ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸರ್ಕಾರಿ ಶಾಲೆಗೆ ಮೊದಲ ರ್‍ಯಾಂಕ್‌..!

By Kannadaprabha NewsFirst Published May 10, 2024, 9:42 AM IST
Highlights

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ನಿವಾಸಿ ಅಂಕಿತಾ ಆರಂಭದಿಂದಲೂ ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದವರು. ಬಡ, ಕೃಷಿಕ ಕುಟುಂಬದಲ್ಲಿ ಜನಿಸಿದ ಅಂಕಿತಾ ಪ್ರಾಥಮಿಕ ಹಂತದಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿ, 'ನಿರಂತರ ಅಧ್ಯಯನ ಹಾಗೂ ಶಿಕ್ಷಕರ ಮಾರ್ಗದರ್ಶನ, ಜತೆಗೆ ತಾಯಿ, ತಂದೆ ಹಾಗೂ ಗುರು-ಹಿರಿಯರ ಆಶೀರ್ವಾದ ನನ್ನ ಸಾಧನೆಗೆ ಸ್ಫೂರ್ತಿ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 

ಮುಧೋಳ(ಮೇ.10):  2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದಿದ್ದಾರೆ. 625 ಅಂಕ ಪಡೆದ ರಾಜ್ಯದ ಏಕೈಕ ವಿದ್ಯಾರ್ಥಿ/ವಿದ್ಯಾರ್ಥಿನಿ ಎನಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ನಿವಾಸಿ ಅಂಕಿತಾ ಆರಂಭದಿಂದಲೂ ಸರ್ಕಾರಿ ಶಾಲೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದವರು. ಬಡ, ಕೃಷಿಕ ಕುಟುಂಬದಲ್ಲಿ ಜನಿಸಿದ ಅಂಕಿತಾ ಪ್ರಾಥಮಿಕ ಹಂತದಿಂದಲೂ ಪ್ರತಿಭಾವಂತ ವಿದ್ಯಾರ್ಥಿನಿ, 'ನಿರಂತರ ಅಧ್ಯಯನ ಹಾಗೂ ಶಿಕ್ಷಕರ ಮಾರ್ಗದರ್ಶನ, ಜತೆಗೆ ತಾಯಿ, ತಂದೆ ಹಾಗೂ ಗುರು-ಹಿರಿಯರ ಆಶೀರ್ವಾದ ನನ್ನ ಸಾಧನೆಗೆ ಸ್ಫೂರ್ತಿ' ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅಂಕಿತಾ 1ರಿಂದ 5ನೇ ತರಗತಿಯ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲೇ ಮುಗಿಸಿ ಬಳಿಕ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ ಪ್ರೌಢಶಿಕ್ಷಣ ಪಡೆದಿದ್ದಾರೆ. ತಂದೆ, ತಾಯಿಯ ಜೊತೆ ಪ್ರಥಮ ರ್ಯಾಂಕ್ ಪಡೆದ ಅಂಕಿತಾ ಕೊಣ್ಣೂರ.

ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78ರಷ್ಟು ಫಲಿತಾಂಶ

ಐಎಎಸ್ ಆಗುವ ಗುರಿ: ಅಂಕಿತಾ

ಹಿಂದಿನ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದು, ಅರ್ಥವಾಗದಪ್ರಶ್ನೆಗಳಿಗೆ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಳ್ಳುತ್ತಿದ್ದೆ. ಹಾಸ್ಟೆಲ್‌ನಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದರಿಂದ ಓದಲು ಮತ್ತಷ್ಟು ಸಮಯ ಸಿಕ್ಕಿತು. ಓದಿರುವ ಎಲ್ಲ ವಿಷಯಗಳನ್ನು ಮನನ ಮಾಡಿಕೊಳ್ಳುತ್ತಿದ್ದೆ. ಹೀಗಾಗಿ ಪರೀಕ್ಷೆ ಬರೆಯಲು ನನಗೆ ಬಹಳ ಸರಳವಾ ಯಿತು. ಪರೀಕ್ಷೆ ಎದುರಿಸುವುದಕ್ಕೆ ಅಷ್ಟೇನೂ ಭಯ ಅನಿಸಲಿಲ್ಲ. ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿಕೊಂಡು ಐಎಎಸ್ ಅಧಿಕಾರಿ ಆಗಬೇಕೆಂಬ ಕನಸು ಹೊಂದಿದ್ದೇನೆ ಎಂದು ತನ್ನ ಮುಂದಿನ ಗುರಿಯನ್ನು ಬಿಚ್ಚಿಟ್ಟರು ಅಂಕಿತಾ.

ಸಿಎಂ ಸಿದ್ದು ಅಭಿನಂದನೆ

ವಿದ್ಯಾರ್ಥಿನಿ ಅಂಕಿತಾಸಾಧನೆಗೆ ಸಿಎಂಸಿದ್ದರಾಮಯ್ಯ ಸೇರಿದಂತೆ ನಾನಾ ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಲ್ಲದೆ, ಭವಿಷ್ಯ ಉತ್ತ ಮವಾಗಿರಲಿ ಎಂದುಹಾರೈಸಿ ದ್ದಾರೆ. ಅಂಕಿತಾ ಸಾಧನೆ ಕುರಿತು ಟ್ವಿಟ್ ಮಾಡಿರುವ ಸಿದ್ದರಾಮಯ್ಯ, '2023- 24ನೇ ಸಾಲಿನ ಎಸ್.ಎಸ್. 5. ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆಯ ಅಂಕಿತಾಗೆ ತುಂಬುಹೃದಯದ ಅಭಿನಂದನೆಗಳು. 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿರುವ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಫೂರ್ತಿಯಾಗಲಿದೆ. ಅಂಕಿತಾಳ ಶೈಕ್ಷಣಿಕ ಬದುಕು ಮುಂದೆಯೂ ಸಾಧನೆಗಳಿಂದ ಕೂಡಿರಲಿ, ಈಕೆ ಸಮಾಜಕ್ಕೆ ಬಹುದೊಡ್ಡ ಆಸ್ತಿಯಾಗಿ ಬೆಳೆಯಲಿ ಎಂದು ಹಾರೈಸುತ್ತೇನೆ' ಎಂದಿದ್ದಾರೆ. 

click me!