
ಸ್ವಾತಂತ್ರ್ಯ ದಿನಾಚರಣೆ ಪ್ರಬಂಧ ಕನ್ನಡದಲ್ಲಿ: 10 ಸಾಲು, ಚಿಕ್ಕ ಮತ್ತು ದೀರ್ಘ ಪ್ರಬಂಧ!
ಪ್ರತಿ ವರ್ಷ ಆಗಸ್ಟ್ 15ರಂದು ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. 1947ರ ಆಗಸ್ಟ್ 15ರಂದು ಭಾರತವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದಿತು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ದಿನ ಇದಾಗಿದೆ.
10 ಸಾಲುಗಳ ಸ್ವಾತಂತ್ರ್ಯ ದಿನಾಚರಣೆ ಪ್ರಬಂಧ..!
ಸ್ವಾತಂತ್ರ್ಯ ದಿನಾಚರಣೆ ಚಿಕ್ಕ ಪ್ರಬಂಧ!
ಸ್ವಾತಂತ್ರ್ಯ ದಿನಾಚರಣೆ ಭಾರತದ ಪ್ರಮುಖ ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾಗಿದೆ. ಪ್ರತಿವರ್ಷ ಆಗಸ್ಟ್ 15ರಂದು ದೇಶಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. 1947ರಲ್ಲಿ ಇದೇ ದಿನ ಭಾರತವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆಯಿತು.
ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕ ನಾಯಕರು ಮತ್ತು ಹೋರಾಟಗಾರರು ಶ್ರಮಿಸಿದರು. ಅವರ ತ್ಯಾಗ ಮತ್ತು ಹೋರಾಟದ ಫಲವಾಗಿ ನಮಗೆ ಸ್ವತಂತ್ರ ಭಾರತ ದೊರೆತಿದೆ.
ಸ್ವಾತಂತ್ರ್ಯ ದಿನದಂದು ಶಾಲೆಗಳು, ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನಡೆಯುತ್ತದೆ. ದೇಶಭಕ್ತಿ ಗೀತೆಗಳು, ಭಾಷಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ.
ಸ್ವಾತಂತ್ರ್ಯ ನಮಗೆ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ನೀಡಿದೆ. ದೇಶದ ಕಾನೂನುಗಳನ್ನು ಪಾಲಿಸುವುದು, ಪರಿಸರವನ್ನು ರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಮತ್ತು ದೇಶದ ಏಕತೆಯನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.
ಸ್ವಾತಂತ್ರ್ಯ ದಿನಾಚರಣೆ ದೀರ್ಘ ಪ್ರಬಂಧ!
ಸ್ವಾತಂತ್ರ್ಯ ದಿನಾಚರಣೆ ಭಾರತೀಯರ ಪಾಲಿಗೆ ಹೆಮ್ಮೆ ಮತ್ತು ಭಾವನೆಯ ದಿನ. ಶತಮಾನಗಳ ಬ್ರಿಟಿಷ್ ಆಡಳಿತದ ನಂತರ ಭಾರತವು 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಪಡೆಯಿತು. ಈ ದಿನವು ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು.
ಸ್ವಾತಂತ್ರ್ಯ ಪಡೆಯುವುದು ಸುಲಭವಾಗಿರಲಿಲ್ಲ. ಅನೇಕ ಹೋರಾಟಗಾರರು ತಮ್ಮ ಜೀವನವನ್ನು ದೇಶಕ್ಕಾಗಿ ಅರ್ಪಿಸಿದರು. ಅಸಹಕಾರ ಚಳವಳಿ, ಉಪ್ಪಿನ ಸತ್ಯಾಗ್ರಹ ಮತ್ತು ಭಾರತ ಬಿಟ್ಟು ತೊಲಗಿ ಚಳವಳಿಯಂತಹ ಹೋರಾಟಗಳು ಸ್ವಾತಂತ್ರ್ಯ ಚಳವಳಿಗೆ ಬಲ ನೀಡಿದವು. ಅಹಿಂಸೆಯ ಮಾರ್ಗವನ್ನು ಅನುಸರಿಸಿದ ಮಹಾತ್ಮ ಗಾಂಧೀಜಿಯವರ ನಾಯಕತ್ವ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿತು. ಇದೇ ವೇಳೆ ಅನೇಕ ಕ್ರಾಂತಿಕಾರಿಗಳು ತಮ್ಮ ಧೈರ್ಯ ಮತ್ತು ತ್ಯಾಗದ ಮೂಲಕ ದೇಶದ ಜನರಲ್ಲಿ ರಾಷ್ಟ್ರೀಯತೆಯ ಭಾವನೆ ಮೂಡಿಸಿದರು.
ಇಂದು ಸ್ವಾತಂತ್ರ್ಯ ದಿನವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನಡೆಯುತ್ತದೆ. ದೇಶದ ವಿವಿಧ ಭಾಗಗಳಲ್ಲಿ ಶಾಲಾ-ಕಾಲೇಜುಗಳು, ಸರ್ಕಾರಿ ಸಂಸ್ಥೆಗಳು ಮತ್ತು ಸಂಘಟನೆಗಳು ಧ್ವಜಾರೋಹಣ, ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.
ಸ್ವಾತಂತ್ರ್ಯದ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳುವುದು ನಮ್ಮ ಕರ್ತವ್ಯ. ದೇಶದ ಪ್ರಗತಿಗೆ ಪ್ರತಿಯೊಬ್ಬ ನಾಗರಿಕನ ಕೊಡುಗೆ ಅಗತ್ಯ. ಏಕತೆ, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮದೊಂದಿಗೆ ಮುನ್ನಡೆಯುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತವನ್ನು ನಿರ್ಮಿಸೋಣ.
ಜೈ ಹಿಂದ್! ವಂದೇ ಮಾತರಂ!