ಗುಲ್ಬರ್ಗ ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಸೆ.14ರಿಂದ ಆರಂಭ| ಆರನೇ ಸೆಮಿಸ್ಟರ್‌ನ ರೆಗ್ಯುಲರ್ ಹಾಗೂ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ರಿಪಿಟರ್ಸ್ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಬಹುದು|
ಕಲಬುರಗಿ(ಸೆ.09): ಗುಲ್ಬರ್ಗ ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಸೆ.14ರಿಂದ ನಡೆಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿ.ವಿ. ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ, ಆರನೇ ಸೆಮಿಸ್ಟರ್‌ನ ರೆಗ್ಯುಲರ್ ಹಾಗೂ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ರಿಪಿಟರ್ಸ್ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಬಹುದು.
ಉಳಿದ ವಿದ್ಯಾರ್ಥಿಗಳಿಗೆ ನೇರವಾಗಿ ಮುಂದಿನ ಸೆಮಿಸ್ಟರ್‌ಗೆ ಬಡ್ತಿ ನೀಡಲಾಗುತ್ತಿದೆ ಎಂದರು. ಈ ಹಿಂದೆ ನಿಗದಿಯಂತೆ ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಎಸ್‌ಡಬ್ಯೂ, ಬಿವಿಎ ಪದವಿಯ ಪರೀಕ್ಷೆಗಳು ಸೆ 8ರಿಂದ ಆರಂಭವಾಗಬೇಕಿತ್ತು. ಆದರೆ, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19 ಸೋಂಕು ತಡೆಗೆ ಪೂರ್ವ ಸಿದ್ಧತೆಗಳು ಮಾಡಿಕೊಳ್ಳದ್ದರಿಂದ ಹಾಗೂ ಪರೀಕ್ಷಾ ಶುಲ್ಕ ಭರ್ತಿಯಲ್ಲಿ ತಾಂತ್ರಿಕ ಕಾರಣಗಳಿಂದ ದಿಢೀರನೆ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ಡೆಡ್ಲಿ ಕೊರೋನಾ ಮಧ್ಯೆ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿದ್ಧತೆ
ಸೆ 8ರ ಬದಲು ಈಗ ಸೆ.14ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ತಿಳಿಸಿದೆ.