ಹಿಂದಿ ಹೇರಿಕೆಗೆ ಬಿಡಲ್ಲ, ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ: ಸಚಿವ ಮಧು ಬಂಗಾರಪ್ಪ

By Kannadaprabha NewsFirst Published Dec 5, 2023, 4:45 AM IST
Highlights

ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಇಲ್ಲಿ ಯಾವುದೇ ರೀತಿಯಲ್ಲೂ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. 

ವಿಧಾನಪರಿಷತ್ (ಡಿ.05): ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಇಲ್ಲಿ ಯಾವುದೇ ರೀತಿಯಲ್ಲೂ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗಿನ ಶಿಕ್ಷಣವನ್ನು ಮಾತೃಭಾಷೆ ಅಥವಾ ರಾಜ್ಯಭಾಷೆಯಲ್ಲಿಯೇ ನೀಡುವುದನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಅದಕ್ಕೆ ಕೆಲವೊಂದು ಕಾನೂನು ತೊಡಕುಗಳಿವೆ ಎಂದರು. ರಾಜ್ಯದ ಶಾಲೆಗಳಲ್ಲಿ 1ರಿಂದ 5ನೇ ತರಗತಿವರೆಗೆ ಮಾತೃಭಾಷೆ ಅಥವಾ ರಾಜ್ಯ ಭಾಷೆ ಶಿಕ್ಷಣ ಮಾಧ್ಯಮವನ್ನಾಗಿ ಕಡ್ಡಾಯಗೊಳಿಸಿದ ಮಸೂದೆಗೆ ಕೇಂದ್ರ ಸರ್ಕಾರವೂ ಅನುಮತಿ ನೀಡಿಲ್ಲ. 

ಅಲ್ಲದೆ, ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವುದರಿಂದ ಮಕ್ಕಳ ಮೂಲಭೂತ ಹಕ್ಕುಗಳಿಗೆ ಧಕ್ಕೆ ಬರಲಿದೆ. ಸುಪ್ರೀಂಕೋರ್ಟ್‌ ತೀರ್ಪುಗಳೂ ಮಸೂದೆ ಜಾರಿಗೆ ತೊಡಕಾಗಿದೆ. ಹೀಗಾಗಿ ಕನ್ನಡ ಭಾಷೆ ಮಾಧ್ಯಮ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ. ಈ ಕಾರಣ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಹಿಂದಿ ಹೇರಿಕೆಯಂತಹ ಯಾವುದೇ ಪ್ರಯತ್ನಗಳಿಗೂ ಅವಕಾಶವಿಲ್ಲ. ಅದರಲ್ಲೂ ಶಿಕ್ಷಣದಲ್ಲಿ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

Latest Videos

ಬಿಜೆಪಿಯಿಂದ ಜಾತಿ, ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ: ಸಚಿವ ಪ್ರಿಯಾಂಕ್ ಖರ್ಗೆ

ಶಿಕ್ಷಕರ ಸಮಸ್ಯೆ, ಶೈಕ್ಷಣಿಕ ಪ್ರಗತಿಗಾಗಿ ಸಚಿವರಿಗೆ ಮನವಿ: ದಟ್ಟ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶ ಹೊಂದಿರುವ ಹಾಗೂ ಶೈಕ್ಷಣಿಕವಾಗಿ ರಾಜ್ಯದಲ್ಲೇ ಅತ್ಯಂತ ಹಿಂದುಳಿದಿರುವ ಖಾನಾಪುರ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳತ್ತ ಮತ್ತು ತಾಲೂಕಿನಲ್ಲಿ ಓದುತ್ತಿರುವ ಮಕ್ಕಳ ಶೈಕ್ಷಣಿಕ ಪ್ರಗತಿಯತ್ತ ವಿಶೇಷ ಗಮನಹರಿಸುವಂತೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿರುವುದಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ವಿ.ಎಸ್.ಶೆಟ್ಟೆಣ್ಣವರ ತಿಳಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ವಿಷಯ ತಿಳಿಸಿದ ಅವರು, ಖಾನಾಪುರ ಬಿಇಒ ಅವರ ಕಾರ್ಯವೈಖರಿ ಕುರಿತು ಶಿಕ್ಷಕರಲ್ಲಿ ಅಸಮಾಧಾನವಿದೆ. 

ಕಾಂಗ್ರೆಸ್‌ಗೆ ಪ್ರತ್ಯುತ್ತರ ಕೊಡೊ ಶಕ್ತಿ ಜೆಡಿಎಸ್‌-ಬಿಜೆಪಿ ಮೈತ್ರಿಗಿದೆ: ಎಚ್.ಡಿ.ದೇವೇಗೌಡ

ಬಿಇಒ ಶಿಕ್ಷಕರ ಕೆಲಸಗಳನ್ನು ಹಣಕಾಸಿನ ವ್ಯವಹಾರವಿಲ್ಲದೇ ಮಾಡುತ್ತಿಲ್ಲ. ಇತ್ತೀಚೆಗೆ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಅವರೇ ಈ ವಿಷಯವನ್ನು ಖುದ್ದಾಗಿ ಬಹಿರಂಗಪಡಿಸಿದ್ದಾರೆ. ಬಿಇಒ ಅವರು ಕೆಲವು ಸಿಆರ್‌ಪಿಗಳ ಮೂಲಕ ಶಿಕ್ಷಕರಿಂದ ಹಣ ವಸೂಲಿಗೆ ಇಳಿದಿರುವ ಅನೇಕ ಆರೋಪಗಳಿದ್ದು, ಶಿಕ್ಷಣ ಸಚಿವರಿಗೆ ಈ ಎಲ್ಲ ವಿಷಯಗಳ ಕುರಿತಾದ ವಿವರವಾದ ಮನವಿಯನ್ನು ಸಲ್ಲಿಸಿ ಅವರೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ತಾಲೂಕಿನ ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಯತ್ತ ಲಕ್ಷ್ಯ ವಹಿಸಲು ಸಚಿವರನ್ನು ಕೋರಲಾಗಿದೆ ಎಂದು ಮಾಹಿತಿ ನೀಡಿದರು. ತಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಧಿವೇಶನದ ಸಂದರ್ಭದಲ್ಲಿ ತಾಲೂಕಿನ ಸಮಸ್ಯೆಗಳ ಬಗ್ಗೆ ಗಮನಹರಿಸಲಾಗುವುದು ಮತ್ತು ಬಿಇಒ ಅವರ ಕಾರ್ಯವೈಖರಿಯಿಂದ ನೊಂದ ಶಿಕ್ಷಕರಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

click me!