ಕೆಎಸ್ಆರ್‌ಟಿಸಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ಹಾಜರಾಗಲು ಉಚಿತ ಬಸ್‌ ಸೌಲಭ್ಯ

Published : Mar 04, 2023, 11:12 PM IST
ಕೆಎಸ್ಆರ್‌ಟಿಸಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗೆ ಹಾಜರಾಗಲು ಉಚಿತ ಬಸ್‌ ಸೌಲಭ್ಯ

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.   

ವರದಿ: ವಿದ್ಯಾಶ್ರೀ, ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಬೆಂಗಳೂರು

ಬೆಂಗಳೂರು (ಮಾ.04): ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೌದು! ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಾರ್ಚ್ 9ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ, ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿದೆ. 

ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಗಳು ಹೊರತಾಗಿ ಇತರ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ನಿಯೋಜನೆಯಾಗಿದೆ. ಹಿನ್ನಲೆ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕೆಎಸ್ಆರ್ಟಿಸಿ ನಿಗಮಕ್ಕೆ ಕೋರಿಕೊಂಡಿತ್ತು. 

ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕೆಎಸ್ಆರ್‌ಟಿಸಿ ನಿಗಮವು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು  ಅಂದರೆ ಮಾರ್ಚ್ 9ರಿಂದ ಮಾರ್ಚ್ 29ರವರೆಗೆ ಬಸ್‌ನಲ್ಲಿ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದು,  ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪಯಾಣಿಸಲು ಅವಕಾಶ ಕಲ್ಪಿಸಲಾಗಿದೆ. 

500 ರೂ. ನೀಡಿ ಜನರ ಕರೆಸ್ಬೇಕು: ಸಿದ್ದರಾಮಯ್ಯ ವಿಡಿಯೋ ವೈರಲ್‌

ಇದರ ಜೊತೆಗೆ ಪರೀಕ್ಷಾ  ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಸಂಚಾರ ಮಾರ್ಗದಲ್ಲಿ, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಸಂಚಾರ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದಲ್ಲಿ, ವಿದ್ಯಾರ್ಥಿಗಳು ಹತ್ತಲು ಹಾಗೂ ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡುವಂತೆ ಸೂಚಿಸಲಾಗಿದೆ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ