ಗುಡ್ ನ್ಯೂಸ್ : ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌

By Kannadaprabha NewsFirst Published Sep 17, 2020, 9:04 AM IST
Highlights

ಪರೀಕ್ಷೆಗೆಂದು ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡಲಾಗುತ್ತದೆ. ಕೆಎಸ್‌ಆರ್‌ಟಿಸಿ , ಬಿಎಂಟಿಸಿಯಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಬೆಂಗಳೂರು (ಸೆ.17): ರಾಜ್ಯದಲ್ಲಿ ಸೆಪ್ಟಂಬರ್‌ 21 ರಿಂದ ನಡೆಯುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲ ನಿಗಮಗಳ ಸಾರಿಗೆ ಬಸ್‌ಗಳಲ್ಲಿ ಅವಕಾಶ ನೀಡಲಾಗಿದೆ. 

ವಿದ್ಯಾರ್ಥಿಗಳು ಪರೀಕ್ಷಾ ದಿನದಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ...

ಕೊರೋನಾ ಹಿನ್ನೆಲೆಯಲ್ಲಿ ಸಾರಿಗೆ ಸಂಪರ್ಕ ಹಾಗೂ ಶಿಕ್ಷಣ ವ್ಯವಸ್ಥೆ ಮೇಲೆ ಪರಿಣಾಮ ಉಂಟಾಗಿದ್ದು, ಇದೀಗ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ನೀಡಲಾಗುತ್ತಿದೆ. 

click me!