ಸರ್ಕಾರದ ನಿರ್ದೇಶನ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್.ಬಿರಾದಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗದಗ (ಸೆ.29) : ಸರ್ಕಾರದ ನಿರ್ದೇಶನ ಇಲ್ಲದಿದ್ದರೂ ಪ್ರವಾದಿ ಪೈಗಂಬರರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿದ ಆರೋಪದ ಮೇಲೆ ಗದಗ ತಾಲ್ಲೂಕಿನ ನಾಗಾವಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಬ್ದುಲ್ ಮುನಾಫ್ ಬಿಜಾಪುರ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಸಿದ್ರಾಮಪ್ಪ ಎಸ್.ಬಿರಾದಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶಾಲೆಯ ಒಟ್ಟು 43 ವಿದ್ಯಾರ್ಥಿಗಳಿಗೆ ‘ಮಹನ್ನದ (ಸ) ಎಲ್ಲರಿಗಾಗಿ’ ಹಾಗೂ ‘ಅಂತಿಮ ಪ್ರವಾದಿ ಮಹಮ್ಮದ (ಸ)’ ಪುಸ್ತಕವನ್ನು ಮಕ್ಕಳಿಗೆ ತರಗತಿಯಲ್ಲಿ ವಿತರಿಸಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರಿಗೂ ಮಾಹಿತಿ ನೀಡದೇ ಪ್ರಬಂಧ ಸ್ಪರ್ಧೆ ನಡೆಸಿದ್ದಾರೆ. ಬಹುಮಾನ ನೀಡುವ ಆಮಿಷವನ್ನೂ ಒಡ್ಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾಡಿರುವುದರಿಂದ ಹಾಗೂ ಪ್ರಾಥಮಿಕ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವುದರಿಂದ ಈ ಆದೇಶ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
'ಮೊಹಮ್ಮದ್ ಎಲ್ಲರಿಗಾಗಿ' ಎಂಬ ಪುಸ್ತಕದ 14ನೇ ಪುಟದಲ್ಲಿ ಮತಾಂತರ, ಮದೀನಾ ಮತ್ತುಅಲ್ಲಿನ ಬಹುಸಂಖ್ಯಾತ ಜನ ಮುಸ್ಲಿಂ ಸಂಪ್ರಾದಯವನ್ನು ಒಪ್ಪಿಕೊಂಡು ಆಚರಿಸಿರುವ ಬಗ್ಗೆ ವಿವರಿಸಲಾಗಿದೆ. ಇವೆಲ್ಲ ಧರ್ಮಸೂಕ್ಷ್ಮಗಳಿದ್ದೂ ಒಬ್ಬ ಜವಾಬ್ದಾರಿಯುತ ಶಿಕ್ಷಕನಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಬಾರದಿತ್ತು. ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕೋ ಬೇಡವೋ ಎಂಬ ಬಗ್ಗೆ ಶಾಲಾ ಆಡಳಿತದ ಗಮನಕ್ಕೂ ತಂದಿರುವುದಿಲ್ಲ. ಮೇಲ್ನೋಟಕ್ಕೆ ಇದೊಂದು ದುರುದ್ದೇಶಪೂರ್ವಕವಾಗಿದೆ.
ಮೊಹಮ್ಮದರ ಕುರಿತಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಿದ ವಿಚಾರ ತಿಳಿಯುತ್ತಿದ್ದಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಶಾಲೆಗೆ ನುಗ್ಗಿ ಧರಣಿ ನಡೆಸಿದ್ದರು. ಶಾಲಾ ಮುಖ್ಯ ಶಿಕ್ಷಕನ ಕೂಡಲೇ ಅಮಾನತ್ತುಗೊಳಿಸುವಂತೆ ಆಗ್ರಹಿಸಿದ್ದರು. ಈ ವಿಚಾರದ ಬಗ್ಗೆ ರಾಜ್ಯಾದ್ಯಂತ ಹಿಂದುಪರ ಸಂಘಟನೆಗಳು, ಸಾರ್ವಜನಿಕರಿಂದ ಖಂಡನೆ ವ್ಯಕ್ತವಾಗಿತ್ತು. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಸಾರ್ವಜನಿಕ ಶಿಕ್ಷನ ಇಲಾಖೆ ಮುಖ್ಯ ಶಿಕ್ಷಕನನ್ನು ಅಮಾನತ್ತುಗೊಳಿಸಿದೆ.
Gadag; ಪ್ರವಾದಿ ಪೈಗಂಬರ ಕುರಿತು ಪ್ರಬಂಧ ಏರ್ಪಡಿಸಿದ್ದ ಟೀಚರ್ ಗೆ ಘೇರಾವ್