Karnataka Darshan Tour: ಎಸ್ಸಿ, ಎಸ್ಟಿ ಮಕ್ಕಳಿಗೆ ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

Published : Sep 17, 2022, 09:10 AM IST
Karnataka Darshan Tour: ಎಸ್ಸಿ, ಎಸ್ಟಿ ಮಕ್ಕಳಿಗೆ ಉಚಿತ ‘ಕರ್ನಾಟಕ ದರ್ಶನ’ ಪ್ರವಾಸ

ಸಾರಾಂಶ

ಸರ್ಕಾರ ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಪ್ರವಾಸ ಕಾರ್ಯಕ್ರಮ ರೂಪಿಸಿರುವುದಕ್ಕೆ 2019ರಲ್ಲಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಎಚ್ಚೆತ್ತುಕೊಂಡಿದ್ದ ಸರ್ಕಾರ ಎಲ್ಲ ಸಮುದಾಯದ ಮಕ್ಕಳಿಗೂ ಕರ್ನಾಟಕ ದರ್ಶನ ಪ್ರವಾಸ ವಿಸ್ತರಿಸಿತ್ತು.

ಬೆಂಗಳೂರು(ಸೆ.17):   ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಎಸ್ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ‘ಕರ್ನಾಟಕ ದರ್ಶನ’ ಎಂಬ ಉಚಿತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿದೆ. ಕೋವಿಡ್‌ ಕಾರಣದಿಂದ ಕಳೆದ 2 ವರ್ಷದಿಂದ ಸ್ಥಗಿತಗೊಂಡಿದ್ದ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಈ ವರ್ಷ ಮತ್ತೆ ಆರಂಭಿಸಲಾಗಿದೆ. ಪ್ರತಿ ತಾಲೂಕಿನಿಂದ 4 ದಿನಗಳ ಪ್ರವಾಸಕ್ಕೆ ಒಂದು ಬಸ್‌ ಸೌಲಭ್ಯ ಕಲ್ಪಿಸಲಾಗಿದ್ದು 50 ವಿದ್ಯಾರ್ಥಿಗಳು ಮತ್ತು ಅವರ ಜೊತೆ ಇಬ್ಬರು ಶಿಕ್ಷಕರು, ಅಧಿಕಾರಿಗಳು, ಡ್ರೈವರ್‌, ಗೈಡ್‌ ಸೇರಿ 55 ಜನರಿಗೆ ಅವಕಾಶ ನೀಡಲಾಗಿದೆ.

8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲ ಎಸ್ಸಿ,ಎಸ್ಟಿ ಮಕ್ಕಳಿಗೂ ಈ ಉಚಿತ ಪ್ರವಾಸ ಯೋಜನೆ ಲಭ್ಯವಾಗುವುದಿಲ್ಲ. ಸೀಮಿತ ಸಂಖ್ಯೆಯ ಮಕ್ಕಳಿಗೆ ಮಾತ್ರ ಅವಕಾಶ ದೊರೆಯಲಿದೆ. ಪ್ರತಿ ಜಿಲ್ಲೆಯಲ್ಲಿ ಸುಮಾರು 200ರಿಂದ 300 ಮಕ್ಕಳನ್ನು ಮಾತ್ರ ಆಯ್ಕೆ ಮಾಡಲು ಸೂಚಿಸಲಾಗಿದೆ.

Bengaluru: ಬಿಬಿಎಂಪಿ ಬಸ್‌ನಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠ..!

ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಪ್ರತಿಭಾ ಕಾರಂಜಿಯಲ್ಲಿ, ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಅವಕಾಶ ನೀಡಬೇಕು. 7ನೇ ತರಗತಿಯಲ್ಲಿ ಎ+, ಎ ಗ್ರೇಡ್‌ ಪಡೆದವರನ್ನು ಆಯ್ಕೆ ಪಟ್ಟಿಯಲ್ಲಿ ಪರಿಗಣಿಸಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕ್ರೈಸ್‌ ವಸತಿ ಶಾಲೆಗಳಲ್ಲಿ ಓದುತ್ತಿರುವ ಎಸ್ಸಿಎಸ್ಟಿಮಕ್ಕಳನ್ನೂ ಸೇರಿಸಿ ಪಟ್ಟಿತಯಾರಿಸಬೇಕೆಂದು ಸೂಚಿಸಲಾಗಿದೆ.

2019ರಲ್ಲೇ ವಿವಾದವಾಗಿತ್ತು:

ಸರ್ಕಾರ ಕೆಲ ಸಮುದಾಯದ ಮಕ್ಕಳಿಗೆ ಮಾತ್ರ ಪ್ರವಾಸ ಕಾರ್ಯಕ್ರಮ ರೂಪಿಸಿರುವುದಕ್ಕೆ 2019ರಲ್ಲಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಎಚ್ಚೆತ್ತುಕೊಂಡಿದ್ದ ಸರ್ಕಾರ ಎಲ್ಲ ಸಮುದಾಯದ ಮಕ್ಕಳಿಗೂ ಕರ್ನಾಟಕ ದರ್ಶನ ಪ್ರವಾಸ ವಿಸ್ತರಿಸಿತ್ತು.

ಮೂಲಗಳ ಪ್ರಕಾರ, ಬೆಂಗಳೂರು ನಗರದಿಂದ 361, ಬೆಂ.ಗ್ರಾಮಾಂತರ 100, ರಾಮನಗರ 198, ಚಿತ್ರದುರ್ಗ 332, ದಾವಣಗೆರೆ 215, ಕೋಲಾರ 253, ಚಿಕ್ಕಬಳ್ಳಾಪುರ 367, ತುಮಕೂರು 416 ಎಸ್ಸಿ,ಎಸ್ಟಿ ಮಕ್ಕಳ ಆಯ್ಕೆಗೆ ಸೂಚಿಸಲಾಗಿದೆ. ಇದೇ ರೀತಿ ಇತರೆ ಜಿಲ್ಲೆಗಳಲ್ಲೂ ಮಕ್ಕಳ ಆಯ್ಕೆಗೆ ಅಲ್ಲಿನ ಡಿಡಿಪಿಐಗಳಿಗೆ ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ ಎಂದು ತಿಳಿದು ಬಂದಿದೆ.
 

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ