* ಗುಲಬರ್ಗಾ ವಿಶ್ವವಿದ್ಯಾಲಯದ ವಾರಾಂತ್ಯ ನಡೆಯಬೇಕಿದ್ದ ಪರೀಕ್ಷೆಗಳು ರದ್ದು
* ವೀಕೆಂಡ್ ಕರ್ಪ್ಯೂ ಜಾರಿ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು
* ಗುಲಬರ್ಗಾ ವಿವಿ ಮೌಲ್ಯಮಾಪನ ಕುಲಸಚಿವ ಸೋನಾರ್ ನಂದಪ್ಪ ಆದೇಶ
ಕಲಬುರಗಿ, (ಆ.06): ಕೊರೊನಾ ನಿಯಂತ್ರಣಕ್ಕಾಗಿ ಗಡಿ ಜಿಲ್ಲೆಗಳಲ್ಲಿ ಇಂದಿನಿಂದಲೇ (ಆ.06) ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ವಾರಾಂತ್ಯಗಳಂದು ನಡೆಯಬೇಖಿದ್ದ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ.
ರಾಜ್ಯದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಜಾರಿ: ಇಲ್ಲಿದೆ ಹೊಸ ಮಾರ್ಗಸೂಚಿ
ವಾರಾಂತ್ಯ ಕರ್ಫ್ಯೂ ಇರುವ ಕಾರಣ ಆಗಸ್ಟ್ 7 ಮತ್ತು 8 ಜೊತೆಗೆ 14 ರಂದು ನಡೆಯುವ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಪರೀಕ್ಷೆ ರದ್ದು ಮಾಡಿ ಗುಲಬರ್ಗಾ ವಿವಿ ಮೌಲ್ಯಮಾಪನ ಕುಲಸಚಿವ ಸೋನಾರ್ ನಂದಪ್ಪ ಇಂದು (ಆ.06) ಆದೇಶ ಹೊರಡಿಸಿದ್ದಾರೆ.
ರದ್ದುಗೊಂಡ ವಾರಾಂತ್ಯ ಪರೀಕ್ಷೆಯ ದಿನಾಂಕಗಳನ್ನು ಆಗಸ್ಟ್ 27 ರ ನಂತರ ವಿಶ್ವವಿದ್ಯಾಲಯ ಪ್ರಕಟಿಸಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವುದರಿಂದ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಕಲಬುರಗಿ ಜಿಲ್ಲೆ ಸಹ ಮಹಾರಾಷ್ಟ್ರದ ಗಡಿಜಿಲ್ಲೆಯಲ್ಲಿರುವುದರಿಂದ ವೀಕೆಂಟ್ ಕರ್ಫ್ಯೂ ಇರಲಿದೆ. ಆದ್ದರಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ.