ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೆ 2 ದಿನ ಬದಲು 6 ದಿನ ಮೊಟ್ಟೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

By Kannadaprabha News  |  First Published Jul 15, 2024, 10:47 AM IST

ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಸಲುವಾಗಿ ಅಜೀಂ ಪ್ರೇಂಜಿ ಫೌಂಡೇಶನ್ ನೆರವಿನೊಂದಿಗೆ ಶೀಘ್ರದಲ್ಲೇ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 


ತೀರ್ಥಹಳ್ಳಿ (ಜು.15): ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಸಲುವಾಗಿ ಅಜೀಂ ಪ್ರೇಂಜಿ ಫೌಂಡೇಶನ್ ನೆರವಿನೊಂದಿಗೆ ಶೀಘ್ರದಲ್ಲೇ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ,ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ ಎಂದರು . ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

Latest Videos

140 ಕೋಟಿ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ಮಧು ಬಂಗಾರಪ್ಪ

click me!