ಸರ್ಕಾರಿ ಶಾಲೆಗೆ ಬಂದ ವಿದ್ಯಾರ್ಥಿಗೆ ಪಾದಪೂಜೆ ಮಾಡಿದ ಶಿಕ್ಷಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ

By Sathish Kumar KH  |  First Published Jun 1, 2024, 12:29 PM IST

ಸರ್ಕಾರಿ ಶಾಲೆಗೆ ಪ್ರವೇಶ ಪಡೆದು ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗೆ ಶಿಕ್ಷಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿ ಪಾದಪೂಜೆ ನೆರವೇರಿಸಿ ಶಾಲೆಗೆ ಬರಮಾಡಿಕೊಂಡರು. 


ರಾಮನಗರ (ಜೂ.1): ಸರ್ಕಾರಿ ಶಾಲೆಗೆ ಪ್ರವೇಶ ಪಡೆದು ಮೊದಲ ದಿನ ಶಾಲೆಗೆ ಬಂದ ವಿದ್ಯಾರ್ಥಿಗೆ ಶಿಕ್ಷಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿ ಪಾದಪೂಜೆ ನೆರವೇರಿಸಿ ಶಾಲೆಗೆ ಬರಮಾಡಿಕೊಂಡರು. 

ರಾಜ್ಯಾದ್ಯಂತ 2024-25ನೇ ಶೈಕ್ಷಣಿಕ ಸಾಲಿನ ತರಗತಿಗಳು ಆರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕುಸಿತ ಆಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದೆ. ಆದರೆ, ಸರ್ಕಾರಿ ಶಾಲೆಗೆ ದಾಖಲಾತಿ ಪಡೆದು ಮೊದಲ ದಿನ ಶಾಲೆಗೆ ಬಂದ ಮಗುವಿಗೆ ಶಿಕ್ಷಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಾದಪೂಜೆ ಮಾಡಿ ಸ್ವಾಗತ ಕೋರಿದ್ದಾರೆ. ಇನ್ನು ಇಡೀ ಗ್ರಾಮದಲ್ಲಿಯೇ ಶಾಲೆ ಪ್ರಾರಂಭೋತ್ಸವವನ್ನು ಹಬ್ಬವನ್ನಾಗಿ ಆಚರಣೆ ಮಾಡಲಾಗಿದೆ.

Latest Videos

undefined

ಶೈಕ್ಷಣಿಕ ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕ್ಷಣ ಇಲಾಖೆ ಸಿಬ್ಬಂದಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿ ಸರ್ಕಾರಿ ಶಾಲೆಗೆ ಆಗಮಿಸಿದ ಮಗುವಿಗೆ ಪಾದಪೂಜೆ ಮಾಡಿ ಸ್ವಾಗತ ಕೋರಿದ ಘಟನೆ ರಾಮನಗರ ಜಿಲ್ಲೆ ಬಿಡದಿ ಬಳಿಯ ಬೆತ್ತಂಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸರ್ಕಾರಿ ಶಾಲೆ ಪ್ರರಂಭೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಮಕ್ಕಳ ದಾಖಲಾತಿಯನ್ನು ಹೆಚ್ಚಳ ಮಾಡಲು ವಿಭಿನ್ನ ಮಾರ್ಗವನ್ನು ಅನುಸರಿಸಿದ್ದಾರೆ. ಬೆತ್ತಂಗೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಬ್ಬ ವಾತಾವರಣ ನಿರ್ಮಾಣವಾಗಿತ್ತು.

ಸರ್ಕಾರಿ ಶಾಲೆಗೆ ದಾಖಲಾತಿ ಪಡೆದುಕೊಂಡ ಮಕ್ಕಳನ್ನು ಸಿಂಗಾರಗೊಂಡ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಿ ಶಾಲೆಗೆ ಕರೆದುಕೊಂಡು ಬರಲಾಯಿತು. ಈ ವೇಳೆ ಗ್ರಾಮದ ಮಹಿಳೆಯರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ತಲೆಯ ಮೇಲೆ ಕುಂಭವನ್ನು ಹೊತ್ತು ಕೆಲವರು ಕಳಶವನ್ನು ಹಿಡಿದುಕೊಂಡು ಮಕ್ಕಳ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ, ತಳಿರು ತೋರಣಗಳಿಂದ ಸಿಂಗರಿಸಿದ್ದ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಸೋಮಲಿಂಗಯ್ಯ ಹಾಗೂ ಶಾಲಾ ಶಿಕ್ಚಕರು ಸೇರಿ ಮಕ್ಕಳ ಪಾದಪೂಜೆ ನೆರವೇರಿಸಿದರು.

ಖಾಸಗಿ ಶಾಲೆಗಳು ಡೋನೆಷನ್ ಪಡೆದರೆ‌ ಶಾಲಾ ಮಾನ್ಯತೆ ರದ್ದು: ಖಡಕ್ ಎಚ್ಚರಿಕೆ ಕೊಟ್ಟ ಸರ್ಕಾರ

ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಕಳೆದ ವರ್ಷ ಭಾರೀ ವಿವಾದವನ್ನೇ ಹುಟ್ಟುಹಾಕಿತ್ತು. ಆದರೆ, ಈ ಬಾರಿ ಪಠ್ಯಪರಿಷ್ಕರಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪಠ್ಯಪರಿಷ್ಕರಣೆ ಬಗ್ಗೆ ಕಳೆದ ಬಾರಿಯೇ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಹೀಗಾಗಿ ಈ ಬಾರಿ ಯಾವುದೇ ಬದಲಾವಣೆ ಇಲ್ಲ. ಅದ್ಯಾಗೂ ತಪ್ಪಿದ್ದ ಪದಗಳನ್ನು ಸರಿಪಡಿಸಲಾಗುವುದು. 2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆದಿವೆ. ಆದರೆ, ಮಕ್ಕಳನ್ನು ಮಾತ್ರ ಮೇ 31ರಂದು ಮತ್ತು ಜೂನ್ 1ರಂದು ಶಾಲಾ ಪ್ರಾರಂಭೋತ್ಸವದ ಮೂಲಕ ಸಿಹಿ ನೀಡಿ ಶಿಕ್ಷಕರು ಬರಮಾಡಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದರು.

click me!