ದಕ್ಷಿಣ ಕನ್ನಡ ಕಾಲೇಜುಗಳಲ್ಲಿ ಗುರುವಾರದಿಂದ ಪದವಿ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಆದರೆ, ಬಹುತೇಕ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಮಂಗಳೂರು(ಮಾ.18): ಹಿಜಾಬ್ ತೀರ್ಪು (Hijab Verdict) ವಿರುದ್ಧ ಮುಸ್ಲಿಂ ಸಂಘಟನೆಗಳ ಕರ್ನಾಟಕ ಬಂದ್ (Karnataka bandh) ಕರೆ ನಡುವೆಯೇ ಜಿಲ್ಲೆಯ ಕಾಲೇಜುಗಳಲ್ಲಿ ಗುರುವಾರದಿಂದ ಪದವಿ ಸೆಮಿಸ್ಟರ್ ಪರೀಕ್ಷೆ (Semister Exam) ಆರಂಭವಾಗಿದೆ. ಆದರೆ, ಬಹುತೇಕ ಮುಸ್ಲಿಂ ವಿದ್ಯಾರ್ಥಿ (Muslim Student), ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಮಂಗಳೂರು (Mangaluru) ಕಾರ್ ಸ್ಟ್ರೀಟ್ ಪದವಿ ಕಾಲೇಜಿನಲ್ಲಿ ಪದವಿ ಪರೀಕ್ಷೆಗೆ ಒಟ್ಟು 52 ಮುಸ್ಲಿಂ ವಿದ್ಯಾರ್ಥಿಗಳ ಪೈಕಿ 27 ಮಂದಿ ಮಾತ್ರ ಹಾಜರಾಗಿದ್ದಾರೆ. ಇವರಲ್ಲಿ 24 ಮಂದಿ ವಿದ್ಯಾರ್ಥಿಗಳು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ಪರೀಕ್ಷೆ ಬರೆದಿದ್ದಾರೆ.
ಸ್ನಾತಕೋತ್ತರ ತರಗತಿಯಲ್ಲಿ 7 ಮಂದಿ ಮುಸ್ಲಿಂ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗುರುವಾರದಿಂದ ಮಾ.23ರವರೆಗೆ ದಿನದಲ್ಲಿ ವಿವಿಧ ಪದವಿಗಳ ಸೆಮಿಸ್ಟರ್ ಪರೀಕ್ಷೆ ಇಲ್ಲಿ ನಡೆಯುತ್ತಿದೆ. ಮೂಲ್ಕಿಯ ಹಳೆಯಂಗಡಿ ಸರ್ಕಾರಿ ಪದವಿ ಕಾಲೇಜಿನ 25 ಹಾಗೂ ಪೊಂಪೈ ಕಾಲೇಜಿನ 25 ಮಂದಿ ಮುಸ್ಲಿಂ ವಿದ್ಯಾರ್ಥಿಗಳು ಗುರುವಾರ ತರಗತಿಗೆ ಆಗಮಿಸಿಲ್ಲ.
ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಬುಧವಾರ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿ ಮತ್ತೆ ವಿವಾದಕ್ಕೆ ಕಾರಣವಾಗಿತ್ತು. ಆದರೆ, ಗುರುವಾರ ಯಾವುದೇ ಮುಸ್ಲಿಂ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿರಲಿಲ್ಲ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಸ್ಲಿಮರು ನಡೆಸುವ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅಲ್ಲದೆ, ಖಾಸಗಿ ಕಾಲೇಜು ಮತ್ತು ಟ್ಯೂಷನ್ ತರಗತಿಗಳಿಗೂ ಮುಸ್ಲಿಂ ವಿದ್ಯಾರ್ಥಿಗಳು ಹಾಜರಾಗದೆ ಬಂದ್'ಗೆ ಬೆಂಬಲ ವ್ಯಕ್ತಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.
West Bengal: 10ನೇ ತರಗತಿ ಪರೀಕ್ಷೆ ಬರೆದಿದ್ದಕ್ಕೆ ಅಪ್ರಾಪ್ತ ಪತ್ನಿ ಮೇಲೆ ಆ್ಯಸಿಡ್ ಎರಚಿದ ಪತಿ!
ಹೈಕೋರ್ಟ್ ಆದೇಶದ ಬಳಿಕ ಗೈರಾದವರಿಗೆ ಮರುಪರೀಕ್ಷೆ ಇಲ್ಲ: ಹಿಜಾಬ್ ವಿವಾದ (Hijab Row) ಹಿನ್ನೆಲೆಯಲ್ಲಿ ಪರೀಕ್ಷೆಗಳಿಗೆ ಗೈರು ಹಾಜರಾದ ವಿದ್ಯಾರ್ಥಿನಿಯರಿಗೆ ಕೆಲವು ಷರತ್ತುಗಳೊಂದಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲು ರಾಜ್ಯ ಸರ್ಕಾರ (Karnataka Government) ನಿರ್ಧರಿಸಿದೆ. ಹಿಜಾಬ್ (Hijab) ಧರಿಸಲು ಅನುಮತಿಸಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾಗಿರುವ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಬಂದರೆ ಮತ್ತೊಮ್ಮೆ ಪರೀಕ್ಷೆ (Exam) ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಗುರುವಾರ ಬಿಜೆಪಿ ಶಾಸಕ ರಘುಪತಿ ಭಟ್ (bjp mla raghupathi bhat) ಅವರು ಸದನದಲ್ಲಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು (J.C.Madhu Swamy), ಹೈಕೋರ್ಟ್ ಅಂತಿಮ ಆದೇಶ ಬರುವ ಮೊದಲು ಹಿಜಾಬ್'ಗೆ ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಪರೀಕ್ಷೆಗೆ ಗೈರಾದವರಿಗೆ ಮತ್ತೊಂದು ಅವಕಾಶ ನೀಡಲು ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು. ಆದರೆ, ಹೈಕೋರ್ಟ್ (High court) ಅಂತಿಮ ಆದೇಶದ ಬಳಿಕವೂ ಪರೀಕ್ಷೆ ಬಹಿಷ್ಕರಿಸಿ ಹೊರ ಹೋದವರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Bengaluru Udyoga Mela 2022: ಬೆಂಗಳೂರಿನಲ್ಲಿ ಮಾರ್ಚ್ 27ರಂದು ಉದ್ಯೋಗ ಮೇಳ
ಹಿಜಾಬ್ ವಿವಾದ ಕುರಿತು ಹೈಕೋರ್ಟ್‌ನ ಆದೇಶದ ವಿರುದ್ಧ ಅಸಮಾಧಾನಗೊಂಡು ಬಂದ್"ಗೆ ಕರೆ ನೀಡಲಾಗಿತ್ತು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೆಲವರಿಗೆ ತೀರ್ಪಿನ ಬಗ್ಗೆ ಅಸಮಾಧಾನವಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕಿದೆ, ಬಂದ್ ಕರೆ 'ನ್ಯಾಯಾಂಗ ನಿಂದನೆ'ಯಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಪ್ರತಿಯೊಬ್ಬರೂ ನ್ಯಾಯಾಲಯದ ಆದೇಶ ಪಾಲಿಸಬೇಕು. "ಆದರೆ ಕೆಲವರು ತೀರ್ಪಿನಿಂದ ಅತೃಪ್ತರಾಗಿದ್ದರೆ, ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಅವರಿಗಿದೆ ಎಂದು ಹೇಳಿದರು.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಠೆ ಮಾಡಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೆ ಚಾಮರಾಜನಗರದ ಖಾಸಗಿ ಕಾಲೇಜಿನ ಸುಮಾರು 10 ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು.
ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ ನೀಡಿರುವ ತೀರ್ಪನ್ನು ಖಂಡಿಸಿ ನಗರದ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದರು.
ಹಿಜಾಬ್ ಧರಿಸಲು ಅವಕಾಶ ನೀಡದಿದ್ದರೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವುದಿಲ್ಲ ಎಂದು ಅವರು ಹೇಳಿದರು. ಹೈಕೋರ್ಟ್ ತೀರ್ಪು ನೀಡಿದೆ ನ್ಯಾಯ ನೀಡಿಲ್ಲ, ಹಿಜಾಬ್ ನನ್ನ ಹೆಮ್ಮೆ, ನನ್ನ ಆಯ್ಕೆ, ನನ್ನ ಸ್ವಾತಂತ್ರ್ಯ ನಮ್ಮ ಹಕ್ಕು ನಮಗೆ ವಾಪಸ್ ಬೇಕು’ ಸೇರಿದಂತೆ ವಿವಿಧ ಘೋಷಣೆಗಳನ್ನು ಬರೆದಿದ್ದ ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟಿಸಿದರು.