ಕರ್ನಾಟಕದಲ್ಲಿ ಇನ್ಮುಂದೆ ಆನ್‌ಲೈನ್‌ನಲ್ಲಿ ಸಿಇಟಿ?

By Kannadaprabha News  |  First Published Jul 14, 2024, 11:58 AM IST

ಸಿಇಟಿ ಅರ್ಜಿ ತುಂಬುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ವ ತಯಾರಿ ನೀಡಲು ಆ್ಯಪ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದರ ಜತೆಗೆ ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ ಮಾಡಿಸುವ ಉದ್ದೇಶವೂ ಇದೆ ಎಂದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ 


ಬೆಂಗಳೂರು(ಜು.14):  ರಾಜ್ಯದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ (ಸಿಬಿಟಿ) ಯಾಗಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.  ಸಿಇಟಿ ಸಂರಚನೆಯ ಬಗ್ಗೆ ಅಧ್ಯಯನ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ನರಸಿಂಹರಾಜು ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸರ್ಕಾರ ಸಿಇಟಿ ಮಾದರಿಯನ್ನು ಬದಲಾಯಿಸುವಾಗಲೂ ಸಮಿತಿಯು ಸಲ್ಲಿಸಲಿದೆ ಎಂದರು. 

ನಗರದ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಿಇಟಿಯನ್ನು ಸಿಬಿಟಿ ಮಾದರಿಯಲ್ಲಿ ನಡೆಸಿರುವ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗಿದೆ. ಅಲ್ಲಿ ಸಿಬಿಟಿ ನಡೆಸಿದ ಸಂಸ್ಥೆಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಗಿದೆ.  ಸಿಇಟಿಯನ್ನು ಕಂಪ್ಯೂಟ‌ರ್ ಆಧರಿಸಿ ನಡೆಸಲು ಹೆಚ್ಚಿನ ಮೂಲ ಸೌಕರ್ಯ ಬೇಕಾಗುತ್ತದೆ. ಸರ್ಕಾರ ಹೆಚ್ಚು ವೆಚ್ಚವನ್ನೂ ಮಾಡಬೇಕಾಗುತ್ತದೆ. ಇದರ ಶಿಫಾರಸುಗಳನ್ನು ಜೊತೆಗೆ ನಮ್ಮ ಗ್ರಾಮೀಣ ಮಕ್ಕಳನ್ನೂ ಗವ ದಿನದಲ್ಲಿಟ್ಟು ಕೊಳ್ಳಬೇಕಾಗುತ್ತದೆ. ಸಿಇಟಿ ಅರ್ಜಿ ಭರ್ತಿ ಮಾಡುವಾಗಲೇ ಆನೇಕ ಲೋಪಗಳನ್ನು ಮಾಡುವವರಿದ್ದಾರೆ. ಈ ಎಲ್ಲ ಕಾರಣಗಳಿಂದ ಒಟ್ಟಾರೆ ಸಾಧಕ-ಬಾಧಕಗಳನ್ನು ಗಣನೆಗೆ ತೆಗೆದುಕೊಂಡು ಅಂತಿಮ ನಿರ್ಧಾರ ಮಾಡಲಾಗುವುದು ಎಂದರು.

Tap to resize

Latest Videos

ಸಿಇಟಿ ಪರೀಕ್ಷೆಯಲ್ಲಿ ಕೆಇಎ ಮತ್ತೊಂದು ಮಹಾ ಎಡವಟ್ಟು, 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆತಂಕ

ಸಿಇಟಿ ಅರ್ಜಿ ಭರ್ತಿಗೆ ಶೀಘ್ರ ಬರಲಿದೆ ಆ್ಯಪ್

ಸಿಇಟಿ ಅರ್ಜಿ ತುಂಬುವ ಹಂತದಲ್ಲಿ ಮುಖ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ವಿದ್ಯಾರ್ಥಿಗಳು ಬಹುತೇಕ ಸೈಬರ್‌ ಸೆಂಟರ್‌ಗಳಿಗೆ ಹೋಗಿ ಅರ್ಜಿ ತುಂಬುತ್ತಿದ್ದು, ಗ್ರಾಮೀಣ ವಿದ್ಯಾರ್ಹತೆ, ಮೀಸಲಾತಿ ಮತ್ತಿತರ ಮಾಹಿತಿಗಳನ್ನು ನೀಡುವಾಗ ಹೆಚ್ಚಿನ ಪ್ರಮಾಣದಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ. ಹಾಗಾಗಿ ಸಿಇಟಿ ಅರ್ಜಿ ತುಂಬುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ವ ತಯಾರಿ ನೀಡಲು ಆ್ಯಪ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದರ ಜತೆಗೆ ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ ಮಾಡಿಸುವ ಉದ್ದೇಶವೂ ಇದೆ ಎಂದು ಸಚಿವರು ತಿಳಿಸಿದರು.

ಸಿಇಟಿಯಲ್ಲಿ ಇನ್ನು ಮುಂದೆ ಪತ್ಯೇತರ ಪ್ರಶ್ನೆ: ಸುಧಾಕರ್

ಸಿಇಟಿಯಲ್ಲಿ ಇನ್ನು ಮುಂದೆ ಪತ್ಯೇತರ ಪ್ರಶ್ನೆಗಳನ್ನೂ ಕೇಳಲಾಗುತ್ತದೆ. ವಿದ್ಯಾರ್ಥಿಗಳು ಅವರ ಬುದ್ದಿಶಕ್ತಿ ಉಪಯೋಗಿಸಿ ಆ ಪ್ರಶ್ನೆಗಳಿಗೆ ಉತ್ತರ ಬರೆಯಬೇಕಾಗುತ್ತದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಇದೇ ವೇಳೆ ತಿಳಿಸಿದರು.
2025ನೇ ಸಾಲಿನ ಸಿಇಟಿಯಲ್ಲಿ  ಪ್ರಶ್ನೆಗಳನ್ನು ಕೇಳುವ ಕುರಿತು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಪ್ರಶ್ನೆ ಪತ್ರಿಕೆ ತಯಾರಕರಿಗೂ ಕೆಇಎಯಿಂದ ಅಗತ್ಯ ಮಾರ್ಗಸೂಚಿ ನೀಡಲಾಗುವುದು. ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದರು.

click me!