ಕರ್ನಾಟಕದಲ್ಲಿ ರಾಷ್ಟ್ರೀಯ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿ: ಸಚಿವ ಎಂ.ಸಿ.ಸುಧಾಕರ

By Kannadaprabha News  |  First Published Jul 1, 2023, 1:06 PM IST

ರಾಜ್ಯ ಶಿಕ್ಷಣ ನೀತಿ ಜಾರಿಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲೇ ನಾವು ಸ್ಪಷ್ಟವಾಗಿ ಹೇಳಿದ್ದೇವೆ. 2 ವರ್ಷಗಳ ಹಿಂದೆ ಹಿಂದಿನ ಸರ್ಕಾರದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು. ಅದರಲ್ಲಿ ಕೆಲ ನ್ಯೂನತೆಗಳಿವೆ. ಈ ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತೇವೆ: ಎಂ.ಸಿ.ಸುಧಾಕರ 


ಬೆಳಗಾವಿ(ಜು.01):  ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಹೇಳಿದರು. ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿ ಜಾರಿಯನ್ನು ನಮ್ಮ ಪಕ್ಷದ ಪ್ರಣಾಳಿಕೆಯಲ್ಲೇ ನಾವು ಸ್ಪಷ್ಟವಾಗಿ ಹೇಳಿದ್ದೇವೆ. 2 ವರ್ಷಗಳ ಹಿಂದೆ ಹಿಂದಿನ ಸರ್ಕಾರದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು. ಅದರಲ್ಲಿ ಕೆಲ ನ್ಯೂನತೆಗಳಿವೆ. ಈ ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತೇವೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇಡೀ ದೇಶದಲ್ಲಿ ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲಿ ಅನುಷ್ಠಾನ ಮಾಡುವ ಕೆಲಸ ಆಗಿಲ್ಲ. ವಿದ್ಯಾರ್ಥಿಗಳು ಪದವಿ ಪಡೆದು ಹೊರಗೆ ಹೋದಾಗ ಭವಿಷ್ಯದಲ್ಲಿ ಏನು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಜಾಗತಿಕರಣ ದೊಡ್ಡ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು ಎಂದು ತಿಳಿಸಿದರು.

Latest Videos

undefined

ಕರ್ನಾಟಕದಲ್ಲಿ ಮತ್ತೆ ಎಸ್‌​ಇಪಿ ಜಾರಿ: ಸಚಿವ ಡಾ. ಸುಧಾಕರ್‌

ಯಾವುದೇ ರೀತಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದ ರೀತಿಯಲ್ಲಿ ಪಠ್ಯದಲ್ಲಿ ಅಮೂಲಾಗ್ರ ಬದಲಾವಣೆಗೆ ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸ್ಪಷ್ಟವಾದ ರೂಪ ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳ ಹಿತದೃಷ್ಟಿಗಮನದಲ್ಲಿಟ್ಟುಕೊಂಡು ಪಠ್ಯಕ್ರಮ ಬದಲಾವಣೆ ಮಾಡಲಾಗುವುದು ಎಂದರು.

ಕಿತ್ತೂರು ರಾಣಿ ಚನ್ನಮ್ಮ ಚರಿತ್ರೆ ಕೇಳಿದರೆ ಮನಸು ರೋಮಾಂಚನಗೊಳ್ಳುತ್ತದೆ. ಚನ್ನಮ್ಮನ ಜೊತೆಗೆ ನಿಂತು ಹೋರಾಡಿದ ಮಹಾಪುರುಷ ಸಂಗೊಳ್ಳಿ ರಾಯಣ್ಣ. ಸಂಗೊಳ್ಳಿ ರಾಯಣ್ಣನ ಸಾಹಸ, ಬಲಿದಾನ ಎಲ್ಲವೂ ಪ್ರೇರಣಾದಾಯಕ. ದೇಶದಲ್ಲಿಂದು ಚರಿತ್ರೆಯನ್ನು ತಿರುಚುವ ಕೆಲಸ ನಡೆಯುತ್ತಿದೆ. ಆದರೆ, ಇಂಥ ಮಹಾನಾಯಕರ ಚರಿತ್ರೆ ಯಾರಿಂದಲೂ ತಿರುಚಲು ಆಗುವುದಿಲ್ಲ ಎಂದರು.

ಎನ್‌ಇಪಿ ರದ್ದು ಬಗ್ಗೆ ಚರ್ಚಿಸಿ ತೀರ್ಮಾನ: ಸಚಿವ ಸುಧಾಕರ್‌

ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್‌ ಸೇಠ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಎಚ್‌.ವಿಶ್ವನಾಥ, ನಾಗರಾಜ ಯಾದವ, ಆರ್‌ಸಿಯು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಕೆ.ರವಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ವಿಶೇಷ ಅಧಿಕಾರಿ ಡಾ.ಎಂ.ಜಯಪ್ಪ, ಆರ್‌ಸಿಯು ಕುಲಸಚಿವೆ ರಾಜಶ್ರೀ ಜೈನಾಪುರೆ ಮೊದಲಾದವರು ಉಪಸ್ಥಿತರಿದ್ದರು.

15 ಸಾವಿರ ಅತಿಥಿ ಶಿಕ್ಷಕರು ನಮ್ಮ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿಂದಿನ ಸರ್ಕಾರ ಸಹಾಯಕ ಉಪನ್ಯಾಸಕರ ಹುದ್ದೆಗಳ ನೇಮಕಾತಿಯ ಗೊಂದಲ ಇತ್ತು. ಈಗ ನಮ್ಮ ಸರ್ಕಾರ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಇದಕ್ಕೆ ನಿರೀಕ್ಷಿತ ಅನುದಾನ ಒದಗಿಸಿಲ್ಲ. ಹಲವು ಸವಾಲುಗಳಿವೆ ಅಂತ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ತಿಳಿಸಿದ್ದಾರೆ.  

click me!