ವಿದ್ಯಾರ್ಥಿಗಳು ಸೃಜನಾತ್ಮಕ ಚಿಂತನೆಯೊಂದಿಗೆ, ಪ್ರಯೋಗ ಶೀಲತೆಯಿಂದ ಅಧ್ಯಯನ ಮುಂದುವರೆಸಿದಾಗ ಮಾತ್ರ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂಧನಾಥ ಮಹಾಸ್ವಾಮೀಜಿ ಹೇಳಿದರು.
ಚಿಕ್ಕಬಳ್ಳಾಪುರ (ಡಿ.27) : ವಿದ್ಯಾರ್ಥಿಗಳು ಸೃಜನಾತ್ಮಕ ಚಿಂತನೆಯೊಂದಿಗೆ, ಪ್ರಯೋಗ ಶೀಲತೆಯಿಂದ ಅಧ್ಯಯನ ಮುಂದುವರೆಸಿದಾಗ ಮಾತ್ರ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂಧನಾಥ ಮಹಾಸ್ವಾಮೀಜಿ ಹೇಳಿದರು.
ನಗರದ ಹೊರ ವಲಯದ ಎಸ್‌ಜೆಸಿಐಟಿ ಕ್ಯಾಂಪಸ್‌ನ ಆಡಿಟೋರಿಯಂನಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ವಿಭಾಗದ ಬಿಜಿಎಸ್ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭ ಸಾನ್ನಿಧ್ಯ ವಹಿಸಿ ಮಾತನಾಡಿದ ಚುಂಚಶ್ರೀಗಳು, ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯೊಂದಿಗೆ ಹೊಸ ಕೌಶಲಗಳನ್ನು ಬೆಳೆಸಿಕೊಳ್ಳಬೇಕೆಂದರು.\
Kolar: ಒಕ್ಕಲಿಗರ ಮೀಸಲಾತಿ ಶೇ.8ಕ್ಕೆ ಏರಿಸಲು ಹೋರಾಟ: ಚುಂಚಶ್ರೀ
ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ
ಘಟಿಕೋತ್ಸವದ ಮುಖ್ಯ ಭಾಷಣ ಮಾಡಿದ ಟಿಸಿಎಸ್ ಮುಖ್ಯಸ್ಥ ಇ.ಎಸ್. ಚಕ್ರವರ್ತಿ, ಬಿಜಿಎಸ್ ಸಂಸ್ಥೆ ಗ್ರಾಮಾಂತರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಮಾಡುತ್ತಿದ್ದೆ. ಸಾಮಾಜಿಕ ಪರಿವರ್ತನೆಯೊಂದಿಗೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಶಿಕ್ಷಣದಿಂದ ಮಾತ್ರ ಸಾಧ್ಯ, ಇಂತಹ ಜ್ಞಾನ ಸಂಗ್ರಹ ಸದಾ ಬದುಕಿನಲ್ಲಿ ನಿಮ್ಮದಾಗಲಿ ಎಂದು ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಿತ ನುಡಿ ತಿಳಿಸಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿ ಡಾ.ಎನ್. ಶಿವರಾಮರೆಡ್ಡಿ ಮಾತನಾಡಿ, ಮೆದುಳು, ಕೈಗಳು ಹೃದಯದ ಸಮನ್ವಯದಿಂದ ಸಮಾಜಮುಖಿ ಚಿಂತನೆಯೊಂದಿಗೆ ಆತ್ಮಾವಲೋಕನ ಮಾಡಿಕೊಂಡು ಪ್ರತಿಯೊಬ್ಬರೂ ತಮ್ಮ ಕರ್ತವ್ಯ ನಿರ್ವಹಣೆ ಮಾಡಬೇಕು, ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಿ. ಕಲಿತ ವಿದ್ಯೆಯನ್ನು ತಮ್ಮ ಜೀವನಕ್ಕೆ ಬಳಸಿಕೊಳ್ಳುವುದು ಬಹಳ ಮುಖ್ಯವೆಂದರು.
ಚುಂಚಶ್ರೀ ಎದುರು ಕಾಲ ಮೇಲೆ ಕಾಲು ಹಾಕಿದ ಸುರ್ಜೇವಾಲಾಗೆ ಡಿಕೆಶಿ ಪಾಠ!
ಉದ್ಘಾಟನಾ ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಸ್ವಾಗತ, ಪ್ರಾರ್ಥನೆ, ವಂದನಾರ್ಪಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ್ತ ಎಸ್‌ಜೆಸಿಐಟಿ ಕಾಲೇಜಿನ ಪ್ರಾಂಶುಪಾಲರಾದ ಜಿ. ಟಿ. ರಾಜು, ಡೀನ್, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.