ಸರ್ಕಾರಿ ಶಾಲೆಗಳಲ್ಲಿನ್ನು ತಿಂಗಳಲ್ಲಿ ಒಂದು ಶನಿವಾರ ಬ್ಯಾಗ್‌ ಇರಲ್ಲ

Published : Oct 30, 2022, 08:30 AM IST
ಸರ್ಕಾರಿ ಶಾಲೆಗಳಲ್ಲಿನ್ನು ತಿಂಗಳಲ್ಲಿ ಒಂದು ಶನಿವಾರ ಬ್ಯಾಗ್‌ ಇರಲ್ಲ

ಸಾರಾಂಶ

10 ವಿಷಯಕ್ಕೆ ಸಂಬಂಧಿಸಿದ ಸಚಿತ್ರ ವಿವರ ಇರುವ ಪುಸ್ತಕಗಳನ್ನು ವಿದ್ಯಾರ್ಥಿಗಳಿಗಾಗಿ ರೂಪಿಸಿದ್ದು, ಇದಕ್ಕೆ ಪೂರಕವಾಗಿ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿ ಸಿದ್ಧ. 

ಬೆಂಗಳೂರು(ಅ.30):  ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ತಿಂಗಳಲ್ಲಿ ಒಂದು ಶನಿವಾರ ಬ್ಯಾಗ್‌ರಹಿತ ‘ಸಂಭ್ರಮ ಶನಿವಾರ’ ಆಚರಿಸುವಂತೆ ಸೂಚಿಸಿದೆ.

ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ‘ಸಂಭ್ರಮ ಶನಿವಾರ’ಕ್ಕೆ ಪೂರಕವಾಗಿ ವಿದ್ಯಾರ್ಥಿ ಚಟುವಟಿಕೆಯ ಪಠ್ಯ ಮತ್ತು ಶಿಕ್ಷಕರ ಕೈಪಿಡಿಗಳನ್ನು ಅಪ್‌ಲೋಡ್‌ ಮಾಡಲಾಗಿದೆ. ಇವನ್ನು ಬಳಸಿಕೊಂಡು ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಮಾಸಿಕ ಸಮಾಲೋಚನಾ ಸಭೆಗಳು ನಡೆಯುವ ಸಂದರ್ಭದಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದು ಅಂದು ‘ಸಂಭ್ರಮ ಶನಿವಾರ’ ಆಚರಿಸಬಹುದಾಗಿದೆ ಎಂದು ಸೂಚನೆ ನೀಡಲಾಗಿದೆ.

2022-23ನೇ ಸಾಲಿನ SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

10 ವಿಷಯಕ್ಕೆ ಸಂಬಂಧಿಸಿದ ಸಚಿತ್ರ ವಿವರ ಇರುವ ಪುಸ್ತಕಗಳನ್ನು ವಿದ್ಯಾರ್ಥಿಗಳಿಗಾಗಿ ರೂಪಿಸಿದ್ದು, ಇದಕ್ಕೆ ಪೂರಕವಾಗಿ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿ ಸಿದ್ಧ ಮಾಡಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸಲು ಈಗಾಗಲೇ ಕಲಿಕಾ ಚೇತರಿಕೆ ಯೋಜನೆಯನ್ನು ಇಲಾಖೆಯು ಜಾರಿಗೆ ತಂದಿದ್ದು ಇದಕ್ಕೆ ಪೂರಕವಾಗಿ ‘ಸಂಭ್ರಮ ಶನಿವಾರ’ದ ಪಠ್ಯಗಳನ್ನು ಸಿದ್ಧಪಡಿಸಲಾಗಿದೆ.

ತಿಂಗಳಲ್ಲಿ ಒಂದು ದಿನ ಬ್ಯಾಗ್‌ರಹಿತ ದಿನವನ್ನಾಗಿ ಆಚರಿಸಬೇಕು ಎಂಬ ಯೋಜನೆಯನ್ನು 2019ರಲ್ಲೇ ರೂಪಿಸಲಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಯೋಜನೆಯನ್ನು ಅನುಷ್ಠಾನ ಮಾಡಿರಲಿಲ್ಲ. ಇದೀಗ ಅನುಷ್ಠಾನ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.
 

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ