ಶಾಲಾ ಶುಲ್ಕ ಬಗ್ಗೆ ನಿಲುವು ತಿಳಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

By Kannadaprabha NewsFirst Published Aug 18, 2021, 8:38 AM IST
Highlights

*  ಶುಲ್ಕ ವಿಷಯದಲ್ಲಿ ಮಧ್ಯಪ್ರವೇಶ ಬೇಡ ಎಂದು ಸುಪ್ರೀಂ ಹೇಳಿದೆ
*  ಈ ಬಗ್ಗೆ ಆ. 31ರೊಳಗೆ ಪ್ರತಿಕ್ರಿಯೆ ನೀಡಿ: ನ್ಯಾಯಪೀಠ
*  ವೇತನ ಪಾವತಿಸದಿದ್ದರೆ ಸಿಬ್ಬಂದಿ ಕೆಲಸ ಬಿಟ್ಟು ಹೋಗುವ ಸಾಧ್ಯತೆ 
 

ಬೆಂಗಳೂರು(ಆ.18): ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಹೊರಡಿಸಿರುವ ಆದೇಶ ಸಂಬಂಧ ತನ್ನ ಪ್ರತಿಕ್ರಿಯೆ ತಿಳಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ಸೂಚನೆ ನೀಡಿದೆ.

ಖಾಸಗಿ ಶಾಲೆಗಳಲ್ಲಿನ ಪ್ರಸಕ್ತ ಸಾಲಿನ ಬೋಧನಾ ಶುಲ್ಕವನ್ನು ಶೇ.30ರಷ್ಟು ಕಡಿತಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕ್ಯಾಮ್ಸ್‌ ಹಾಗೂ ಇತರೆ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿರುವ ಅರ್ಜಿಗಳು ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದ್ದವು. ಆ ತೀರ್ಪುನ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿಗಳಲ್ಲಿ ಎತ್ತಿರುವ ವಿಚಾರ ಸುಪ್ರೀಂ ಕೋರ್ಟ್‌ ತೀರ್ಪಿಗೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟು, ಸುಪ್ರೀಂ ಕೋರ್ಟ್‌ ತೀರ್ಪು ಕುರಿತು ಸರ್ಕಾರ ಪ್ರತಿಕ್ರಿಯೆ ನೀಡಬೇಕು ಎಂದು ಸೂಚಿಸಿ ವಿಚಾರಣೆಯನ್ನು ಆ.31ಕ್ಕೆ ಮುಂದೂಡಿತು.

ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಖಾಸಗಿ ಶಾಲೆಗಳ ನ್ಯಾಯಸಮ್ಮತವಾಗಿ ನಿಗದಿಪಡಿಸಿದ ಶುಲ್ಕದಲ್ಲಿ ಸರ್ಕಾರ ಅನಗತ್ಯವಾಗಿ ಹಸ್ತಕ್ಷೇಪ ಮಾಡಬಾರದು. ಹಸ್ತಕ್ಷೇಪ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬುದಾಗಿ ಇಂಡಿಯನ್‌ ಸ್ಕೂಲ್‌ ಆಫ್‌ ಜೋಧಪುರ ಮತ್ತು ರಾಜಸ್ಥಾನ ಸರ್ಕಾರ ನಡುವಿನ ಪ್ರಕರಣದಲ್ಲಿ 2021ರ ಮೇ 3ರಂದು ಸುಪ್ರೀಂ ಕೊರ್ಟ್‌ ಹೊರಡಿಸಿರುವ ತೀರ್ಪಿನ ಪ್ರತಿಯನ್ನು ವಿಚಾರಣೆ ವೇಳೆ ಅರ್ಜಿದಾರ ಸಂಘದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು.

ಹಿನ್ನೆಲೆ:

ರಾಜ್ಯ ಸರ್ಕಾರ ಕಳೆದ ಜನೆವರಿ 29 ರಂದು ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕವನ್ನು ಶೇ.30ರಷ್ಟು ಕಡಿತಗೊಳಿಸಿತ್ತು. ಬೋಧನಾ ಶುಲ್ಕ ಬಿಟ್ಟು ಇತರೆ ಯಾವುದೇ ಶುಲ್ಕ ಪಡೆಯುವಂತಿಲ್ಲ ಎಂದು ಆದೇಶದಲ್ಲಿ ಖಾಸಗಿ ಶಾಲೆಗಳಿಗೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿರುವ ಅರ್ಜಿದಾರ ಸಂಘ, ಸರ್ಕಾರದ ಆದೇಶದಿಂದ ಶುಲ್ಕ ಸಂಗ್ರಹ ಪ್ರಮಾಣ ಕಡಿಮೆಯಾಗಲಿದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವೇತನ ಪಾವತಿಸಲು ಸಾಧ್ಯವಾಗುವುದಿಲ್ಲ. ವೇತನ ಪಾವತಿಸದಿದ್ದರೆ ಸಿಬ್ಬಂದಿ ಕೆಲಸ ಬಿಟ್ಟು ಹೋಗುವ ಸಾಧ್ಯತೆಯಿದೆ. ಆಗ ಖಾಸಗಿ ಶಾಲೆಗಳ ಸಮರ್ಪಕ ಕಾರ್ಯನಿರ್ವಹಣೆ ಮಾಡಲಾಗದು. ಮತ್ತೊಂದೆಡೆ ಶುಲ್ಕ ಕಡಿತಗೊಳಿಸಿದ ಆದೇಶ ಶಿಕ್ಷಣ ಕಾಯ್ದೆಯ ನಿಯಮಗಳ ಸ್ಪಷ್ಟಉಲ್ಲಂಘನೆ ಎಂದು ಆಕ್ಷೇಪಿಸಿತ್ತು.
 

click me!