ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದ KSRTC

By Suvarna News  |  First Published Mar 18, 2022, 8:45 PM IST

* ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
* ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದ KSRTC
* ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ


ಬೆಂಗಳೂರು, (ಮಾ.19): 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exams) ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ(KSRTC) ಅವಕಾಶ ಮಾಡಿಕೊಟ್ಟಿದೆ.

ಹೌದು..ಇದೇ  ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ(Exam) ಬರೆಯುವ ವಿದ್ಯಾರ್ಥಿಗಳ(Students) ಹಿತದೃಷ್ಟಿಯಿಂದ  ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ ನೀಡಿದೆ.

Tap to resize

Latest Videos

ಮಹತ್ವದ ನಿರ್ಧಾರಕ್ಕೆ ಮುಂದಾದ ಶಿಕ್ಷಣ ಇಲಾಖೆ , SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಪರೀಕ್ಷಾ ಪ್ರವೇಶ ಪತ್ರವನ್ನು(Hall Ticket) ತೋರಿಸುವುದು ಕಡ್ಡಾಯವಾಗಿದ್ದು, ಪರೀಕ್ಷಾ ಕೇಂದ್ರದವರೆಗೆ ನಿಗಮದ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲು ಉಚಿತವಾಗಿ ಪ್ರಯಾಣಿಸಬಹುದು. 

ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುವುದು. ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ ಎಂದು ಕೆಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಮುಖ್ಯಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿವೆ. 

ಅಂತಿಮ ವೇಳಾಪಟ್ಟಿ ಇಂತಿದೆ
ಮಾರ್ಚ್ 28- ಪ್ರಥಮ ಭಾಷೆ, 
ಮಾರ್ಚ್ 30-  ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ
ಏಪ್ರಿಲ್ 1- ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, 
ಏಪ್ರಿಲ್ 4- ಗಣಿತ, ಸಮಾಜಶಾಸ್ತ್ರ
ಏಪ್ರಿಲ್ 6- ಸಮಾಜ ವಿಜ್ಞಾನ
ಏ.8- ತೃತೀಯ ಭಾಷೆ
ಏ.11- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. 

ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಎಪ್ರಿಲ್/ಮೇ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ  (2nd PUC)  ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ  (Karnataka PU Board)  ಪರಿಷ್ಕರಣೆ ಮಾಡಿ  ಆದೇಶ ಹೊರಡಿಸಿದೆ. ಪರೀಕ್ಷೆ ಎಂದಿನಂತೆ ಏ.16ರಿಂದ ಮೇ.6ರವರೆಗೆ ನಡೆಯಲಿದೆ. ಏ.21ರಂದು ನಡೆಯಬೇಕಿದ್ದ ಭಾಷಾ ವಿಷಯಗಳಲ್ಲಿ ಉರ್ದು ಮತ್ತು ಅರೇಬಿಕ್ ವಿಷಯಗಳನ್ನು ಪ್ರತ್ಯೇಕಿಸಿ ಪರೀಕ್ಷೆ ನಡೆಸಲಾಗುತ್ತಿದೆ. 

ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವೇಳಾಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://pue.kar.nic.in/ ನಲ್ಲಿ ಚೆಕ್‌ ಮಾಡಬಹುದು. ಇದರ ಪ್ರಕಾರವಾಗಿ ಏ.21ರಂದು ಉರ್ದು ಪರೀಕ್ಷೆ ಎಂದಿಂತೆ ನಡೆಯಲಿದ್ದು, ಈ ಮೊದಲು ರಜೆ ಅವಧಿಯಾಗಿದ್ದ ಏ.29ಕ್ಕೆ ಅರೆಬಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. 

ಹೊಸ ವೇಳಾಪಟ್ಟಿ ವಿವರ ಇಂತಿದೆ...
ಏಪ್ರಿಲ್ 16: ಗಣಿತ, ಶಿಕ್ಷಣ, ಬೇಸಿಕ್ ಗಣಿತ
ಏಪ್ರಿಲ್ 18: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರಿಲ್ 19: ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್
ಏಪ್ರಿಲ್ 20: ಇತಿಹಾಸ, ಭೌತಶಾಸ್ತ್ರ
ಏಪ್ರಿಲ್ 21: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 22: ಲಾಜಿಕ್, ಬಿಸಿನೆಸ್ ಸ್ಟಡೀಸ್
ಏಪ್ರಿಲ್ 23: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ
ಏಪ್ರಿಲ್ 25: ಅರ್ಥಶಾಸ್ತ್ರ
ಏಪ್ರಿಲ್ 26: ಹಿಂದಿ
ಏಪ್ರಿಲ್ 28: ಕನ್ನಡ
ಏಪ್ರಿಲ್ 29: ಅರೇಬಿಕ್
ಏಪ್ರಿಲ್ 30: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 2: ಭೂಗೋಳ, ಜೀವಶಾಸ್ತ್ರ
ಮೇ 4: ಇಂಗ್ಲಿಷ್
ಮೇ 6: ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಕನ್ನಡ (ಐಚ್ಛಿಕ)

click me!