Mandya: ಶುಲ್ಕ ಕಟ್ಟದ 40 ಮಕ್ಕಳನ್ನು ಕೂಡಿಹಾಕಿದ ಶಾಲಾ ಮಂಡಳಿ..!

By Kannadaprabha News  |  First Published Feb 9, 2022, 7:17 AM IST

*  ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದ ಘಟನೆ
*  ಶಾಲೆ ಬಳಿ ಬಿಗುವಿನ ವಾತಾವರಣ ನಿರ್ಮಾಣ
*  ದಿವ್ಯ ಜ್ಯೋತಿ ವಿದ್ಯಾಸಂಸ್ಥೆಯಲ್ಲಿ ನಡೆದ ಘಟನೆ


ಮದ್ದೂರು(ಫೆ.09):  ಶಾಲಾ ಶುಲ್ಕ(School Fee) ಕಟ್ಟಿಲ್ಲವೆಂಬ ಕಾರಣವನ್ನು ಮುಂದಿಟ್ಟುಕೊಂಡು 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು(Students) ಕೊಠಡಿಯೊಂದರಲ್ಲಿ ಕೂಡಿ ಹಾಕಿದ ಘಟನೆ ಮಂಗಳವಾರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ದಿವ್ಯ ಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. 1 ರಿಂದ 7ನೇ ತರಗತಿವರೆಗೆ ಇರುವ ಈ ಶಾಲೆಯಲ್ಲಿ ಶುಲ್ಕ ಪಾವತಿ ಮಾಡದ ಕಾರಣ ವಿದ್ಯಾರ್ಥಿಗಳನ್ನು ಪರೀಕ್ಷೆಗೆ(Exam) ಕೂರಿಸಲು ಆಡಳಿತ ಮಂಡಳಿ ನಿರಾಕರಿಸಿದೆ. 

Tap to resize

Latest Videos

Education Budget 2022: ಶಿಕ್ಷಣಕ್ಕೆ ಸಿಕ್ಕಿದ್ದು ಮಹತ್ವದ ಕೊಡುಗೆ, ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ

ಸೋಮವಾರ ಸಂಜೆಯೇ ಮಕ್ಕಳನ್ನು ತರಗತಿಯಿಂದ ಹೊರಹಾಕಿ ಮಂಗಳವಾರ ಶುಲ್ಕದ ಹಣ ತರುವಂತೆ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ತಾಕೀತು ಮಾಡಲಾಗಿತ್ತು ಎನ್ನಲಾಗಿದೆ. ಆದರೆ ಶುಲ್ಕದ ಹಣ ತರದ ಹಿನ್ನೆಲೆಯಲ್ಲಿ 40ಕ್ಕೂ ಹೆಚ್ಚು ಮಕ್ಕಳನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ ಆಡಳಿತ ಮಂಡಳಿ ಅವಮಾನವೀಯ ಕೃತ್ಯ ಎಸಗಿದೆ ಎಂದು ಪೋಷಕರು ಆರೋಪಿಸಿದರು. ಈ ಘಟನೆಯಿಂದ ಶಾಲಾ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕರ್ನಾಟಕದ ಶಾಲಾ ಪಠ್ಯ ಪುಸ್ತಕದಲ್ಲಿ ಮತ್ತೊಂದು ಎಡವಟ್ಟು

ಬೆಂಗಳೂರು: ಕರ್ನಾಟಕದ ಶಾಲಾ ಪಠ್ಯ ಪುಸ್ತಕದಲ್ಲಿ (Karnataka School Text Book) ಮತ್ತೊಂದು ಎಡವಟ್ಟು ಆಗಿದೆ. ಪ್ರಸಿದ್ಧ ಮಲಯಾಳಂ ನಟನ ಫೋಟೊವನ್ನು ಪಠ್ಯಪುಸ್ತಕದಲ್ಲಿ ಪೋಸ್ಟ್‌ಮ್ಯಾನ್ ರೀತಿ ಬಿಂಬಿಸಿದ್ದ ಘಟನೆ ಜ.31 ರಂದು ನಡೆದಿತ್ತು. 

ಇದು ಬೊಬನ್ ಗಮನಕ್ಕೆ ಬರುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೊವನ್ನು ಹಂಚಿಕೊಂಡಿದ್ದು, ಪೋಸ್ಟ್‌ಮ್ಯಾನ್ ಫೋಟೋ ಬಗ್ಗೆ ರಾಜ್ಯ ಸರ್ಕಾರದ ಕಾಲೆಳೆದಿದ್ದರು.
ಕೊನೆಗೂ ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡೆ. ಹಲವು ವರ್ಷಗಳಿಂದ ಪತ್ರಗಳನ್ನು ತಲುಪಿಸುತ್ತಿದ್ದ ಪೋಸ್ಟ್‌ಮ್ಯಾನ್ ಪ್ರಾರ್ಥನೆ ಈಡೇರಿದೆ." ಎಂದು ಆ ಫೋಟೊಗೆ ಶೀರ್ಷಿಕೆ ಕೊಟ್ಟಿದ್ದಾರೆ. ಈ ಫೋಟೊವನ್ನು ಶೇರ್ ಮಾಡುವಾಗ ತಮ್ಮನ್ನು ತಾವು ಪೋಸ್ಟ್ ಮ್ಯಾನ್ ಎಂದು ಪರಿಚಯಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೊ ವೈರಲ್ ಆಗಿತ್ತು. 

ಡಿಕೆ ಸುರೇಶ್ ಕಿಡಿ

ಇನ್ನು ಇದಕ್ಕೆ ಕಾಂಗ್ರೆಸ್ ಸಂಸದ ಡಿಕೆ ಸುರೇಶ್(DK Suresh) ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವನ್ನು(Government of Karnataka) ತರಾಟೆಗೆ ತೆಗೆದುಕೊಂಡಿದ್ದಾರೆ. ಅಂದಹಾಗೆ ಶಾಲಾ ಪಠ್ಯಕ್ರಮದಲ್ಲಿರುವ ಚಿತ್ರಗಳನ್ನು ಮತ್ತು ಪಠ್ಯಗಳನ್ನು ಶಿಕ್ಷಣ ಇಲಾಖೆಯಲ್ಲಿ ಸಿದ್ದಪಡಿಸಲಾಗುತ್ತಿದೆಯೋ ಅಥವಾ ಕೇಶವಕೃಪದಲ್ಲೋ ಎಂಬುದನ್ನು ಶಿಕ್ಷಣ ಸಚಿವ ನಾಗೇಶ್ ಹಾಗೂ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್(Suresh Kumar) ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಮೂಲಕ ಬಿಜೆಪಿ ಅವ್ಯವಸ್ಥೆಯಿಂದ ಇಡೀ ದೇಶದ ಎದುರು ರಾಜ್ಯ ತಲೆತಗ್ಗಿಸುವಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Chikkaballapur: 10 ಜಿಲ್ಲೆಗೆ ಹೊಸ ವೈದ್ಯಕೀಯ ಕಾಲೇಜು: ಸುಧಾಕರ್‌

ಹಿಜಾಬ್ ಹಾಕದೇ ಬರಲಾಗುವುದಿಲ್ಲ ಅಂದ್ರೆ ಕಾಲೇಜಿಗೆ ಬರಬೇಡಿ ಎಂದ ಬಿಜೆಪಿ ಶಾಸಕ

ಉಡುಪಿ: ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ (Hijab ) ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ (MLA RaguPathi Bhat) ನೇತೃತ್ವದಲ್ಲಿ ನಡೆದ ಸಭೆ ಅಂತ್ಯವಾಗಿದ್ದು,  ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ ಎಂದು ಸಭೆಯಲ್ಲಿ ತೀರ್ಮಾನವಾಗಿದೆ. 

ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಜ.31 ರಂದು ಕಾಲೇಜು ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿ, ಪೋಷಕರು, ಉಪನ್ಯಾಸಕರ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜಿನ ತರಗತಿಗೆ ಹಿಜಾಬ್ ತೆಗೆದು ಹಾಜರಾಗುತ್ತೇನೆ ಎನ್ನುವ ನಿರ್ಧಾರ ತೆಗೆದುಕೊಂಡರಷ್ಟೇ ಕಾಲೇಜಿಗೆ ಬನ್ನಿ. ಹಿಜಾಬ್ ಹಾಕದೇ ಬರಲು ಸಿದ್ಧವಿಲ್ಲ ಎಂದಾದರೆ ಕಾಲೇಜು ಆವರಣದೊಳಗೂ ಬರಬೇಡಿ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದ್ದರು. 
 

click me!