Karnataka SSLC Result 2022 Declared Check: ಫಲಿತಾಂಶ ಪ್ರಕಟ, ಚೆಕ್‌ ಮಾಡೋದು ಹೇಗೆ

By Suvarna News  |  First Published May 19, 2022, 9:42 AM IST

Karnataka sslc result 2022 online check: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದ್ದು ಶೇಕಡ 85.53 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದಿನಂತೆ ವಿದ್ಯಾರ್ಥಿನಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. 


ಬೆಂಗಳೂರು (ಮೇ.19): ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.  ಮೇ 19ರ ಮಧ್ಯಾಹ್ನ 12.30ಕ್ಕೆ ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (karnataka sslc result 2022) ಪ್ರಕಟಿಸಲಾಗುತ್ತಿದ್ದು,  ಮಧ್ಯಾಹ್ನ 1 ಗಂಟೆಗೆ ವೆಬ್‌ಸೈಟ್ https://karresults.nic.in/ ನಲ್ಲಿ  ಪ್ರಕಟಿಸಲಾಗುವುದು ಎಂದು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್ (Minister of Primary and SecondEducation BC Nagesh) ಟ್ವೀಟ್ ಮಾಡಿ ಈಗಾಗಲೇ ಮಾಹಿತಿ ನೀಡಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ  ಮಂಡಳಿ (Karnataka Secondary Education Examination Board) ಇದಕ್ಕೆ ಸಂಪೂರ್ಣ ತಯಾರಿ ಮಾಡಿಕೊಂಡಿದೆ. 

ಲೈವ್ ಅಪ್ಡೇಟ್ ಇಲ್ಲಿ ನೋಡಿKARNATAKA SSLC RESULT 2022: ಕೆಲವೇ ಗಂಟೆಗಳಲ್ಲಿ ಹತ್ತನೇ ತರಗತಿ ಫಲಿತಾಂಶ 

Tap to resize

Latest Videos

ಫಲಿತಾಂಶ ನೋಡಲು ಇಚ್ಚಿಸುವ ಅಭ್ಯರ್ಥಿಗಳು https://karresults.nic.in/ ಗೆ ಭೇಟಿ ನೀಡಿ ಮೊದಲಿಗೆ ತಮ್ಮ ಪರೀಕ್ಷಾ ರಿಜಿಸ್ಟರ್ ನಂಬರ್ ಅನ್ನು ದಾಖಲಿಸಿ. ತದ ನಂತರ ಹಾಲ್ ಟಿಕೆಟ್ ನಲ್ಲಿ ನಮೂದಿಸಿರುವ ಹುಟ್ಟಿದ ದಿನಾಂಕ, ತಿಂಗಳು ಮತ್ತು ವರ್ಷವನ್ನು ನಮೂದಿಸಿ ಬಳಿಕ ಸಬ್‌ಮಿಟ್ ಬಟನ್ ಒತ್ತಿ. ಕೂಡಲೇ ನಿಮ್ಮ ಅಂಕಗಳ ಪಟ್ಟಿ ವಿಷಯಾವಾರು ಕಾಣಿಸಿಕೊಳ್ಳಯತ್ತದೆ. ಮುಂದಿನ ದಾಖಲಾತಿಗೆ ಇದನ್ನು ಡೌನ್ ಲೋಡ್ ಮಾಡಿ ಇಟ್ಟುಕೊಳ್ಳಿ. 

ಇಷ್ಟು ಮಾತ್ರವಲ್ಲ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

 

ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.

ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.

— B.C Nagesh (@BCNagesh_bjp)

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಗ್ಗೆ ಒತ್ತಡವೇ: 08046110007 ಸಂಖ್ಯೆಗೆ ಕರೆ ಮಾಡಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಒತ್ತಾಸೆ ಮೇರೆಗೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶದ ಒತ್ತಡ ನಿರ್ವಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ‘ಮಾನಸಿಕ ಆರೋಗ್ಯ ಸಹಾಯವಾಣಿ- 08046110007’ ಆರಂಭಿಸಲಾಗಿದೆ. ಇಂದು(ಗುರುವಾರ) ಎಸ್ಸೆಸ್ಸೆಲ್ಸಿ ಫಲಿತಾಂಶ ಘೋಷಣೆ ಆಗಲಿದ್ದು, ಈ ಹಿನ್ನೆಲೆಯಲ್ಲಿ ಸಹಾಯವಾಣಿಗೆ ಚಾಲನೆ ನೀಡಲಾಗಿದೆ.

 

ಎಸ್ ಎಸ್ ಎಲ್ ಸಿ ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು 080 46110007 ಸಂಖ್ಯೆಗೆ ಕರೆ ಮಾಡಿ. pic.twitter.com/bH9Rso14Ba

— Dr Sudhakar K (@mla_sudhakar)

ಆರೋಗ್ಯ ಇಲಾಖೆಯು ನಿಮ್ಹಾನ್ಸ್‌ ಸಹಕಾರದೊಂದಿಗೆ ಸಹಾಯವಾಣಿಯನ್ನು ನಿರ್ವಹಿಸಲಿದೆ. ಫಲಿತಾಂಶದಿಂದ ಒತ್ತಡಕ್ಕೆ ಒಳಗಾಗುವ ವಿದ್ಯಾರ್ಥಿಗಳು ನೇರವಾಗಿ ಸಹಾಯವಾಣಿಗೆ ಕರೆ ಮಾಡಿ ತಜ್ಞರು, ಆಪ್ತಸಮಾಲೋಚಕರಿಂದ ನೆರವು ಪಡೆದುಕೊಳ್ಳಬಹುದಾಗಿದೆ. 

Karnataka SSLC Result 2022: ಮಧ್ಯಾಹ್ನ 1 ಗಂಟೆಗೆ SSLC ಫಲಿತಾಂಶ

ಫಲಿತಾಂಶ ಹಿನ್ನೆಲೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿರುವ ಡಾ. ಸುಧಾಕರ್‌, ‘ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷೆಯಲ್ಲಿದ್ದಾರೆ. ಫಲಿತಾಂಶಗಳು ಅಂದುಕೊಂಡ ಹಾಗೇ ಬರಲಿ, ಬಾರದೇ ಇರಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಫಲಿತಾಂಶ ಜೀವನದ ಅಂತ್ಯವಲ್ಲ. ಆರಂಭವೂ ಅಲ್ಲ. ಅದು ಶೈಕ್ಷಣಿಕ ಜೀವನದ ಒಂದು ಪ್ರಕ್ರಿಯೆ. ಸೋಲು-ಗೆಲುವು ಎರಡೂ ಜೀವನದ ಭಾಗ. ದೃತಿಗೆದೆ ಮುನ್ನುಗ್ಗಿ’ ಎಂದು ಹಾರೈಸಿದ್ದಾರೆ.

"

ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಫಲಿತಾಂಶಕ್ಕೆ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಸಚಿವರು ಶುಭ ಹಾರೈಸಿದ್ದಾರೆ.

click me!