Gadag Horticulture Training Center: ಗದಗ ತೋಟಗಾರಿಕೆ ಕೇಂದ್ರದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By Suvarna News  |  First Published Mar 10, 2022, 10:21 PM IST

ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2022-23ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 16 ಕೊನೆಯ ದಿನವಾಗಿದೆ.


ಬೆಂಗಳೂರು(ಮಾ.10):ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ (Gadag Horticulture Training Center) 2022-23ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ  ರೈತರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎಪ್ರಿಲ್ 16 ಕೊನೆಯ ದಿನವಾಗಿದೆ. ಎಪ್ರಿಲ್ 18ರಂದು ನಡೆಯುವ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://horticulturedir.karnataka.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ರೈತರ ಮಕ್ಕಳು ಕನಿಷ್ಠ ಎಸ್‌ಎಸ್‌ಎಲ್‌ಸಿ ಪಾಸ್‌ ಮಾಡಿರಬೇಕು. ತಂದೆ, ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಇದಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ದೃಢೀಕರಣ ಪತ್ರ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.  ಒಟ್ಟು 16 ಮಂದಿಗೆ ಮಾತ್ರ ಅವಕಾಶವಿದ್ದು, ಇದರಲ್ಲಿ 11 ಪುರುಷರು ಹಾಗೂ 5 ಮಹಿಳೆಯರಿಗೆ ತರಬೇತಿಯಲ್ಲಿ ಅವಕಾಶ ನೀಡಲಾಗುವುದು.

Tap to resize

Latest Videos

ವಯೋಮಿತಿ:  ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ಅಭ್ಯರ್ಥಿಗಳು  18 ರಿಂದ 33 ವರ್ಷದೊಳಗಿರಬೇಕು. ಇತರೆ ವರ್ಗದ ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿರಬೇಕು.

ವಿಟಿಯುನಲ್ಲಿ ವೆಂಚರ್ ಕ್ಯಾಪಿಟಲ್, ಪಾಲುದಾರಿಕೆ, ಸಂಶೋಧನೆಯ ಸಂಗಮ: ಅಶ್ವತ್ಥನಾರಾಯಣ

ಅರ್ಜಿ ಶುಲ್ಕ: ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ₹30 ಮತ್ತು  SC/ST ಅಭ್ಯರ್ಥಿಗಳು ₹15 ಅನ್ನು ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ)ಹಾವೇರಿ ಇವರ ಹೆಸರಿನಲ್ಲಿ ಪೋಸ್ಟಲ್ ಆರ್ಡರ್(ಐಪಿಒ) ಅಥವಾ ಡಿಮ್ಯಾಂಡ್ ಡ್ರಾಪ್ಟ್ ಮಾಡಿ, ಅರ್ಜಿ ಜೊತೆಗೆ ಲಗತ್ತಿಸಬೇಕು.

ಅರ್ಜಿ ನಮೂನೆಯನ್ನು ತೋಟಗಾರಿಕೆ ಇಲಾಖೆಯ ಅಧಿಕೃತ ವೆಬ್‌ತಾಣ https://horticulturedir.karnataka.gov.in ನಿಂದ  ಅಥವಾ ಹತ್ತಿರದ ತೋಟಗಾರಿಕೆ ಕಚೇರಿಯಿಂದ ಮಾರ್ಚ್ 15 ರಿಂದ ದಿನಾಂಕ ಎಪ್ರಿಲ್ 16ರವರೆಗೆ ಪಡೆಯಲು ಅವಕಾಶವಿದೆ.

IREDA RECRUITMENT 2022: ವಿವಿಧ ಹುದ್ದೆಗಳಿಗೆ ಐಆರ್‌ಇಡಿಎ ನೇಮಕಾತಿ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಎಪ್ರಿಲ್ 18ರಂದು ಬೆಳಿಗ್ಗೆ 11 ಗಂಟೆಗೆ ಹಾವೇರಿ ಜಿಲ್ಲಾ ಆಡಳಿತ ಭವನದಲ್ಲಿರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬೇಕು. ಸಂದರ್ಶನದಲ್ಲಿ ಆಯ್ಕೆಯಾದವರ ಪಟ್ಟಿಯನ್ನು ಎಪ್ರಿಲ್ 20 ರಂದು ಪ್ರಕಟಿಸಲಾಗುತ್ತದೆ.

ಇತರೆ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹಾವೇರಿ ಮತ್ತು ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಸ್‌ಬಿಐ ನೇಮಕಾತಿ 

2019-20ನೇ ಸಾಲಿನಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಕುವೆಂಪು ವಿವಿ ನಿರ್ಧಾರ!: ಕೋವಿಡ್ 19 (Covid 19) ಸಾಂಕ್ರಾಮಿಕದ ಕಾರಣದಿಂದ 2019-20 ನೇ ಸಾಲಿನ ಪರೀಕ್ಷೆಯನ್ನು (Exam) ಕುವೆಂಪು ವಿಶ್ವವಿದ್ಯಾನಿಲಯ (Kuvempu University) ನಡೆಸದೇ  ಎಲ್ಲರನ್ನೂ ಪಾಸ್ ಮಾಡಿತ್ತು. ಇದಕ್ಕೆ ಸಿಂಡಿಕೇಟ್ ಸಭೆಯಲ್ಲಿ (syndicate  meeting) ತೀವ್ರ ವಿರೋಧ ವ್ಯಕ್ತವಾಗಿತ್ತು.  ಪರೀಕ್ಷೆ ನಡೆಸದೇ ಪಾಸ್ ಮಾಡಿದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2019-20 ನೇ ಸಾಲಿನ ಎಲ್ಲ ಪರೀಕ್ಷೆಗಳನ್ನು ನಡೆಸಲು ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕುಲಪತಿ ಪ್ರೋ.ವೀರಭದ್ರಪ್ಪ (B. P. Veerabhadrappa) ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಕುಲಪತಿಗಳು 2019-20 ನೇ ಸಾಲಿನಲ್ಲಿ ಕೋವಿಡ್​ನಿಂದಾಗಿ ಪರೀಕ್ಷೆ ನಡೆಸದೆ ಪಾಸ್ ಮಾಡಲಾಗಿತ್ತು. ಆದರೆ,  ಇದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಮತ್ತೆ ಸಭೆ ನಡೆಸಿ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಕ್ಕೆ ಎದುರಾಗಬಹುದಾದ ಕಾನೂನು ತೂಡಗಿನ ಕುರಿತು ಸಲಹೆ ಪಡೆಯಲು ಕುಲಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. 2019-20 ನೇ ಸಾಲಿನಲ್ಲಿ  ಕುವೆಂಪು ವಿಶ್ವವಿದ್ಯಾನಿಲಯದ ಸುಮಾರು 24 ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿತ್ತು.  

click me!