ಕೇಂದ್ರ ಸರ್ಕಾರ ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಆತ್ಮನಿರ್ಭರ ಭಾರತ್ ಮಾಡಲು ಸಂಕಲ್ಪ ಮಾಡಿದ್ದಾರೆ. ಅತ್ಯುತ್ತಮ ಭಾರತ, ಸ್ವಾವಲಂಬಿ ಭಾರತ ಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಕರೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ವರದಿ: ದೀಪಕ್, ಏಷಿಯಾನೆಟ್ ಸುವರ್ಣ ನ್ಯೂಸ್, ಕೋಲಾರ
ಕೋಲಾರ(ಜು.04): ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ಶಿಕ್ಷಣವನ್ನು ಒದಗಿಸಲು ವಿಶ್ವವಿದ್ಯಾಲಯಗಳು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
undefined
ಇಂದು(ಮಂಗಳವಾರ) ಕೋಲಾರ ಹೊರಹೊಲಯದ ನಂದಿನಿ ಪ್ಯಾಲೆಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು. ಸೈಬರ್ ಅಪರಾಧಗಳನ್ನು ತಪ್ಪಿಸಲು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಕಾರ್ಯಗಾರಗಳನ್ನು ಆಯೋಜಿಸುವುದು ಅಗತ್ಯವಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ವಿಶ್ವವಿದ್ಯಾಲಯದ ಕುಲಪತಿಗಳು ಸುಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಿ
ಇಂದಿನ ಸಮಯವು ತಂತ್ರಜ್ಞಾನವಾಗಿದೆ. ದೇಶದ ಅಭಿವೃದ್ಧಿಯಲ್ಲಿ ತಾಂತ್ರಿಕ ಶಿಕ್ಷಣ ಪ್ರಮುಖ ಪಾತ್ರವನ್ನು ವಹಿಸುತ್ತದೆ. ತಾಂತ್ರಿಕ ಗುಣಮಟ್ಟದ ಶಿಕ್ಷಣವು ಖಂಡಿತವಾಗಿಯೂ ಯುವಕರಿಗೆ ಕೌಶಲ್ಯ ಮತ್ತು ಶ್ರೇಷ್ಠತೆಯನ್ನು ಒದಗಿಸುತ್ತದೆ. ಯುವಕರನ್ನು ನುರಿತರನ್ನಾಗಿಸುವ ಮೂಲಕ ನಾವು ಸ್ಥಳೀಯ ಮತ್ತು ಆತ್ಮನಿರ್ಭರ ಭಾರತಕ್ಕಾಗಿ ಧ್ವನಿ ನೀಡುವ ದಿಕ್ಕಿನಲ್ಲಿ ಮುನ್ನಡೆಯಬಹುದು ಎಂದು ಹೇಳಿದರು.
ವಿಶ್ವವಿದ್ಯಾಲಯವು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿಗಳಿಗೆ ಗೌರವ ಪದವಿ ನೀಡಿ ಗೌರವಿಸಿದೆ. ಅವರ ಅತ್ಯುತ್ತಮ ಸಾಧನೆಗಳಿಗಾಗಿ ಮತ್ತು ಮಾನವ ಸಮಾಜದ ಪ್ರಗತಿಗೆ, ಮಹತ್ವದ ಕೊಡುಗೆಗಾಗಿ ಅಭಿನಂದಿಸುತ್ತೇನೆ ಮತ್ತು ಉಜ್ವಲ ಭವಿಷ್ಯವನ್ನು ಹಾರೈಸುತ್ತೇನೆ. ಜನರು ಮತ್ತು ದೇಶದ ಹಿತದೃಷ್ಟಿಯಿಂದ ಸಮಾಜಕ್ಕಾಗಿ ನಿಮ್ಮ ಸೇವೆ ನಿರಂತರವಾಗಿರಲಿ ಎಂದು ಮನವಿ ಮಾಡಿದರು.
ನೀವು ಪಡೆದ ಶಿಕ್ಷಣವನ್ನು ಇತರರಿಗೆ ನೀಡಲು ಪ್ರಯತ್ನಿಸಿ
ಈ ದಿನ ಅನೇಕ ವಿದ್ಯಾರ್ಥಿಗಳಿಗೆ ಪದವಿಗಳನ್ನು ನೀಡಲಾಗಿದೆ. ಅನೇಕ ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಪಡೆದಿದ್ದಾರೆ ಮತ್ತು ಪಿ.ಹೆಚ್.ಡಿ ಪದವಿಗಳನ್ನು ಸಹ ಸ್ವೀಕರಿಸಿದ್ದಾರೆ. ನೀವು ಪಡೆದ ಶಿಕ್ಷಣವನ್ನು ಇತರರಿಗೆ ನೀಡಲು ಪ್ರಯತ್ನಿಸಿ ಮತ್ತು ಮುಂಬರುವ ವಿದ್ಯಾರ್ಥಿಗಳು ನಿಮ್ಮಿಂದ ಸ್ಫೂರ್ತಿ ಪಡೆಯುವ ರೀತಿಯಲ್ಲಿ ಮುನ್ನಡೆಯಬೇಕು.ಸ್ವಾಮಿ ವಿವೇಕಾನಂದರು ಯುವಕರೇ ಎದ್ದೇಳಲು, ಎಚ್ಚರಗೊಳ್ಳಲು ಮತ್ತು ಗುರಿಯನ್ನು ಸಾಧಿಸುವವರೆಗೆ ನಿಲ್ಲಬೇಡಿ ಎಂದು ಕರೆ ನೀಡಿದ್ದರು,ಅದನ್ನು ಪರಿಪಾಲಿಸಿ. ಅವರು ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ, ನೀವು ನಿಮ್ಮ ವೃತ್ತಿಜೀವನವನ್ನು ಯಶಸ್ವಿಗೊಳಿಸಿಕೊಳ್ಳಿ. ಈ ಕೆಲಸದಲ್ಲಿ ವಿಶ್ವವಿದ್ಯಾಲಯದಿಂದ ಪಡೆದ ಶಿಕ್ಷಣ ಮತ್ತು ಬಲವಾದ ನೈತಿಕ ಅಡಿಪಾಯವು ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ನವ ಭಾರತ, ಶ್ರೇಷ್ಠ ಭಾರತ, ಆತ್ಮನಿರ್ಭರ ಭಾರತ್ ಮಾಡಲು ಸಂಕಲ್ಪ ಮಾಡಿದ್ದಾರೆ. ಅತ್ಯುತ್ತಮ ಭಾರತ, ಸ್ವಾವಲಂಬಿ ಭಾರತ ಮಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಬಹಳ ಪುರಾತನವಾಗಿದೆ ಮತ್ತು ಪ್ರಾಚೀನ ಕಾಲದಿಂದಲೂ, "ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ" ಎಂಬ ಮನೋಭಾವದಿಂದ ಪ್ರೇರಿತವಾದ "ವಸುಧೈವ ಕುಟುಂಬಕಂ" ತತ್ವಶಾಸ್ತ್ರ ಮತ್ತು ಧ್ಯಾನವನ್ನು ಕೇಂದ್ರೀಕರಿಸಿ, ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವ ಶಾಂತಿ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಕಲಿಸುತ್ತದೆ ಎಂದು ತಿಳಿಸಿದರು.
ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪುರ್ವ "ಪ್ರಗತಿಯನ್ನು" ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಹೆಚ್ಚು ಬಲಗೊಂಡಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಮುಂದಿನ 25 ವರ್ಷಗಳ ಅಮೃತ ಕಾಲ. ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ನಾವು ಪಾಲುದಾರರಾಗಿರಬೇಕು ಎಂದು ತಿಳಿಸಿದರು.
ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಪಠ್ಯದಲ್ಲಿ ಬದಲಾವಣೆ ತರುವ ಅಗತ್ಯವಿದೆ
ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರು ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಪಠ್ಯದಲ್ಲಿ ಬದಲಾವಣೆ ತರುವ ಅಗತ್ಯವಿದೆ. ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿದರೆ ವಿದ್ಯಾರ್ಥಿಗಳು ಭವಿಷ್ಯಕಟ್ಟಿಕೊಳ್ಳಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ತಜ್ಞರ ಜತೆ ಚರ್ಚಿಸಲಾಗುತ್ತಿದೆ. ದಿಢೀರನೆ ವ್ಯವಸ್ಥೆ ಬದಲಿಸುತ್ತೇವೆ ಎಂದು ಹೇಳಲಾಗದು. ಎಲ್ಲವನ್ನೂ ಕೂಲಂಕುಶವಾಗಿ ಪರಿಶೀಲಿಸಿ ದೇಶ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದರು.
ಮೂವರು ಶಿಕ್ಷಕಿಯರ ಜಗಳಕ್ಕೆ ಹೆದರಿ ಶಾಲೆ ತ್ಯಜಿಸಿದ 37 ವಿದ್ಯಾರ್ಥಿಗಳು!
ಅವಿಭಜಿತ ಕೋಲಾರ ಜಿಲ್ಲೆಗೆ ಪ್ರತ್ಯೇಕ ವಿಶ್ವವಿದ್ಯಾಲಯಕ್ಕಾಗಿ ನಾವೆಲ್ಲ ಪ್ರಯತ್ನಿಸಿದ್ದೆವು.ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವನಾಗಿ ಭಾಗವಹಿಸಿರುವುದು ಸಂತಸ ತಂದಿದೆ. ಅಮರಾವತಿ ಗ್ರಾಮದ ಬಳಿ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಕಟ್ಟಡಗಳ ನಿರ್ಮಾಣ ಕಾಮಗಾರಿ ವೇಗ ಪಡೆದುಕೊಳ್ಳಬೇಕಿದೆ.ಪದವಿ, ಸ್ನಾತಕೋತ್ತರ ಪದವಿ ಪಡೆದು ನಿಮ್ಮ ಭವಿಷ್ಯದ ಜತೆಗೆ ದೇಶದ ಭವಿಷ್ಯವನ್ನು ರೂಪಿಸುವ ಘಟ್ಟದಲ್ಲಿ ನೀವಿದ್ದೀರಿ. ಪಾಲಕರು,ಗುರುಹಿರಿಯರು, ಹುಟ್ಟಿದ ಊರಿಗೆ ಕೀರ್ತಿ ತರುವಂತೆ ನಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸಮಾರಂಬಧಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ನಿರಂಜನ,ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾದ (ಮೌಲ್ಯಮಾಪನ) ಪ್ರೊ,ಡೊಮಿನಿಕ್.ಡಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಪ್ರೊ. ನರಸಿಂಹಮೂರ್ತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.