ನಿವೃತ್ತಿಯಿಂದ ಖಾಲಿಯಾಗುವ ಶಿಕ್ಷಕ ಹುದ್ದೆ ವರ್ಷ ಮೊದಲೇ ಭರ್ತಿ: ಸಿಎಂ ಬೊಮ್ಮಾಯಿ

By Govindaraj S  |  First Published Sep 6, 2022, 4:45 AM IST

‘ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ಸರ್ಕಾರಿ ಶಾಲೆಗಳಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ ಶೈಕ್ಷಣಿಕ ವರ್ಷದ ಆರಂಭದಿಂದಲೇ ನಿವೃತ್ತಿ ಹೊಂದಿದವರ ಸ್ಥಾನಗಳಿಗೆ ಸ್ಥಳ ನಿಯುಕ್ತಿಗೊಳಿಸುವ ವ್ಯವಸ್ಥೆ ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಬೆಂಗಳೂರು (ಸೆ.06): ‘ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ಸರ್ಕಾರಿ ಶಾಲೆಗಳಲ್ಲಿ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ ಶೈಕ್ಷಣಿಕ ವರ್ಷದ ಆರಂಭದಿಂದಲೇ ನಿವೃತ್ತಿ ಹೊಂದಿದವರ ಸ್ಥಾನಗಳಿಗೆ ಸ್ಥಳ ನಿಯುಕ್ತಿಗೊಳಿಸುವ ವ್ಯವಸ್ಥೆ ಜಾರಿಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್‌ ಅವರ ಜನ್ಮದಿನದ ಅಂಗವಾಗಿ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ‘ಶಿಕ್ಷಕರ ದಿನಾಚರಣೆ’ ಕಾರ್ಯಕ್ರಮದಲ್ಲಿ 31 ಮಂದಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು, 10 ಜನ ಪಿಯು ಕಾಲೇಜು ಉಪನ್ಯಾಸಕರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ, ಉಪನ್ಯಾಸಕ ಪ್ರಶಸ್ತಿ ಹಾಗೂ ಎಂಟು ಸರ್ಕಾರಿ ಶಾಲೆಗಳಿಗೆ ‘ಸ್ವಾಭಿಮಾನಿ ಸಾರ್ವಜನಿಕ ಶಾಲೆ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

Tap to resize

Latest Videos

ಸಿಇಟಿ ಪ್ರಕರಣದಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡಲ್ಲ: ಸಿಎಂ ಬೊಮ್ಮಾಯಿ

‘ಈಗ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಪ್ರತೀ ವರ್ಷ ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆಯಷ್ಟೇ ಹೊಸ ಶಿಕ್ಷಕರನ್ನು ಅದರ ಹಿಂದಿನ ವರ್ಷವೇ ನೇಮಿಸಿ ತರಬೇತಿಯನ್ನೂ ನೀಡಿ ಶೈಕ್ಷಣಿಕ ವರ್ಷ ಆರಂಭದಲ್ಲೇ ನಿವೃತ್ತಿ ಹೊಂದಿದವರ ಸ್ಥಾನಗಳಿಗೆ ಸ್ಥಳ ನಿಯುಕ್ತಿಗೊಳಿಸಲು ವ್ಯವಸ್ಥೆ ಮಾಡಲಾಗುವುದು’ ಎಂದರು. ‘ನಮ್ಮ ಸರ್ಕಾರ ಶಿಕ್ಷಣ ಇಲಾಖೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 25 ಸಾವಿರ ಕೋಟಿ ರು. ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. ಒಂದೇ ವರ್ಷದಲ್ಲಿ 8101 ಶಾಲಾ ಕೊಠಡಿಗಳನ್ನು ನಿರ್ಮಿಸುತ್ತಿದ್ದು ಇದು ಇತಿಹಾಸದಲ್ಲೇ ಮೊದಲು. 

ಮುಂದಿನ ಮೂರು ವರ್ಷಗಳಲ್ಲಿ ಇನ್ನೂ 25 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು. ಎಷ್ಟೇ ಖರ್ಚಾಗಲಿ 2023ರ ಆಗಸ್ಟ್‌ 15ರೊಳಗೆ ಎಲ್ಲ ಸರ್ಕಾರಿ ಶಾಲೆಗಳಲ್ಲೂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಲಾಗುವುದು’ ಎಂದರು. ‘ಜೊತೆಗೆ 4 ಸಾವಿರ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸುತ್ತೇವೆ’ ಎಂದೂ ಘೋಷಿಸಿದರು. ‘ಹೊಸ ಶಾಲೆ ಆರಂಭಿಸಲು ಮಾನದಂಡಗಳನ್ನು ಅನುಸರಿಸದೆ ಅಧಿಕಾರಿಗಳು ನಿರಾಕ್ಷೇಪಣಾ ಪತ್ರ(ಎನ್‌ಒಸಿ) ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತದೆ. ಇದನ್ನು ಸಹಿಸುವುದಿಲ್ಲ. 

ಇಂತಹದ್ದಕ್ಕೆ ಪ್ರೋತ್ಸಾಹ ನೀಡುವವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳ ಸರಳೀಕರಣ ಹಾಗೂ ಶಿಸ್ತನ್ನು ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಆ.ದೇವೇಗೌಡ, ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ.ಎಂ.ಆರ್‌.ದೊರೆಸ್ವಾಮಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌, ಆಯುಕ್ತ ಡಾ.ಆರ್‌.ವಿಶಾಲ್‌ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ನಿಯಮ ಪಾಲಿಸದಿದ್ದರೆ ಕ್ರಮ: ‘ಶಿಕ್ಷಣದ ಗುಣಮಟ್ಟಸುಧಾರಣೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದ್ದು, ಅವುಗಳನ್ನು ಎಲ್ಲ ಅಧಿಕಾರಿಗಳು, ಶಾಲಾ ಆಡಳಿತ ಮಂಡಳಿಗಳು ಹಾಗೂ ಶಿಕ್ಷಕರು ಕಡ್ಡಾಯವಾಗಿ ಪಾಲಿಸಬೇಕು. ಪಾಲಿಸದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು’ ಎಂದು ಇದೇ ವೇಳೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ, ಅಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಶಿಕ್ಷಕರ ಕರ್ತವ್ಯ ನಿರ್ವಹಿಸಲು ಉತ್ತಮ ವಾತಾವರಣ, ಕರ್ತವ್ಯ ಪರಿಸರವನ್ನೂ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಲಿದ್ದು, ಮಾನವೀಯತೆ ಹಾಗೂ ವಾಸ್ತವಾಂಶದ ಆಧಾರದ ಮೇಲೆ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು’.

click me!