ಸರ್ಕಾರದಿಂದ ಕಟ್ಟಕಡೆಯ ಮಕ್ಕಳಿಗೂ ಶಿಕ್ಷಣ: ಸಚಿವ ಬಿ.ಸಿ.ನಾಗೇಶ್

By Kannadaprabha NewsFirst Published Feb 4, 2023, 4:57 AM IST
Highlights

ಜನಪ್ರತಿನಿಧಿಗಳು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನವನ್ನು ಉಪಯೋಗಿಸಿಕೊಂಡು ಹೇಗೆ ಉತ್ತಮವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದೆಂಬುದಕ್ಕೆ ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಅವರು ಮಾದರಿಯಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ಶಿರಾ (ಫೆ.3) : ಜನಪ್ರತಿನಿಧಿಗಳು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನವನ್ನು ಉಪಯೋಗಿಸಿಕೊಂಡು ಹೇಗೆ ಉತ್ತಮವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದೆಂಬುದಕ್ಕೆ ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಅವರು ಮಾದರಿಯಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ನಗರದ ಸರ್ಕಾರಿ ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಚಿದಾನಂದ್‌ ಎಂ.ಗೌಡ ಅವರು ಸುಮಾರು 5 ಕೋಟಿ ರುಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ಶಾಲಾ ಕೊಠಡಿಗಳನ್ನು ಹೈಟೆಕ್‌ ಮಾದರಿಯಲ್ಲಿ ನಿರ್ಮಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನವನ್ನು ಹೆಚ್ಚು ಬಳಕೆ ಮಾಡಿರುವುದಕ್ಕೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದ ಅವರು ದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಏಕೆ ಬರಬೇಕೆಂದರೆ, ಬಿಜೆಪಿ ಸರ್ಕಾರ ಬಂದಾಗ ಶಿಕ್ಷಣಕ್ಕೆ ಒತ್ತು ಕೊಡುತ್ತದೆ. ಕಟ್ಟಕಡೆಯ ಮಕ್ಕಳಿಗೂ ಶಿಕ್ಷಣ ನೀಡುವ ಕೆಲಸವನ್ನು ಮಾಡುತ್ತದೆ. ಆದ್ದರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.

ತುಮಕೂರು: ಫೆ.6 ಕ್ಕೆ ಪ್ರಧಾ​ನಿ​ಯಿಂದ ಹೆಲಿ​ಕಾ​ಪ್ಟರ್‌ ತಯಾರಿಕಾ ಉದ್ಘಾ​ಟ​ನೆ...

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಮನುಷ್ಯ ಯಾವುದೇ ಕೆಲಸ ಮಾಡಿದರೂ ಅದನ್ನು ಇಚ್ಛಾಶಕ್ತಿಯಿಂದ ಮಾಡಿದರೆ ಅದರಲ್ಲಿ ಅವನು ಯಶಸ್ವಿಯಾಗುತ್ತಾನೆ ಎಂಬುದಕ್ಕೆ ಚಿದಾನಂದ್‌ ಎಂ.ಗೌಡ ಅವರು ಉದಾಹರಣೆಯಾಗಿದ್ದಾರೆ. ಜನಪ್ರತಿನಿಧಿಗಳು ತಮ್ಮ ಅನುದಾನವನ್ನು ಹೇಗೆ ಉತ್ತಮ ಕೆಲಸಗಳಿಗೆ ಸದ್ಬಳಕೆ ಮಾಡಬೇಕು ಎಂಬುದಕ್ಕೆ ಇವರು ಮಾರ್ಗದರ್ಶನ ಮಾಡಿದ್ದಾರೆ. ಸರ್ಕಾರಿ ವ್ಯವಸ್ಥೆಯನ್ನು ಖಾಸಗಿ ವ್ಯವಸ್ಥೆಯ ಕಡೆಗೆ ತೆಗೆದುಕೊಂಡಿದ್ದಾರೆ. ಬಡವರ ಮಕ್ಕಳಿಗೆ ಸರ್ಕಾರಿ ವ್ಯವಸ್ಥೆಯಲ್ಲಿ ಉತ್ತಮ ಶಿಕ್ಷಣ ದೊರಕಲು ಉತ್ತಮ ವ್ಯವಸ್ಥೆ ಮಾಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ವೀರೇಶಾನಂದ ಸರಸ್ವತಿ ಸ್ವಾಮೀಜಿಗಳು ವಿದ್ಯಾರ್ಥಿಗಳಿಗೆ ಆರ್ಶೀವಚನ ನೀಡಿದರು. ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ, ತಹಸೀಲ್ದಾರ್‌ ಮಮತಾ, ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ಉಪಾಧ್ಯಕ್ಷೆ ಅಂಬುಜಾಕ್ಷಿ ನಟರಾಜ್‌, ಎಸ್‌ಡಿಎಂಸಿ ಅಧ್ಯಕ್ಷ ಕರಿಯಣ್ಣ, ಮದ್ದೇವಳ್ಳಿ ರಾಮಕೃಷ್ಣ, ಮದಲೂರು ಮಾಸ್ಟರ್‌, ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ನಿವೃತ್ತ ಶಿಕ್ಷಕ ಕುಮಾರ್‌ ಸೇರಿದಂತೆ ಹಲವರು ಹಾಜರಿದ್ದರು.

 

Education: ಬೋರ್ಡ್‌ ಪರೀಕ್ಷೆ ವಿರುದ್ಧ ಶಾಲೆಗಳು ಹೈಕೋರ್ಟ್‌ಗೆ

ಸರ್ಕಾರಿ ಶಾಲೆ ಅಭಿವೃದ್ಧಿಗೆ ಪಣ: ಎಂಎಲ್ಸಿ

ವಿಧಾನ ಪರಿಷತ್‌ ಸದಸ್ಯ ಚಿದಾನಂದ್‌ ಎಂ.ಗೌಡ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಬೇಕು. ಅದಕ್ಕೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಂತೆಯೇ ಸುಸಜ್ಜಿತವಾಗಿ ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶದಿಂದ ಹಾಗೂ ರಾಜ್ಯದಲ್ಲಿಯೇ ಒಂದು ಮಾದರಿ ಶಾಲೆಯನ್ನು ನಿರ್ಮಿಸಬೇಕು ಎಂದು ಸುಮಾರು 5 ಕೋಟಿ ರು. ವೆಚ್ಚದಲ್ಲಿ ಸುಮಾರು 10 ಕೊಠಡಿಗಳುಳ್ಳ ವಿಶಾಲವಾದ ಕೊಠಡಿಗಳುಳ್ಳ ಹಾಗೂ ಹೈಟೆಕ್‌ ಶೌಚಾಲಯಗಳುಳ್ಳ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಅದೇ ರೀತಿ ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜಿನ ಸುತ್ತ ಸುಮಾರು 10 ಎಕರೆ ಸುತ್ತಳತೆಯ ಪ್ರದೇಶಕ್ಕೆ ಸುಸಜ್ಜಿತವಾದ ಕಾಂಪೌಂಡ್‌ ನಿರ್ಮಿಸಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ ಒದಗಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಎಲ್ಲರಿಗೂ ಶಿಕ್ಷಣ ಸಿಗುವುದಿಲ್ಲ. ದೀನದಲಿತರು, ಬಡವರ ಮಕ್ಕಳಿಗೆ ಖಾಸಗಿ ಶಾಲೆಗಳಿಗೆ ಸೇರ್ಪಡೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಪಣ ತೊಟ್ಟಿದ್ದೇನೆ ಎಂದರು.

click me!