ಇಂಜಿನಿಯರಿಂಗ್, ಡಿಪ್ಲೊಮಾ ಪರೀಕ್ಷೆ ಮುಂದೂಡಿಕೆ

By Suvarna NewsFirst Published Apr 26, 2021, 10:42 PM IST
Highlights

ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ  ಜನತಾ  ಕರ್ಫ್ಯೂ  ಹಿನ್ನೆಲೆಯಲ್ಲಿ ರಾಜ್ಯದ ಹಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು, (ಏ.27): ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ಕೊರೋನಾ ಕರ್ಫ್ಯೂ ಜಾರಿ ಹಿನ್ನಲೆಯಲ್ಲಿ‌ ನಾಳೆಯಿಂದ ನಡೆಯಬೇಕಿದ್ದ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

ಕರ್ನಾಟಕ ಲಾಕ್‌ಡೌನ್: ಹಲವು ಪರೀಕ್ಷೆಗಳು ಮುಂದೂಡಿಕೆ

ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೋನಾ ಕರ್ಫ್ಯೂ ವಿಧಿಸಲಾಗಿದೆ. ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

click me!