ಇಗ್ನೋ ಮರುನೋಂದಣಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಜನವರಿ ಸೆಶನ್ ಅರ್ಜಿ ಸಲ್ಲಿಸಲು ಕೊನೆ ದಿನವನ್ನು ಫೆಬ್ರವರಿ 21, 2022 ವಿಸ್ತರಿಸಲಾಗಿದ್ದು, ಈ ಮೂಲಕ 5ನೇ ಬಾರಿಗೆ ಇಗ್ನೋ ಮರುನೋಂದಣಿ ಅರ್ಜಿಯನ್ನು ವಿಸ್ತರಿಸಿದೆ.
ಬೆಂಗಳೂರು: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (Indira Gandhi National Open University) 2022ರ ಜನವರಿ ಸೆಶನ್ ಪದವಿ ಮತ್ತು ಸ್ನಾತಕೋತ್ತರ ಪದವಿ ಮತ್ತು ಪಿಜಿ ಡಿಪ್ಲೋಮಾ ಮತ್ತು ಪಿಜಿ ಸರ್ಟಿಫಿಕೇಟ್ ಕೋರ್ಸ್ ಗಳ ಮರುನೋಂದಣಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಐದನೇ ಬಾರಿಗೆ ವಿಸ್ತರಣೆ ಮಾಡಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 21, 2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ https://ignouadmission.samarth.edu.in/ ಗೆ ಭೇಟಿ ನೀಡಿ.
ಪ್ರತಿ ವರ್ಷವು ಇಗ್ನೋ (IGNOU) ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಪ್ರವೇಶಾತಿ (Admission) ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬಂದ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಇಗ್ನೋ ಬಿಡುಗಡೆ ಮಾಡಲಿದೆ. ಈಗಾಗಲೇ ಇಗ್ನೋದಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಮುಂದಿನ ಸೆಮಿಸ್ಟರ್ ಅಥವಾ ಮುಂದಿನ ವರ್ಷಕ್ಕೆ ಮರುನೋಂದಣಿಯನ್ನು ಕೂಡ ಮಾಡಿಕೊಳ್ಳಬಹುದು ಮತ್ತು ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಬೇಕು ಎಂದು ಇಗ್ನೋ ತಿಳಿಸಿದೆ.
ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್ ತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಆನ್‌ಲೈನ್ ಕೋರ್ಸ್‌ಗಳು : ಆಸಕ್ತ ಅಭ್ಯರ್ಥಿಗಳು ಇಗ್ನೊ ಆನ್‌ಲೈನ್ ಪೋರ್ಟಲ್ iop.ignouonline.ac.in ಮೂಲಕ ಅಥವಾ ignouadmission.samarth.edu.in ಪೋರ್ಟಲ್ ಮೂಲಕ ಈ ಆನ್‌ಲೈನ್ ಕಾರ್ಯಕ್ರಮಗಳಿಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
Air India New Advisory For Cabin Crew: ಕನಿಷ್ಠ ಆಭರಣ ಧರಿಸಿ, ಏರ್ ಇಂಡಿಯಾದಿಂದ ಸಿಬ್ಬಂದಿಗಳಿಗೆ ಹೊಸ ರೂಲ್ಸ್
ಇಗ್ನೊದ ಪ್ರಮುಖ ಮಾರ್ಗಸೂಚಿಗಳು ಇಂತಿದೆ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿ ಮಾಡಲು ತಮ್ಮದೇ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಬಳಸಬೇಕು. ಭೀಮ್ ಆಪ್ ಸೇರಿದಂತೆ ಯುಪಿಐ ಮೂಲಕ ಪಾವತಿಸಬಹುದು. ಅಂತರಾಷ್ಟ್ರೀಯ ವಿಭಾಗದ ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಆನ್‌ಲೈನ್ ಪಾವತಿ ಆಯ್ಕೆಗಳನ್ನು ಬಳಸಬಹುದು. ಒಂದು ವೇಳೆ ವಿದ್ಯಾರ್ಥಿ ಮಾಡಿದ ಆನ್‌ಲೈನ್ ಪಾವತಿ ಅಪ್‌ಡೇಟ್ ಆಗದಿದ್ದರೆ ತಕ್ಷಣವೇ ಎರಡನೇ ಭಾರಿ ಪಾವತಿ ಪ್ರಯತ್ನ ಮಾಡಬೇಕಾಗಿಲ್ಲ. ವಿದ್ಯಾರ್ಥಿಗಳು ಒಂದು ದಿನ ಕಾದು ಪರಿಶೀಲಿಸಿಕೊಂಡು ಆಗಿಲ್ಲ ಎಂದಾದರೆ ಮಾತ್ರ ಆನ್‌ಲೈನ್ ಪಾವತಿ ಮಾಡಬೇಕು. ಒಂದು ವೇಳೆ ವಿದ್ಯಾರ್ಥಿಯು ಅರ್ಜಿ ಶುಲ್ಕವನ್ನು ಎರಡು ಬಾರಿ ಪಾವತಿಸಿದ್ದರೆ, ಅವರ ಪಾವತಿಗಳಲ್ಲಿ ಒಂದನ್ನು ಆಯಾ ಖಾತೆಗೆ ಮರುಪಾವತಿ ಮಾಡಲಾಗುತ್ತದೆ. ಇಗ್ನೊ ಜನವರಿ 2022 ಪ್ರವೇಶಕ್ಕಾಗಿ ನೋಂದಾಯಿಸಿಕೊಳ್ಳುವ ಅಥವಾ ಮರು ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳು ಮತ್ತು ವಿವರಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.
IGNOU ಜನವರಿ 2022 ಸೆಷನ್ ಮರುನೊಂದಣಿ ಹೇಗೆ ?