ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ

Kannadaprabha News   | Asianet News
Published : Sep 06, 2020, 07:29 AM IST
ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ

ಸಾರಾಂಶ

KSRTC ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ಸೇವೆ ಕಲ್ಪಿಸಲಾಗುತ್ತಿದೆ. ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಅನುಕೂಲತೆ ಕಲ್ಪಿಸಲಾಗುತ್ತದೆ. 

ಬೆಂಗಳೂರು (ಆ.06):  ರಾಜ್ಯದಲ್ಲಿ ಸೆ.7ರಿಂದ 19ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. 

ಪರೀಕ್ಷೆ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಮನೆಯಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದೆ. 

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್​ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ

ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಲವು ರೀತಿಯ ಅನುಕೂಲತೆಯನ್ನು ಒದಗಿಸಿಕೊಟ್ಟಿದ್ದು, ಇದೀಗ ಪರಿಕ್ಷಾರ್ಥಿಗಳಿಗಾಗಿ ಉಚಿತ ಬಸ್ ಸೇವೆ ಒದಗಿಸಲು ಸಿದ್ಧವಾಗಿದೆ. 

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ