Good News: ಸದ್ಯದಲ್ಲಿ 2000 ಪ್ರೌಢಶಾಲಾ ಶಿಕ್ಷಕರು, 750 ಪಿಯು ಉಪನ್ಯಾಸಕರ ನೇಮಕ: ಸಚಿವ ಬಿ.ಸಿ. ನಾಗೇಶ್

By Sathish Kumar KH  |  First Published Jan 26, 2023, 4:04 PM IST

ಶಿಕ್ಷಣ ಇಲಾಖೆಯಿಂದ ಸದ್ಯದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಸಾಕ್ಷರತಾ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.


ಕೊಡಗು (ಜ.26): ರಾಜ್ಯದಲ್ಲಿ ಈಗಾಗಲೇ ೧೫ ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಜ್ಜಾಗಿರುವ ಶಿಕ್ಷಣ ಇಲಾಖೆಯು ಈಗ ಸದ್ಯದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಸಾಕ್ಷರತಾ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಕೊಡಗು ಜಿಲ್ಲಾ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಮುಂದಿನ ದಿನಗಳಲ್ಲಿ ಬಿಜೆಪಿಯಿಂದ ಕೊಡಗಿನಲ್ಲಿ ಆಯೋಜನೆ ಮಾಡಲಾಗುತ್ತಿರುವ ಜನಸಂಕಲ್ಪ ಯಾತ್ರೆಯ ಸಿದ್ಧತೆ ಕುರಿತು ಪರಿಶೀಲನೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಕೊಡಗು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ. ಅದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸಿದ್ಧತೆ ಮತ್ತು ನಿಯಮಾವಳಿ ರೂಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

Tap to resize

Latest Videos

undefined

Teacher Recruitment: ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಕೊಡಗಿನಲ್ಲಿ ಫೆ.10ರಂದು ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ: ಮುಂದಿನ ತಿಂಗಳು ಅಂದರೆ ಫೆಬ್ರವರಿ 10 ರಂದು ಮಡಿಕೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿ ವಿವಿಧ ಕಾರ್ಯಕ್ರಮಗಳ ಉದ್ಘಾಟಿಸಲಿಸಲಿದ್ದಾರೆ. ಮತ್ತೊಂದೆಡೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಕೊಡಗಿನ ಗ್ರೇಟ್ ರಾಜಾಸೀಟ್ ಉದ್ಘಾಟನೆ ಮಾಡಲಾಗುತ್ತದೆ. ಹೀಗಾಗಿ, ರಾಜಾಸೀಟ್ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಮಡಿಕೇರಿಯ ರಾಜಾಸೀಟ್ ಗೆ ಹೊಂದಿಕೊಂಡಂತೆ ಮಾಡಿರುವ ಗ್ರೇಟರ್ ರಾಜಾಸೀಟ್ ಅಭಿವೃದ್ಧಿ ಕಾರ್ಯವು ಶೀಘ್ರ ಉದ್ಘಾಟನೆ ಆಗಲಿದೆ. ಇನ್ನು ಫೆಬ್ರವರಿ 10 ರಂದು ಕೊಡಗಿನಲ್ಲಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

500 ಹುದ್ದೆಗಳ ಸಂಖ್ಯೆ ಕಡಿತ: ಜನವರಿ ಮೊದಲ ವಾರದಲ್ಲಿ ಶಿವಮೊಗ್ಗದಲ್ಲಿ ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಯಡಿಯೂರಪ್ಪ ನೇತೃತ್ವದ ಸರ್ಕಾರ ಇರುವಾಗ ಸುಮಾರು 3 ಸಾವಿರಕ್ಕೂ ಅಧಿಕವಾಗಿ ಶಿಕ್ಷಕರ ನೇಮಕಾತಿ ಮಾಡಲಾಗಿತ್ತು. ನಂತರ ಸುಮಾರು 13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಇನ್ನು ಫೆಬ್ರವರಿಯಲ್ಲಿ ಸುಮಾರು 2,500 ಪ್ರೌಢ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದರು. ಆದರೆ, ಈಗ ಪ್ರೌಢಶಾಲಾ ಶಿಕ್ಷಕರ ಸಂಖ್ಯೆಯನ್ನು 2,500 ದಿಂದ 2000ಕ್ಕೆ ಇಳಿಕೆ ಮಾಡಲಾಗಿದೆ. ಇದರಿಂದ ಪ್ರೌಢಶಾಲಾ ಶಿಕ್ಷಕರಾಗುವ ಆಕಾಂಕ್ಷಿಗಳಿಗೆ ಹಿನ್ನಡೆ ಉಂಟಾಗಿದೆ.

ಚಿಕ್ಕಮಗಳೂರು: ವರ್ಗಾವಣೆ ತಪ್ಪಿಸಿಕೊಳ್ಳಲು ಶಿಕ್ಷಕರಿಂದ ಸುಳ್ಳು ದಾಖಲೆ ಸೃಷ್ಠಿ?

ಅತಿಥಿ ಶಿಕ್ಷಕರ ಸೇವೆ ಮುಂದುವರಿಕೆ: ಪ್ರಸ್ತುತ ರಾಜ್ಯದಲ್ಲಿ ಎಲ್ಲೆಲ್ಲಿ ಶಿಕ್ಷಕರ ಕೊರತೆ ಇದೆಯೋ ಅಂತಹ ಎಲ್ಲ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಾಲಿ ಅತಿಥಿ ಶಿಕ್ಷಕರನ್ನು ತೆಗೆದು ಹಾಕಿರುವ ಕುರಿತು ನನಗೆ ಮಾಹಿತಿ ಇಲ್ಲ. ಎಲ್ಲ ಶಾಲೆಗಳಲ್ಲಿ ಹೆಚ್ಚು ವರ್ಷಗಳ ಕಾಲ ಅನುಭವ ಇರುವಂತಹ ಶಿಕ್ಷಕರನ್ನು ಅತಿಥಿ ಶಿಕ್ಷಕರಾಗಿ ನಿಯೋಜನೆ ಮಾಡಿಕೊಳ್ಳಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದರು. 

click me!