ರಾಜ್ಯದಲ್ಲಿ 2022-23 ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಸರ್ಕಾರ 2ನೇ ಬಾರಿಗೆ ಪೂರಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಅವಕಾಶ ನೀಡಿದೆ.
ಬೆಂಗಳೂರು (ಜು.28): ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿಯನ್ನು ನೀಡಲಾಗಿದೆ. ಇನ್ನುಮುಂದೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ ಆದಲ್ಲಿ ಅಥವಾ ಕಡಿಮೆ ಅಂಕಗಳು ಬಂದಲ್ಲಿ 2 ಬಾರಿ ಪೂರಕ ಪರೀಕ್ಷೆಯನ್ನು ಬರೆಯಲು ಸರ್ಕಾರ ಅನುಮತಿಯನ್ನು ನೀಡಲಾಗಿದೆ. ಈ ಬಗ್ಗೆ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಮಾಹಿತಿ ನೀಡಲಾಗಿದೆ.
ರಾಜ್ಯುದಲ್ಲಿ 2022-23 ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ 2 ನೋಂದಣಿಗೆ ಅವಕಾಶ ನೀಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎರಡನೇ ಪೂರಕ ಪರೀಕ್ಷೆಗೆ ದಿನಾಂಕವನ್ನು ನಿಗದಿ ಮಾಡಲಾಗಿದ್ದು, ಕೂಡಲೇ ವಿದ್ಯಾರ್ಥಿಗಳು 2ನೇ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಸಿಕೊಳ್ಳಬಹುದು.
undefined
ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇನ್ಮುಂದೆ ಎಲ್ಲಾ ವಿಷಯಗಳಿಗೂ ಇಂಟರ್ನಲ್ ಮಾರ್ಕ್ಸ್..!
ಇದಕ್ಕಾಗಿ https://kseab.karnataka.gov.in ವೆಬ್‌ಸೈಟ್ ಮೂಲಕ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಜಾಲತಾಣದಲ್ಲಿ ಪ್ರಕಟ ಮಾಡಲಾಗಿದೆ. ಇಲ್ಲಿ ಮುಖ್ಯವಾಗಿ 2022-23 ಹಾಗೇ ಅದಕ್ಕಿಂತ ಹಿಂದಿನ ಸಾಲಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತಿದೆ. ಆದರೆ, ಈ ವಾಧಿಯಲ್ಲಿ ಫಲಿತಾಂಶ ತಿರಸ್ಕರಿಸಲು ಮತ್ತೆ ಅವಕಾಶ ಇಲ್ಲ. ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರವರಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.