಿಸುತ್ತಿದೆ ಎಂದರು.

ಟೈಮ್ಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಬಿ.ಕೆ. ಗಂಗಾಧರ್‌ ಮಾತನಾಡಿ, ಒಂದು ಜಿಲ್ಲೆಯಿಂದ ಬಂದು ಮತ್ತೊಂದು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದು ಅಷ್ಟುಸುಲಭದ ಮಾತಲ್ಲ. ನಾವು ಹಣಕ್ಕಾಗಿ ಸಂಸ್ಥೆ ನಡೆಸುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವಂತರನ್ನಾಗಿಸುವುದು ನಮ್ಮ ಧ್ಯೇಯವಾಗಿದೆ. ಮಕ್ಕಳು ಉತ್ತಮ ಶಿಕ್ಷಣ ಪಡೆದು ಇತರರಿಗೆ ಮಾದರಿಯಾಗಿ ಸಾವಿರಾರು ಜನರಿಗೆ ಉದ್ಯೋಗವನ್ನು ಕೊಡುವ ಮಟ್ಟಕ್ಕೆ ಬೆಳೆಯಬೇಕೆಂದು ತಿಳಿಸಿದರು.

ಮೈತ್ರಿ ಸರ್ಕಾರದಲ್ಲೂ ಕಮಿಷನ್‌ ವ್ಯವಹಾರ ನಡೆದಿದೆ: ಎಚ್‌.ಡಿ.ಕುಮಾರಸ್ವಾಮಿ

ಈ ಸಂದರ್ಭದಲ್ಲಿ ಟೈಮ್ಸ್‌ ಸಂಸ್ಥೆ ಗ್ರಾಮೀಣ ಪತ್ರಿಕಾ ವಿತರಕರುಗಳಾದ ಹೊನ್ನವಳ್ಳಿ ನಂಜಪ್ಪ ಹಾಗೂ ಯೋಗೀಶ್‌ ಮತ್ತು ತಡಸೂರಿನ ಯುವ ಸಾವಯವ ಕೃಷಿಕ, ಪರಿಸರ ಪ್ರೇಮಿಯಾದ ಮಾದರಿ ರೈತ ತಡಸೂರು ಯೋಗೀಶ್‌ ಇವರುಗಳನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಆಡಳಿತಾಧಿಕಾರಿ ಕೆ.ಎಲ್‌. ಅನೂಪ್‌, ಪ್ರಾಂಶುಪಾಲ ಬಿ. ಪ್ರದೀಪ್‌, ಉಪನ್ಯಾಸಕರುಗಳಾದ ಯೋಗೀಶ್‌ ಸೇರಿದಂತೆ ಎಲ್ಲ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ವರ್ಗದವರಿದ್ದರು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

click me!