ಪರೀಕ್ಷೆ ಇಲ್ಲದೆ ದ್ವಿತೀಯ ಪಿಯುಸಿ ರಿಪೀಟ​ರ್ಸ್ ಪಾಸ್‌?

By Kannadaprabha News  |  First Published Jun 30, 2021, 9:23 AM IST
  •  2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು
  • ವಿದ್ಯಾರ್ಥಿಗಳಂತೆ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ರದ್ದು
  • ಶಿಕ್ಷಣ ಇಲಾಖೆಯು ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ 

ಬೆಂಗಳೂರು (ಜೂ.30):  ಹೊಸ (ಫ್ರೆಷ​ರ್ಸ್) ವಿದ್ಯಾರ್ಥಿಗಳಂತೆ ಪುನರಾವರ್ತಿತ ವಿದ್ಯಾರ್ಥಿಗಳಿಗೂ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ರಚಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎನ್ನಲಾಗಿದೆ.

ತಜ್ಞರ ಈ ವರದಿಯನ್ನು ಸರ್ಕಾರ ನ್ಯಾಯಾಲಯದ ಮುಂದಿಡಲಿದ್ದು, ಮುಂದಿನ ವಿಚಾರಣೆ ವೇಳೆ ಹೈಕೋರ್ಟ್‌ ಸಮ್ಮತಿಸಿದರೆ ಇದರೊಂದಿಗೆ ಸುಮಾರು ಒಂದು ಲಕ್ಷದಷ್ಟುಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ಇಲ್ಲದೆ ಈ ಬಾರಿ ದ್ವಿತೀಯ ಪಿಯುಸಿ ಪಾಸಾಗುವ ಭಾಗ್ಯ ದೊರೆಯಲಿದೆ. ಈಗಾಗಲೇ ಸರ್ಕಾರ ದ್ವಿತೀಯ ಪಿಯುಸಿಯ 5.86 ಲಕ್ಷ ಹೊಸ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಿದೆ. ಈಗ ಈ ಪಟ್ಟಿಗೆ ಇನ್ನೂ ಒಂದು ಲಕ್ಷದಷ್ಟುವಿದ್ಯಾರ್ಥಿಗಳು ಸೇರ್ಪಡೆಯಾಗಲಿದ್ದಾರೆ. ಇದರಿಂದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಅವಕಾಶ ಒಟ್ಟು 6.86 ಲಕ್ಷ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

Latest Videos

undefined

ಸಿಎಂ ಜೊತೆ ಚರ್ಚಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿ : ಸುಧಾಕರ್ .

ಕೋವಿಡ್‌ ಹಿನ್ನೆಲೆಯಲ್ಲಿ ಪಿಯು ಇಲಾಖೆ ದ್ವಿತೀಯ ಪಿಯುಸಿಯ ಹೊಸ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ರದ್ದುಪಡಿಸಿ ಅವರ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ದ್ವಿತೀಯ ಪಿಯುಸಿ ಫಲಿತಾಂಶ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಹೈಕೋರ್ಟ್‌ ಮೆಟ್ಟಿಲೇರಿರುವ ಕೆಲ ಪುನರಾವರ್ತಿತ ಅಭ್ಯರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಿಗೂ ಪರೀಕ್ಷೆ ರದ್ದುಪಡಿಸುವಂತೆ ಕೋರಿದ್ದರು. ಹೈಕೋರ್ಟ್‌ ಇದರ ಸಾಧ್ಯಾಸಾಧ್ಯತೆ ಪರಿಶೀಲಿಸಲು ತಿಳಿಸಿತ್ತು. ಪರಿಶೀಲಿಸಿ ವರದಿ ನೀಡಲು ಇಲಾಖೆಯು ಒಂದು ಸಮಿತಿ ರಚಿಸಿತ್ತು.

ಜುಲೈ 21 ರಿಂದ 27ರೊಳಗೆ SSLC ಪರೀಕ್ಷೆ?: 40 ಅಂಕ, 6 ವಿಷಯಗಳ ಎಕ್ಸಾಂ!

ಫಲಿತಾಂಶಕ್ಕೂ ವರದಿ: ಈ ಮಧ್ಯೆ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ ಫಲಿತಾಂಶ ಆಧರಿಸಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಹೇಗೆ ನೀಡಬೇಕೆಂದು ಕೂಡ ಸಮಿತಿಯು ಇಲಾಖೆಗೆ ವರದಿ ನೀಡಿದೆ ಎಂದು ತಿಳಿದು ಬಂದಿದೆ. ಇಲಾಖೆ ಈಗ ಅದರಂತೆಯೇ ಫಲಿತಾಂಶ ಸಿದ್ಧಪಡಿಸುವ ಸಾಧ್ಯತೆ ಇದೆ.

click me!