3 ಜಿಲ್ಲೆಗಳ 150 ವಿದ್ಯಾರ್ಥಿಗಳಿಗೆ ಸೋಂಕು: ಶಾಲೆ ಮುಚ್ಚಲು ಸೂಚನೆ!

By Suvarna News  |  First Published Nov 19, 2020, 4:44 PM IST

 ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಾರ್ಯಾರಂಭ| ಹರಾರ‍ಯಣದ ಮೂರು ಜಿಲ್ಲೆಗಳಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೊರೋನಾ ಸೋಂಕು 


ಚಂಡೀಗಢ(ನ.19): ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಾರಾರ‍ಯರಂಭ ಮಾಡಿರುವ ಬೆನ್ನಲ್ಲೇ, ಹರಾರ‍ಯಣದ ಮೂರು ಜಿಲ್ಲೆಗಳಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ಕೊರೋನಾ ಪತ್ತೆಯಾದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಬುಧವಾರ ಮಾಹಿತಿ ನೀಡಿದ ಅಧಿಕಾರಿಗಳು, ರೆವಾರಿ ಜಿಲ್ಲೆಯ 13 ಶಾಲೆಗಳು 91 ವಿದ್ಯಾರ್ಥಿಗಳು, ಜಿಂದ್‌ ಜಿಲ್ಲೆಯ ವಿವಿಧ ಶಾಲೆಗಳ 30 ವಿದ್ಯಾರ್ಥಿಗಳು ಮತ್ತು 10 ಶಿಕ್ಷಕರು ಮತ್ತು ಝಜ್ಜರ್‌ ಜಿಲ್ಲೆಯ 34 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.

Latest Videos

ಸೋಂಕಿಗೆ ತುತ್ತಾದವರೆಲ್ಲಾ 9-12ನೇ ತರಗತಿವರೆಗಿನ ವಿದ್ಯಾರ್ಥಿಗಳು. ರಾಜ್ಯದಲ್ಲಿ ನ.2ರಿಂದ ಶಾಲಾ-ಕಾಲೇಜು ಆರಂಭವಾಗಿತ್ತು.

click me!