* ಹಿಜಾಬ್ ವಿವಾದ ಅಂತಿಮ ಘಟ್ಟಕ್ಕೆ
* ಹೈಕೋರ್ಟ್ನಿಂದ ನಾಳೆ (ಮಂಗಳವಾರ) ತೀರ್ಪು ಪ್ರಕ
* ಸಮವಸ್ತ್ರದ ಜತೆ ಹಿಜಾಬ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ
ಬೆಂಗಳೂರು, (ಮಾ.14): ಉಡುಪಿಯ ಕಾಪು ತಾಲೂಕಿನ ಕೂಸು ಹಿಜಾಬ್ ವಿವಾದ (Hijab Row), ನಂತರ ಜಿಲ್ಲೆಯ ಇತರ ಭಾಗಗಳಿಗೂ ವ್ಯಾಪಿಸಿ ಅಲ್ಲಿಂದ ರಾಜ್ಯದೆಲ್ಲಡೆ ಹರಿದಾಡಿ, ದೇಶದಲ್ಲಿ ಟ್ರೆಂಡಿಂಗ್ ನಲ್ಲಿ ಸುದ್ದಿಮಾಡಿದೆ.
ಇದೀಗ ಹಿಜಾಬ್ ವಿವಾದ ಅಂತಿಮ ಘಟ್ಟ ತಲುಪಿದ್ದು ನಾಳೆ(ಮಾ.15) ಕರ್ನಾಟಕ ಹೈಕೋರ್ಟ್ (Karnataka High Court) ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಲಿದೆ.
undefined
ಸ್ಟುಡೆಂಟ್ಸ್ ಸಮವಸ್ತ್ರ ಒತ್ತಟ್ಟಿಗೆ ಇರಲಿ.. ಮಕ್ಕಳ ಪೋಷಕರಿಗೂ ಡ್ರೆಸ್ ಕೋಡ್ !
ಸಮವಸ್ತ್ರದ ಜತೆ ಹಿಜಾಬ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಮಂಗಳವಾರ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠ ಅಂತಿಮ ತೀರ್ಪು ನೀಡಲಿದೆ.
ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ಪೂರ್ಣ ಪೀಠದಿಂದ ತೀರ್ಪು ಹೊರಬೀಳಲಿದೆ. ಇದರಿಂದ ತೀರ್ಪು ಏನಾಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳ ವಿಚಾರಣೆ ಪೂರ್ಣಗೊಂಡಿದ್ದು, ಕರ್ನಾಟಕ ಹೈಕೋರ್ಟ್ (Karnataka High Court ) ತ್ರಿಸದಸ್ಯ ಪೂರ್ಣ ಪೀಠ, ತೀರ್ಪನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ತೀರ್ಪು ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಖಾಜಿ ಜೈಬುನ್ನೀಸಾ ಮೊಹಿಯಿದ್ದೀನ್ ಅವರನ್ನು ಒಳಗೊಂಡ ಪೂರ್ಣ ಪೀಠ ಸುಮಾರು ದಿನಗಳ ಕಾಲ ವಿಚಾರಣೆ ನಡೆಸಿದೆ.
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ವಿಚಾರ ಈಗ ಸಾಂವಿಧಾನಿಕ ಪ್ರಶ್ನೆಯಾಗಿ ಪರಿಣಮಿಸಿದೆ. ಹಿಜಾಬ್ ನಿರ್ಬಂಧ ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಫೆಬ್ರವರಿ 26ರಂದು ಮುಕ್ತಾಯಗೊಂಡಿದ್ದು ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಪೂರ್ಣ ಪೀಠ ಸುಮಾರು 11 ದಿನಗಳ ಕಾಲ ವಿಚಾರಣೆ ನಡೆಸಿತ್ತು. ಹಿಜಾಬ್‌ಗೆ ಅವಕಾಶ ನೀಡಬೇಕೆಂದು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ಪರ ದೇವದತ್ ಕಾಮತ್ ಸೇರಿದಂತೆ ಇತರೆ ಹಿರಿಯ ವಕೀಲರು ವಾದ ಮಂಡಿಸಿದ್ದರು. ಇನ್ನು ಸರ್ಕಾರ ಪರ ವಕೀಲ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪ್ರತಿವಾದ ಮಾಡಿದ್ದರು.
ಹಿಜಾಬ್ ಧರಿಸಿದ್ದಕ್ಕಾಗಿ ಸರ್ಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಬಾಲಕಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿ ವಿಚಾರಣೆಯ ವಾದ-ಪ್ರತಿವಾದಗಳನ್ನ ಕರ್ನಾಟಕ ಹೈಕೋರ್ಟ್ ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಿತ್ತು.
ಮಧ್ಯಂತರ ಆದೇಶ ನೀಡಿದ್ದ ಕೋರ್ಟ್
ಈ ಹಿಂದೆ ಹೈಕೋರ್ಟ್ ತ್ರಿದಸ್ಯ ಪೀಠವು ಮೌಖಿಕ ಸಂದೇಶವನ್ನು ನೀಡಿದ್ದು, ಅಂತಿಮ ತೀರ್ಪಿನ ವರೆಗೆ ಶಾಲೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮದ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತ್ತು. ಆದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಕಾಲೇಜಿಗಳಿಗೆ ಆಗಮಿಸಿದ್ದಾರೆ. ಅಲ್ಲದೇ ಹಿಜಾಬ್‌ಗೆ ಅವಕಾಶ ನೀಡಬೇಕೆಂದು ಕಾಲೇಜುಗಳ ಮುಂದೆ ಪ್ರತಿಭಟನೆಗಳು ನಡೆದಿದ್ದವು.
ಕುತೂಹಲ ಮೂಡಿಸಿದ ಕೋರ್ಟ್ ತೀರ್ಪು
ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು (Hijab Row) ಮುಂದುವರೆದಿದ್ದು, ಹಿಜಾಬ್ ತೆಗೆಯುವುದಿಲ್ಲ. ಪ್ರತ್ಯೇಕ ಕೊಠಡಿಯಲ್ಲಿ ಪಾಠ ಕೇಳಲ್ಲ. ಎಲ್ಲರ ಜೊತೆ ಹಿಜಾಬ್ ಹಾಕಿಕೊಂಡೆ ಪಾಠ ಪ್ರವಚನ ಕೇಳುತ್ತೇವೆ ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಕರ್ನಾಟಕ ಹೈಕೋರ್ಟ್ ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತ್ತಿದ್ದು, ತೀರ್ಪು ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.